
ಶ್ರೀನಗರ(ಫೆ.12): ಕಣಿವೆ ರಾಜ್ಯದಲ್ಲಿ ರಕ್ತಪಾತ ನಿಲ್ಲಬೇಕಾದರೆ ಕೇಂದ್ರ ಸರ್ಕಾರ ಮಾತುಕತೆಗೆ ಮುಂದಾಗಬೇಕು ಎಂದು ಜಮ್ಮು ಮತ್ತು ಕಾಶ್ಮೀರದ ಮುಖ್ಯಮಂತ್ರಿ ಮೆಹಬೂಬ ಮುಫ್ತಿ ಕೇಂದ್ರ ಸರ್ಕಾರವನ್ನು ಆಗ್ರಹಿಸಿದ್ದಾರೆ.
ವಿಧಾನಸಭೆಯಲ್ಲಿ ಮಾತನಾಡಿದ ಅವರು, ಕಣಿವೆ ರಾಜ್ಯದಲ್ಲಿ ರಕ್ತಪಾತ ನಿಲ್ಲಬೇಕಾದರೆ ಕೇಂದ್ರ ಸರ್ಕಾರ ಮಾತುಕತೆಗೆ ಮುಂದಾಗಬೇಕು. ನನ್ನನ್ನು ಕೆಲ ಮಾಧ್ಯಮ ಮಿತ್ರರು ದೇಶ ವಿರೋಧಿ ಎಂದು ಹಣೆಪಟ್ಟಿ ಕಟ್ಟಿದ್ದಾರೆ. ಆದರೆ ನಾನು ಇದ್ಯಾವುದಕ್ಕೂ ತಲೆ ಕೆಡಿಸಿಕೊಳ್ಳುವುದಿಲ್ಲ. ಜಮ್ಮು ಕಾಶ್ಮೀರದ ಜನತೆ ತೊಂದರೆ ಅನುಭವಿಸುತ್ತಿದ್ದಾರೆ. ನಮಗೆ ಮಾತುಕತೆಯಲ್ಲದೆ ಯುದ್ಧದ ಆಯ್ಕೆ ಬೇಕಾಗಿಲ್ಲ'ಎಂದು ತಿಳಿಸಿದರು.
ಸುಪ್ರೀಂ ಕೋರ್ಟ್ ಕೂಡ ಇಂದು ಮೇಜರ್ ಆದಿತ್ಯ ಕುಮಾರ್ ವಿರುದ್ಧದ ನಾಗರಿಕರನ್ನು ಕೊಂದ ಪ್ರಕರಣದಲ್ಲಿ ತಡೆಯಾಜ್ಞೆ ನೀಡಿ ಕೇಂದ್ರ ಹಾಗೂ ರಾಜ್ಯ ಸರ್ಕಾರಕ್ಕೆ ನೋಟಿಸ್ ನೀಡಿದೆ. ಮೇಜರ್ ಆದಿತ್ಯ ವಿರುದ್ಧ ಕಾಶ್ಮಿರದ ಶೋಪಿಯನ್ ಜಿಲ್ಲೆಯಲ್ಲಿ ನಾಗರಿಕರ ಕೊಂದ ಆರೋಪದಲ್ಲಿ ಸ್ಥಳೀಯ ಪೊಲೀಸರು ಎಫ್'ಐಆರ್ ದಾಖಲಿಸಿದ್ದರು. ಮೇಜರ್ ತಂದೆ ಶಿಕ್ಷೆ ನೀಡದಂತೆ ಸುಪ್ರೀಂ ಕೋರ್ಟ್ ಮೋರೆ ಹೋಗಿದ್ದರು.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.