57 ಮುಸ್ಲಿಂ ರಾಷ್ಟ್ರಗಳ ಒಕ್ಕೂಟ ಸಂಸ್ಥೆಗೆ ಛೀಮಾರಿ ಹಾಕಿದ ಭಾರತ

Published : Sep 16, 2017, 06:34 PM ISTUpdated : Apr 11, 2018, 12:58 PM IST
57 ಮುಸ್ಲಿಂ ರಾಷ್ಟ್ರಗಳ ಒಕ್ಕೂಟ ಸಂಸ್ಥೆಗೆ ಛೀಮಾರಿ ಹಾಕಿದ ಭಾರತ

ಸಾರಾಂಶ

ಪಾಕಿಸ್ತಾನ ಸೇರಿದಂತೆ 57 ಮುಸ್ಲಿಂ ರಾಷ್ಟ್ರಗಳು ಒಐಸಿಯ ಸದಸ್ಯತ್ವ ಹೊಂದಿವೆ. ವಿಶ್ವಸಂಸ್ಥೆ ಮೊದಲಾದ ಅಂತಾರಾಷ್ಟ್ರೀಯ ವೇದಿಕೆಗಳಲ್ಲಿ ಈ ಸಂಸ್ಥೆಯು ಈ ಹಿಂದೆಯೂ ಕೆಲ ಬಾರಿ ಕಾಶ್ಮೀರ ವಿಚಾರವನ್ನು ಪ್ರಸ್ತಾಪಿಸಿದ್ದಿದೆ. ಆ ಸಂದರ್ಭದಲ್ಲೆಲ್ಲಾ ಭಾರತ ಆಕ್ಷೇಪ ವ್ಯಕ್ತಪಡಿಸುತ್ತಲೇ ಬಂದಿದೆ.

ನವದೆಹಲಿ(ಸೆ. 16): ಜಗತ್ತಿನ ಮುಸ್ಲಿಂ ರಾಷ್ಟ್ರಗಳ ಪ್ರತಿನಿಧಿ ಎಂದು ಹೇಳಿಕೊಳ್ಳುವ ಓಐಸಿ ಸಂಸ್ಥೆಗೆ ಭಾರತ ಛೀಮಾರಿ ಹಾಕಿದೆ. ವಿಶ್ವ ಸಂಸ್ಥೆಯಲ್ಲಿ ಕಾಶ್ಮೀರ ವಿಚಾರದ ಬಗ್ಗೆ ಇಸ್ಲಾಮಿಕ್ ಸಹಕಾರ ಸಂಸ್ಥೆ(ಒಐಸಿ)ಗೆ ಭಾರತ ಸರಿಯಾಗಿ ತಿರುಗೇಟು ನೀಡಿದೆ. ಜಮ್ಮು ಕಾಶ್ಮೀರ ಸಮಸ್ಯೆಯು ಭಾರತದ ಆಂತರಿಕ ವಿಚಾರವಾಗಿದ್ದು, ಅದರಲ್ಲಿ ಮೂಗು ತೂರಿಸುವ ಹಕ್ಕು ಒಐಸಿಗೆ ಇಲ್ಲ ಎಂದು ಭಾರತದ ವಿಶ್ವಸಂಸ್ಥೆ ಕಾರ್ಯದರ್ಶಿ ಸುಮಿತ್ ಸೇಠ್ ಝಾಡಿಸಿದ್ದಾರೆ.

ಒಐಸಿ ಸಂಸ್ಥೆಯ ಪ್ರತಿನಿಧಿಯಾಗಿ ಪಾಕಿಸ್ತಾನವು ವಿಶ್ವಸಂಸ್ಥೆಯಲ್ಲಿ ಕಾಶ್ಮೀರ ವಿಚಾರವನ್ನು ಪ್ರಸ್ತಾಪಿಸಿತ್ತು. ಕಾಶ್ಮೀರದಲ್ಲಿ ಮಾನವ ಹಕ್ಕು  ಉಲ್ಲಂಘನೆಯಾಗುತ್ತಿದೆ. ಅಲ್ಲಿಯ ಜನರ ಅಭಿಪ್ರಾಯಗಳನ್ನು ಸರಕಾರ ಬಲವಂತವಾಗಿ ಹತ್ತಿಕ್ಕುತ್ತಿದೆ ಎಂದು ಪಾಕಿಸ್ತಾನವು ಆರೋಪಿಸಿತ್ತು.

ಈ ಬಗ್ಗೆ ಮಾತನಾಡಿದ ಸುಮೀತ್ ಸೇಠ್, "ಜಮ್ಮು-ಕಾಶ್ಮೀರವು ಭಾರತದ ಅವಿಭಾಜ್ಯವಾಗ ಅಂಗವಾಗಿದೆ. ಒಐಸಿಯಿಂದ ಇಂತಹ ಹೇಳಿಕೆಗಳು ಬರುತ್ತಿರುವುದು ದುರದೃಷ್ಟಕರ," ಎಂದು ತರಾಟೆಗೆ ತೆಗೆದುಕೊಂಡಿದ್ದಾರೆ.

ಪಾಕಿಸ್ತಾನ ಸೇರಿದಂತೆ 57 ಮುಸ್ಲಿಂ ರಾಷ್ಟ್ರಗಳು ಒಐಸಿಯ ಸದಸ್ಯತ್ವ ಹೊಂದಿವೆ. ವಿಶ್ವಸಂಸ್ಥೆ ಮೊದಲಾದ ಅಂತಾರಾಷ್ಟ್ರೀಯ ವೇದಿಕೆಗಳಲ್ಲಿ ಈ ಸಂಸ್ಥೆಯು ಈ ಹಿಂದೆಯೂ ಕೆಲ ಬಾರಿ ಕಾಶ್ಮೀರ ವಿಚಾರವನ್ನು ಪ್ರಸ್ತಾಪಿಸಿದ್ದಿದೆ. ಆ ಸಂದರ್ಭದಲ್ಲೆಲ್ಲಾ ಭಾರತ ಆಕ್ಷೇಪ ವ್ಯಕ್ತಪಡಿಸುತ್ತಲೇ ಬಂದಿದೆ.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

ವಿಮಾನದ ಬಾಲಕ್ಕೆ ಪ್ಯಾರಾಚೂಟ್ ಸಿಲುಕಿ15,000 ಅಡಿ ಎತ್ತರದಲ್ಲಿ ನೇತಾಡಿದ ಸ್ಕೈಡೈವರ್ ಬದುಕುಳಿದಿದ್ದು ಹೇಗೆ? ವೀಡಿಯೋ
ಮಲ್ಲಿಕಾರ್ಜುನ ಖರ್ಗೆ ಹಠಾವೋ ಪ್ರಿಯಾಂಕಾ ಗಾಂಧಿ ಲಾವೋ, ಕಾಂಗ್ರೆಸ್ ಅಧ್ಯಕ್ಷ ಬದಲಾವಣೆಗೆ ಹೋರಾಟ