
ನವದೆಹಲಿ (ಸೆ. 25): ದೇಶದಲ್ಲಿ ಸರಾಸರಿ 10 ಲಕ್ಷ ಜನರಿಗೆ 19 ನ್ಯಾಯಾಧೀಶರು ಕಾರ್ಯನಿರ್ವಹಿಸುತ್ತಿದ್ದಾರೆ. ಒಟ್ಟಾರೆ ವಿವಿಧ ಹಂತದ ನ್ಯಾಯಾಲಯಗಳಲ್ಲಿ 6000 ಜಡ್ಜ್‌ಗಳ ಕೊರತೆ ಇದೆ ಎಂದು ಕೇಂದ್ರ ಕಾನೂನು ಸಚಿವಾಲಯದ ಅಂಕಿಅಂಶಗಳು ಹೇಳಿವೆ.
1987ರಲ್ಲಿ ಪ್ರತಿ 10 ಲಕ್ಷ ಜನರಿಗೆ 10 ಜಡ್ಜ್‌ಗಳಿದ್ದರು. ಅದನ್ನು ಕನಿಷ್ಠ 50ಕ್ಕೆ ಏರಿಸುವಂತೆ ಕಾನೂನು ಆಯೋಗ ಶಿಫಾರಸು ಮಾಡಿದ್ದರು ಕೂಡಾ ಇದುವರೆಗೆ ಅದು ಸೂಕ್ತ ಪ್ರಮಾಣದಲ್ಲಿ ಜಾರಿಗೆ ಬಂದಿಲ್ಲ ಎಂಬುದನ್ನು ಅಂಕಿಅಂಶಗಳು ಬಹಿರಂಗಪಡಿಸಿವೆ.
ಕೆಳಹಂತದ ನ್ಯಾಯಾಲಯಗಳಿಗೆ 22474 ಜಡ್ಜ್ ಹುದ್ದೆ ಮಂಜೂರಾಗಿದ್ದು, ಆ ಪೈಕಿ 16726 ಹುದ್ದೆ ಮಾತ್ರ ಭರ್ತಿಯಾಗಿವೆ. 24 ಹೈಕೋರ್ಟ್‌ಗಳಲ್ಲಿ 1079 ಜಡ್ಜ್ ಹುದ್ದೆ ಮಂಜೂರಾಗಿದ್ದು, 673 ಜಡ್ಜ್‌ಗಳು ಮಾತ್ರ ಕಾರ್ಯನಿರ್ವಹಿಸುತ್ತಿದ್ದಾರೆ. ಸುಪ್ರೀಂಕೋರ್ಟ್‌ಗೆ 31 ಹುದ್ದೆ ಮಂಜೂರಾಗಿದ್ದು, 6 ಹುದ್ದೆ ಖಾಲಿ ಇದೆ. ಹೀಗೆ ಒಟ್ಟಾರೆ 6160 ಹುದ್ದೆ ಖಾಲಿ ಇದೆ.
ಕೆಳ ಹಂತದ ನ್ಯಾಯಾಲಯಗಳಲ್ಲಿ 2.76 ಕೋಟಿ ಕೇಸು ವಿಚಾರಣೆ ಹಂತದಲ್ಲಿದ್ದು, ಅಲ್ಲೇ ಗರಿಷ್ಠ ಅಂದರೆ 5748 ಜಡ್ಜ್ ಹುದ್ದೆಗಳು ಭರ್ತಿಯಾಗಬೇಕಿದೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.