ಸುಳ್ಳು ಸುದ್ದಿ ಪ್ರಸಾರ ತಡೆಗೆ ವಿಶ್ವಸಂಸ್ಥೆಯೊಂದಿಗೆ ಭಾರತ ಸಹಿ!

Published : Sep 28, 2019, 04:43 PM ISTUpdated : Sep 28, 2019, 04:54 PM IST
ಸುಳ್ಳು ಸುದ್ದಿ ಪ್ರಸಾರ ತಡೆಗೆ ವಿಶ್ವಸಂಸ್ಥೆಯೊಂದಿಗೆ ಭಾರತ ಸಹಿ!

ಸಾರಾಂಶ

ಸುಳ್ಳು ಸುದ್ದಿ ಪ್ರಸಾರ ತಡೆಗೆ ವಿಶ್ವಸಂಸ್ಥೆಯೊಂದಿಗೆ ಭಾರತ ಸಹಿ| ಭಾರತವೂ ಸೇರಿದಂತೆ ವಿಶ್ವಸಂಸ್ಥೆಯೊಂದಿಗೆ ಸಹಿ ಹಾಕಿದ 20 ದೇಶಗಳು| ಆನ್‌ಲೈನ್ ಮೂಲಕ ಸುಳ್ಳು ಸುದ್ದಿ ರವಾನಿಸುವವರ ಮೇಲೆ ಕಠಿಣ ಕ್ರಮ| ಅಂತಾರಾಷ್ಟ್ರೀಯ ಮಟ್ಟದಲ್ಲಿ ನಕಲಿ ಸುದ್ದಿಗಳನ್ನು ನಿರ್ಬಂಧಿಸುವ ತಂತ್ರಕ್ಕೆ ಸಹಮತ| ಚುನಾವಣೆ ಸಂದರ್ಭಗಳಲ್ಲಿ ಸುಳ್ಳು ಸುದ್ದಿ ಹರಡುವವರ ವಿರುದ್ಧ ಕ್ರಮ|

ನ್ಯೂಯಾರ್ಕ್(ಸೆ.28): ಅಂತರ್ಜಾಲದ ಮೂಲಕ ಸುಳ್ಳು ಸುದ್ದಿ ಪ್ರಸಾರ ಮಾಡುವವರ ಮೇಲೆ ಕ್ರಮ ಕೈಗೊಳ್ಳುವ ಕುರಿತಂತೆ ಭಾರತ ಸೇರಿ 20 ದೇಶಗಳು ವಿಶ್ವಸಂಸ್ಥೆಯೊಂದಿಗೆ ಸಹಿ ಹಾಕಿವೆ.

ಆನ್‌ಲೈನ್ ಮೂಲಕ ಸುಳ್ಳು ಸುದ್ದಿ ರವಾನಿಸುವವರ ಮೇಲೆ ಕಠಿಣ ಕ್ರಮ ಕೈಗೊಳ್ಳಲು ಫ್ರಾನ್ಸ್, ಬ್ರಿಟನ್ ಮತ್ತು ಭಾರತ ಸೇರಿದಂತೆ 20 ದೇಶಗಳು ಒಡಂಬಡಿಕೆಗೆ ಅಂಕಿತ ಹಾಕಿವೆ. 

ದಕ್ಷಿಣ ಆಫ್ರಿಕಾ, ಕೆನಡಾ ಸೇರಿದಂತೆ ಹಲವು ಪ್ರಮುಖ ದೇಶಗಳು ಸಹ ಇಂತಹ ಸುದ್ದಿಯ ನಿರ್ಬಂಧಕ್ಕೆ ಈಗಾಗಲೇ ಕಾನೂನು ಜಾರಿ ಮಾಡಿದ್ದು, ಅಂತಾರಾಷ್ಟ್ರೀಯ ಮಟ್ಟದಲ್ಲಿ ನಕಲಿ ಸುದ್ದಿಗಳನ್ನು ನಿರ್ಬಂಧಿಸುವ ತಂತ್ರಕ್ಕೆ ಸಹಮತ ವ್ಯಕ್ತಪಡಿಸಿವೆ.

ಮಾಧ್ಯಮ ಕಣ್ಗಾವಲು ಸಂಸ್ಥೆ ರಿಪೋರ್ಟರ್ಸ್ ಬಿಯಾಂಡ್ ದಿ ಬಾರ್ಡರ್ಸ್ -  ಆರ್.ಬಿ.ಎಫ್ ಮುಕ್ತ ಮಾಧ್ಯಮ ಸ್ವಾತಂತ್ರ್ಯ ಸಂಸ್ಥೆಯ ಸಹಯೋಗದಲ್ಲಿ ನಿಯಂತ್ರಣ ಕ್ರಮಗಳನ್ನು ಕೈಗೊಳ್ಳಲು ತೀರ್ಮಾನಿಸಲಾಗಿದೆ. 

ಪ್ರಮುಖವಾಗಿ ಚುನಾವಣೆ ಸಂದರ್ಭಗಳಲ್ಲಿ ಸುಳ್ಳು ಸುದ್ದಿ ಹರಡುವ, ಪ್ರಜಾತಂತ್ರ ಮೌಲ್ಯಗಳಿಗೆ ಧಕ್ಕೆ ತರುವ ಸುಳ್ಳು ಸುದ್ದಿಗಳ ಮೇಲೆ ನಿರ್ಬಂಧಿಸುವ ಅಂಶಗಳು ಈ ಒಪ್ಪಂದಲ್ಲಿವೆ.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

ಬಾಬ್ರಿ ಮಸೀದಿಗೆ ಅಡಿಗಲ್ಲು ವಿವಾದ ಬೆನ್ನಲ್ಲೇ ಬಂಗಾಳದಲ್ಲಿ 5 ಲಕ್ಷ ಹಿಂದೂಗಳಿಂದ ಭಗವದ್ಗೀತೆ ಪಠಣ
ಕಾಂಗ್ರೆಸ್ ಸರ್ಕಾರ ಶೇ.60ರಷ್ಟು ಭ್ರಷ್ಟಾಚಾರದಲ್ಲಿ ಮುಳುಗಿದೆ: ಮಾಜಿ ಸಚಿವ ಬಿ.ಸಿ.ಪಾಟೀಲ್ ಆರೋಪ