ಕಾಶ್ಮೀರ ಕಣಿವೆಯಲ್ಲಿ ಶಾಂತಿ ಸ್ಥಾಪಿಸಲು ಭಾರತ ಪಾಕ್ ಸಹಕರಿಸಬೇಕು

By Web DeskFirst Published Oct 14, 2016, 12:50 PM IST
Highlights

ಕಾಶ್ಮೀರ ಕಣಿವೆಯಲ್ಲಿ ಬಹುದಿನಗಳಿಂದ ಅಶಾಂತಿ ತಲೆದೂರಿದೆ. ಭಾರತ ಮತ್ತು ಪಾಕ್ ಕಾಶ್ಮೀರದಲ್ಲಿ ಶಾಂತಿಯನ್ನು ಸ್ಥಾಪಿಸುವ ಅಗತ್ಯವಿದೆ ಎಂದು  ನ್ಯಾಷನಲ್ ಕಾನ್ಫರೆನ್ಸ್ ಅಧ್ಯಕ್ಷ ಫಾರೂಕ್ ಅಬ್ದುಲ್ಲಾ ಹೇಳಿದ್ದಾರೆ.

ಜಮ್ಮು ಕಾಶ್ಮೀರ (ಅ.14): ಕಾಶ್ಮೀರ ಕಣಿವೆಯಲ್ಲಿ ಬಹುದಿನಗಳಿಂದ ಅಶಾಂತಿ ತಲೆದೂರಿದೆ. ಭಾರತ ಮತ್ತು ಪಾಕ್ ಕಾಶ್ಮೀರದಲ್ಲಿ ಶಾಂತಿಯನ್ನು ಸ್ಥಾಪಿಸುವ ಅಗತ್ಯವಿದೆ ಎಂದು  ನ್ಯಾಷನಲ್ ಕಾನ್ಫರೆನ್ಸ್ ಅಧ್ಯಕ್ಷ ಫಾರೂಕ್ ಅಬ್ದುಲ್ಲಾ ಹೇಳಿದ್ದಾರೆ.

ಸರ್ಜಿಕಲ್ ದಾಳಿ ನಡೆದಿದೆಯೋ ಇಲ್ಲವೋ ಅನ್ನುವುದರ ಬಗ್ಗೆ ನಾನು ಮಾತನಾಡುತ್ತಿಲ್ಲ. ಶಾಂತಿಯ ಬಗ್ಗೆ ನಾವು ಮಾತನಾಡುತ್ತಿದ್ದೇವೆ. ಭಾರತ ಪಾಕ್ ಒಟ್ಟಿಗೆ ಕುಳಿತು ತಮ್ಮ ತಮ್ಮ ಸಮಸ್ಯೆಗಳನ್ನು ಬಗೆಹರಿಸಿಕೊಳ್ಳಬೇಕು. ರಾಜಕೀಯ ಪ್ರಕ್ರಿಯೆಗಳಿಂದ ಕಣಿವೆಯಲ್ಲಿ ಶಾಂತಿ ಸ್ಥಾಪಿಸಲು ಸಾಧ್ಯವಿದೆ ಎಂದು ಫಾರೂಕ್ ಅಬ್ದುಲ್ಲಾ ಹೇಳಿದ್ದಾರೆ.

click me!