
ಹೋಸ್ಟನ್(ಜೂ.1): ಭಾರತೀಯ ಮೂಲದ ಅಮೆರಿಕನ್ ಬಾಲಕ ಕಾರ್ತಿಕ್ ನೆಮ್ಮನಿ, 2018ರ ಸ್ಕ್ರಿಪ್ಸ್ ನ್ಯಾಷನಲ್ ಸ್ಪೆಲ್ಲಿಂಗ್ ಬೀ ಚಾಂಪಿಯನ್ ಪಟ್ಟವನ್ನು ಅಲಂಕರಿಸಿದ್ದಾರೆ. ಕಯೋನಿಯಾ (Koinonia)ಎನ್ನುವ ಪದದ ಸ್ಪೆಲ್ಲಿಂಗ್ ನ್ನು ಸರಿಯಾಗಿ ಉಚ್ಚರಿಸುವ ಮೂಲಕ ಇವರು ಜಯ ಸಾಧಿಸಿದ್ದಾರೆ. 93 ವರ್ಷಗಳ ಇತಿಹಾಸದಲ್ಲಿ ಈ ಸಾಲಿನಲ್ಲಿ ಅತ್ಯಂತ ಕಠಿಣವಾದ ಸ್ಪರ್ಧೆ ಇತ್ತೆಂದು ಹೇಳಲಾಗಿದೆ.
ಅಮೆರಿಕಾದ ಟೆಕ್ಸಾಸ್ ನ ಕಿನ್ನೆ ನಗರದ ನಿವಾಸಿಯಾದ ಕಾರ್ತಿಕ್, ಒಟ್ಟು 515 ಸ್ಪರ್ಧಿಗಳನ್ನು ಹಿಂದಿಕ್ಕಿ ಪ್ರಶಸ್ತಿ ಜಯಿಸಿದ್ದಾರೆ. ಕಳೆದ ವರ್ಷ ಒಟ್ಟಾರೆ 291 ಸ್ಪರ್ಧಿಗಳನ್ನು ಕಂಡಿದ್ದ ಈ ಸ್ಪರ್ಧೆಯಲ್ಲಿ ಈ ಬಾರಿ ದುಪ್ಪಟ್ಟು ಸ್ಪರ್ಧಿಗಳು ಭಾಗವಹಿಸಿದ್ದರು.
ಸ್ಪರ್ಧೆಯ ಅಂತಿಮ ಸುತ್ತಿನಲ್ಲಿ 16 ಸ್ಪರ್ದಿಗಳಿದ್ದರು. ಇದರಲ್ಲಿ 9 ಬಾಲಕಿಯರು, 7 ಬಾಲಕರಿದ್ದು ಎಲ್ಲರೂ 11ರಿಂದ 14 ವರ್ಷದವರಾಗಿದ್ದರು. ಅಂತಿಮವಾಗಿ ಕಾರ್ತಿಕ್ ಹಾಗೂ ಟೆಕ್ಸಾಸ್ ನ 12ರ ನಾಲಕಿ ನಯ್ಸಾ ಮೋದಿ ಉಳಿದುಕೊಂಡಿದ್ದರು. ಇದರಲ್ಲಿ ಕಾರ್ತಿಕ್ ಮೊದಲ ಬಾರಿಗೆ ಈ ಸ್ಪರ್ಧೆಯಲ್ಲಿ ಭಾಗವಹಿಸುತ್ತಿದ್ದರೆ ನಯ್ಸಾ ಇದು ನಾಲ್ಕನೇ ಬಾರಿಗೆ ಕಣದಲ್ಲಿದ್ದರು.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.