ಕಾಶ್ಮೀರ ವಿಚಾರವನ್ನು ಪಾಕ್ ಐಸಿಜೆ ಮುಂದೆ ತೆಗೆದುಕೊಂಡು ಹೋಗಲು ಸಾಧ್ಯವಿಲ್ಲ: ಸುಷ್ಮಾ ಸ್ವರಾಜ್

By Suvarna Web DeskFirst Published Jun 5, 2017, 5:40 PM IST
Highlights

ಭಾರತವು ಪಾಕಿಸ್ತಾನದೊಂದಿಗೆ ದ್ವಿಪಕ್ಷೀಯ ಮಾತುಕತೆ ಮೂಲಕ ಎಲ್ಲಾ ಸಮಸ್ಯೆಗಳನ್ನು ಬಗೆಹರಿಸಿಕೊಳ್ಳಲು ಇಚ್ಚಿಸುತ್ತದೆ. ಆದರೆ ಮಾತುಕತೆ ಹಾಗೂ ಭಯೋತ್ಪಾದನೆ ಒಟ್ಟೊಟ್ಟಿಗೆ ಹೋಗಲಾರದು ಎಂದು ಸುಷ್ಮಾ ಸ್ವರಾಜ್ ಹೇಳಿದ್ದಾರೆ.

ನವದೆಹಲಿ (ಜೂ.05): ಭಾರತವು ಪಾಕಿಸ್ತಾನದೊಂದಿಗೆ ದ್ವಿಪಕ್ಷೀಯ ಮಾತುಕತೆ ಮೂಲಕ ಎಲ್ಲಾ ಸಮಸ್ಯೆಗಳನ್ನು ಬಗೆಹರಿಸಿಕೊಳ್ಳಲು ಇಚ್ಚಿಸುತ್ತದೆ. ಆದರೆ ಮಾತುಕತೆ ಹಾಗೂ ಭಯೋತ್ಪಾದನೆ ಒಟ್ಟೊಟ್ಟಿಗೆ ಹೋಗಲಾರದು ಎಂದು ಸುಷ್ಮಾ ಸ್ವರಾಜ್ ಹೇಳಿದ್ದಾರೆ.

ಕಾಶ್ಮೀರ ವಿಚಾರವನ್ನು ದ್ವಿಪಕ್ಷೀಯ ಮಾತುಕತೆ ಮೂಲಕ ಬಗೆಹರಿಸಿಕೊಳ್ಳಬಹುದು.  ಕಾಶ್ಮೀರ ವಿಚಾರವನ್ನು ಪಾಕಿಸ್ತಾನ ಅಂತರಾಷ್ಟ್ರೀಯ ನ್ಯಾಯಾಲಯದ ಮುಂದೆ ತೆಗೆದುಕೊಂಡು ಹೋಗಲು ಸಾಧ್ಯವಿಲ್ಲ ಎಂದು ಸುಷ್ಮಾ ಸ್ವರಾಜ್ ಹೇಳಿದ್ದಾರೆ.

ಇದೇ ಸಂದರ್ಭದಲ್ಲಿ ಮೋದಿ ಸರ್ಕಾರಕ್ಕೆ 3 ವರ್ಷ ತುಂಬಿದ ಹಿನ್ನಲೆಯಲ್ಲಿ ಸರ್ಕಾರದ ಸಾಧನೆಗಳ ಬಗ್ಗೆ ಮಾತನಾಡಿದ್ದಾರೆ.

ವಾಯುಪ್ರದೇಶ ಉಲ್ಲಂಘನೆ ಮಾಡಿರುವುದರ ಬಗ್ಗೆ ಚೀನಾ ಜೊತೆ ಮಾತುಕತೆ ನಡೆಸಲಿದ್ದೇವೆ ಎಂದು ಹೇಳಿದ್ದಾರೆ.  

click me!