ಅಂತಾರಾಷ್ಟ್ರೀಯ ಬುಕರ್‌ ಪ್ರಶಸ್ತಿ ತೀರ್ಪುಗಾರರಾಗಿ ಟಿಜೆಎಸ್‌ ಜಾರ್ಜ್ ಪುತ್ರ!

Published : Jul 12, 2019, 10:28 AM IST
ಅಂತಾರಾಷ್ಟ್ರೀಯ ಬುಕರ್‌ ಪ್ರಶಸ್ತಿ ತೀರ್ಪುಗಾರರಾಗಿ ಟಿಜೆಎಸ್‌ ಜಾರ್ಜ್ ಪುತ್ರ!

ಸಾರಾಂಶ

ಅಂತಾರಾಷ್ಟ್ರೀಯ ಬುಕರ್‌ ಪ್ರಶಸ್ತಿ ತೀರ್ಪುಗಾರರಾಗಿ ಲೇಖಕ ಜೀತ್‌| ಜೀತ್‌ ಥಾಯಿಲ್‌, ಖ್ಯಾತ ಪತ್ರಕರ್ತ ಟಿ.ಜೆ.ಎಸ್‌. ಜಾಜ್‌ರ್‍ರ ಪುತ್ರ

ಲಂಡನ್‌[ಜು.12]: ಭಾರತದ ಖ್ಯಾತ ಲೇಖಕ ಜೀತ್‌ ಥಾಯಿಲ್‌ ಅವರನ್ನು ಇಂಗ್ಲಿಷ್‌ ಸಾಹಿತ್ಯಕ್ಕೆ ನೀಡಲಾಗುವ ವಿಶ್ವದ ಪ್ರತಿಷ್ಠಿತ ಪುರಸ್ಕಾರಗಳಲ್ಲಿ ಒಂದಾದ ಅಂತಾರಾಷ್ಟ್ರೀಯ ಬುಕರ್‌ ಪ್ರಶಸ್ತಿಯ ಐದು ಮಂದಿ ಆಯ್ಕೆ ಸಮಿತಿಯಲ್ಲಿ ಒಬ್ಬರನ್ನಾಗಿ ನೇಮಕ ಮಾಡಿಕೊಳ್ಳಲಾಗಿದೆ. ಗುರುವಾರ ಲಂಡನ್‌ನಲ್ಲಿ ಈ ಬಗ್ಗೆ ಮಾಹಿತಿ ನೀಡಲಾಗಿದೆ.

ಮುಂದಿನ ವರ್ಷದ ಪ್ರಶಸ್ತಿಗೆ ಅರ್ಜಿ ಸಲ್ಲಿಸುವ ಪ್ರಕ್ರಿಯೆಗೆ ಈಗಾಗಲೆ ಚಾಲನೆ ನೀಡಲಾಗಿದೆ. 2019 ಮೇನಿಂದ 2020 ಏಪ್ರಿಲ್‌ ಅವಧಿಯಲ್ಲಿ ಲಂಡನ್‌ ಮತ್ತು ಐರ್ಲೆಂಡ್‌ಗಳಲ್ಲಿ ಪ್ರಕಾಶನಗೊಂಡ ಪುಸ್ತಕಗಳು ಈ ಪ್ರಶಸ್ತಿಗೆ ಅರ್ಹವಾಗಿರುತ್ತವೆ.

ಕೇರಳ ಮೂಲದವರಾದ ಜೀತ್‌ ಥಾಯಿಲ್‌ ಅವರ ನಾರ್ಕೊಪೊಲೀಸ್‌ ಕಾದಂಬರಿಗೆ ಕೇಂದ್ರ ಸಾಹಿತ್ಯ ಅಕಾಡೆಮಿ ಪ್ರಶಸ್ತಿ ಲಭಿಸಿದೆ. ಸಂಗೀತಕಾರರೂ ಆಗಿರುವ ಜೀತ್‌ ತ್ಯಾಗಿ ಅವರು ಮುಂಬೈ, ಬೆಂಗಳೂರು, ಹಾಂಕಾಂಗ್‌ ಮತ್ತು ನ್ಯೂಯಾರ್ಕ್ಗಳಲ್ಲಿ ಪತ್ರಕರ್ತರಾಗಿಯೂ ಸೇವೆ ಸಲ್ಲಿಸಿದ್ದಾರೆ. ಜೀತ್‌ ಅವರು ಖ್ಯಾತ ಪತ್ರಕರ್ತ, ಅಂಕಣಕಾರ ಟಿ.ಜೆ.ಎಸ್‌ ಜಾಜ್‌ರ್‍ ಅವರ ಪುತ್ರರಾಗಿದ್ದಾರೆ.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

ಶಾಸಕರಿಗೆ ಡಿ.ಕೆ.ಶಿವಕುಮಾರ್‌ ಔತಣಕೂಟ; 25ಕ್ಕೂ ಹೆಚ್ಚು ಶಾಸಕರು ಭಾಗಿ
ಸುತ್ತೋಲೆ ವಿವಾದಕ್ಕೆ ತೆರೆ.. ಹಾಲಿ ಪಿಯುಸಿ ಉಪನ್ಯಾಸಕರಿಗೆ ಇಲ್ಲ ಹಿಂಬಡ್ತಿ: ಸಚಿವ ಮಧು ಬಂಗಾರಪ್ಪ