ಪಾಕ್ ನಿರ್ಧಾರ ವಾರ್ನಿಂಗ್ ಅಲಾರಾಮ್ ಎಂದು ಭಾವಿಸೋಣ: ಭಾರತ!

Published : Aug 08, 2019, 01:40 PM IST
ಪಾಕ್ ನಿರ್ಧಾರ ವಾರ್ನಿಂಗ್ ಅಲಾರಾಮ್ ಎಂದು ಭಾವಿಸೋಣ: ಭಾರತ!

ಸಾರಾಂಶ

ಭಾರತ-ಪಾಕಿಸ್ತಾನದ ನಡುವೆ ಬಿಗುವಿನ ವಾತಾವಣ| ಜಮ್ಮು ಮತ್ತು ಕಾಶ್ಮೀರಕ್ಕೆ ನೀಡಲಾಗಿದ್ದ ವಿಶೇಷ ಸ್ಥಾನಮಾನ ರದ್ದತಿ ಹಿನ್ನೆಲೆ| ಭಾರತದ ರಾಯಭಾರಿಯನ್ನು ವಾಪಸ್ ಕಳುಹಿಸಿದ ಪಾಕಿಸ್ತಾನ| ಭಾರತದೊಂದಿಗಿನ ದ್ವಿಪಕ್ಷೀಯ ವ್ಯಾಪಾರ ಸಂಬಂಧ ಕಡಿತಗೊಳಿಸಿದ ಪಾಕಿಸ್ತಾನ| ಪಾಕಿಸ್ತಾನದ ನಡೆಗೆ ತೀವ್ರ ಆಕ್ಷೇಪ ವ್ಯಕ್ತಪಡಿಸಿದ ಭಾರತ| ಪಾಕ್ ನಿರ್ಧಾರವನ್ನು ಎಚ್ಚರಿಕೆಯ ಕರೆಗಂಟೆ ಎಂದು ಭಾವಿಸುವಂತೆ ವಿಶ್ವ ಸಮುದಾಯಕ್ಕೆ ಭಾರತ ಮನವಿ| ದಕ್ಷಿಣ ಏಷ್ಯಾದಲ್ಲಿ ರಾಜಕೀಯ ಪ್ರಕ್ಷುಬ್ದ ವಾತಾವರಣ ನಿರ್ಮಾಣಕ್ಕೆ ಕಾರಣವಾಗಲಿದೆ ಎಂದ ಭಾರತ| ಕಾಶ್ಮೀರ ಕುರಿತಾದ ಭಾರತದ ನಿರ್ಣಯ ವಿಶ್ವಸಂಸ್ಥೆಯಲ್ಲಿ ಪ್ರಶ್ನಿಸಲು ಪಾಕ್ ನಿರ್ಧಾರ|

ನವದೆಹಲಿ(ಆ.08): ತನ್ನ ರಾಯಭಾರಿಯನ್ನು ವಾಪಸ್ ಕಳುಹಿಸಿರುವ ಮತ್ತು ದ್ವಿಪಕ್ಷೀಯ ವ್ಯಾಪಾರ ಸಂಬಂಧವನ್ನು ರದ್ದುಗೊಳಿಸಿರುವ ಪಾಕಿಸ್ತಾನದ ನಡೆಗೆ ಭಾರತ ತೀಕ್ಷ ಪ್ರತಿಕ್ರಿಯೆ ನೀಡಿದೆ. ಪಾಕಿಸ್ತಾನದ ನಿರ್ಧಾರವನ್ನು ಎಚ್ಚರಿಕೆಯ ಕರೆಗಂಟೆ ಎಂದು ಭಾವಿಸುವಂತೆ ಭಾರತ ವಿಶ್ವ ಸಮುದಾಯಕ್ಕೆ ಮನವಿ ಮಾಡಿದೆ.

ತನ್ನೊಂದಿಗೆ ಎಲ್ಲ ನಂಟು ಕಡಿದುಕೊಂಡಿರುವ ಪಾಕಿಸ್ತಾನ, ದಕ್ಷಿಣ ಏಷ್ಯಾದಲ್ಲಿ ರಾಜಕೀಯ ಪ್ರಕ್ಷುಬ್ದ ವಾತಾವರಣ ನಿರ್ಮಾಣಕ್ಕೆ ಕಾರಣವಾಗಿದೆ ಎಂದು ಭಾರತ ಅಭಿಪ್ರಾಯಪಟ್ಟಿದೆ. ಪಾಕಿಸ್ತಾನದ ಈ ನಡೆ ಉಭಯ ದೇಶಗಳ ನಡುವಿನ ಉದ್ವಿಗ್ನತೆಯನ್ನು ಮತ್ತಷ್ಟು ಹೆಚ್ಚಿಸಿದೆ ಎಂದು ಭಾರತ ಅಸಮಾಧಾನ ಹೊರ ಹಾಕಿದೆ.

ಜಮ್ಮು ಮತ್ತು ಕಾಶ್ಮೀರಕ್ಕೆ ನೀಡಲಾಗಿದ್ದ ವಿಶೇಷ ಸ್ಥಾನಮಾನ ರದ್ದುಗೊಳಿಸಿರುವುದು ತನ್ನ ಆಂತರಿಕ ವಿಚಾರ ಎಂದಿರುವ ಭಾರತ, ಇದಕ್ಕೆ ನಕಾರಾತ್ಮಕ ಪ್ರತಿಕ್ರಿಯೆ ನೀಡಿರುವ ಪಾಕಿಸ್ತಾನ ಶಾಂತಿ ಸ್ಥಾಪನಯ ತನ್ನೆಲ್ಲಾ ಪ್ರಯತ್ನಗಳಿಗೆ ತಡೆಯೊಡ್ಡಿದೆ ಎಂಧು ಭಾರತ ಆಕ್ರೋಶ ಹೊರಹಾಕಿದೆ.

ಇಷ್ಟೇ ಅಲ್ಲದೇ ಕಾಶ್ಮೀರ ಕುರಿತಾದ ತನ್ನ ನಿರ್ಣಯವನ್ನು ವಿಶ್ವಸಂಸ್ಥೆಯಲ್ಲಿ ಪ್ರಶ್ನಿಸಲು ಪಾಕಿಸ್ತಾನ ನಿರ್ಧರಿಸಿರುವುದು ಅದರ ಮೂರ್ಖತನವನ್ನು ಪ್ರದರ್ಶಿಸುತ್ತದೆ ಎಂದು ಭಾರತ ವ್ಯಂಗ್ಯವಾಡಿದೆ. ಪಾಕಿಸ್ತಾನದ ನಿರ್ಧಾರವನ್ನು ಎಚ್ಚರಿಕೆಯ ಕರೆಗಂಟೆ ಎಂದು ಭಾವಿಸುವಂತೆ ವಿಶ್ವ ಸಮುದಾಯಕ್ಕೆ ಮನವಿ ಮಾಡಿರುವ ಭಾರತ, ಭವಿಷ್ಯದ ತನ್ನ ನಿರ್ಣಯಗಳನ್ನು ಬೆಂಬಲಿಸುವಂತೆ ಮನವಿ ಮಾಡಿದೆ.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

ದಯಮಾಡಿ ಅರ್ಥ ಮಾಡಿಕೊಳ್ಳಿ ತಪ್ಪು ತಿಳಿಯಬೇಡಿ: ಸೋದರನ ಪೋಸ್ಟ್‌ಗೆ ಹೆಬ್ಬಾಳ್ಕರ್ ಪ್ರತಿಕ್ರಿಯೆ
25 ಜನರ ಬಲಿ ಪಡೆದ ಗೋವಾ ಕ್ಲಬ್ ಬೆಂಕಿ ದುರಂತ ಸಂಭವಿಸಿದ ಕೆಲ ಗಂಟೆಗಳಲ್ಲೇ ಥೈಲ್ಯಾಂಡ್‌ಗೆ ಹಾರಿದ ಕ್ಲಬ್ ಮಾಲೀಕ