
ನವದೆಹಲಿ (ಜ.2): ಭಾರತದಲ್ಲಿ ದಿನದಿಂದ ದಿನಕ್ಕೆ ಜನಸಂಖ್ಯೆಯ ಪ್ರಮಾಣ ಅತ್ಯಧಿಕ ಪ್ರಮಾಣದಲ್ಲಿ ಏರಿಕೆಯಾಗುತ್ತಿದೆ. ಹೊಸ ವರ್ಷದ ದಿನ ವಿಶ್ವದಲ್ಲಿ ಎಷ್ಟು ಮಕ್ಕಳು ಜನಿಸಿದ್ದಾರೆ ಎಂದು ಯುನಿಸೆಫ್ ಬಿಡುಗಡೆ ಮಾಡಿದ ಅಂಕಿ ಅಂಶಗಳ ಪ್ರಕಾರ ವಿಶ್ವದಲ್ಲಿ ಹೊಸ ವರ್ಷದ ದಿನ ಒಟ್ಟು 386 000 ಮಕ್ಕಳು ಜನಿಸಿದ್ದು, ಭಾರತದಲ್ಲಿ ಜನಿಸಿದ ಮಕ್ಕಳ ಸಂಖ್ಯೆಯೆ ಹೆಚ್ಚಿದೆ.
ಭಾರತದಲ್ಲಿ 69070 ಮಕ್ಕಳು ಜನಿಸಿದ್ದು, 2ನೇ ಸ್ಥಾನದಲ್ಲಿ ಚೀನಾ ಇದೆ. ಚೀನಾದಲ್ಲಿ ಹೊಸ ವರ್ಷದಂದು 44,760 ಮಕ್ಕಳು ಜನಿಸಿದ್ದಾರೆ. ಇನ್ನು ನೈಜೀರಿಯಾ ಮೂರನೇ ಸ್ಥಾನದಲ್ಲಿದ್ದು, 20, 210 ಮಕ್ಕಳು ಜನಿಸಿದ್ದಾರೆ. ಉಳಿದಂತೆ ಇಂಡೋನೇಷಿಯಾ ನಾಲ್ಕನೇ ಸ್ಥಾನದಲ್ಲಿದ್ದರೆ ಅಮೆರಿಕವೂ 5ನೇ ಸ್ಥಾನದಲ್ಲಿದೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.