
ಗಾಂಧೀಜಿ ಅವರ ಸಂದೇಶಗಳನ್ನು ರಾಷ್ಟ್ರ ಮತ್ತು ಅಂತಾರಾಷ್ಟ್ರೀಯ ಮಟ್ಟದಲ್ಲಿ ಪ್ರಚಾರ ಮಾಡಲು ಸರ್ಕಾರ ನಿರ್ಧರಿಸಿದೆ. ಈ ನಿಟ್ಟಿನಲ್ಲಿ ರಾಷ್ಟ್ರಪತಿ ರಾಮನಾಥ್ ಕೋವಿಂದ್, ಪ್ರಧಾನಿ ನರೇಂದ್ರ ಮೋದಿ ಹಾಗೂ ಎಲ್ಲಾ ರಾಜ್ಯಗಳ ಮುಖ್ಯಮಂತ್ರಿಗಳನ್ನು ಒಳಗೊಂಡ ರಾಷ್ಟ್ರೀಯ ಸಮಿತಿಯೊಂದನ್ನು ರಚಿಸಲಾಗಿದೆ. ರಾಜಕೀಯ ಪ್ರತಿನಿಧಿಗಳು, ಗಾಂಧಿವಾಧಿಗಳು, ಚಿಂತಕರು ಈ ಸಮಿತಿಯಲ್ಲಿದ್ದಾರೆ. ಗಾಂಧೀಜಿ ಅವರ 150ನೇ ಜನ್ಮ ವರ್ಷಾಚರಣೆ ನಿಮಿತ್ತ ಹಮ್ಮಿಕೊಂಡ ಕಾರ್ಯಕ್ರಮಗಳು, ಯೋಜನೆಗಳಿಗೆ ಈ ಸಮಿತಿ ಮಾರ್ಗದರ್ಶನ ಮಾಡಲಿದೆ. 2018 ಅ.2ರಿಂದ 2020 ಅ.2ರ ವರೆಗೂ ಸರ್ಕಾರದ ವತಿಯಿಂದ ವಿವಿಧ ಕಾರ್ಯಕ್ರಮಗಳು ಜರುಗಲಿವೆ.