
ನವದೆಹಲಿ(ಸೆ.07): ನವೆಂಬರ್ ನಲ್ಲಿ ಸಾರ್ಕ್ ಸಮ್ಮೇಳನದಲ್ಲಿ ಭಾಗವಹಿಸಲು ಪ್ರಧಾನಿ ನರೇಂದ್ರ ಮೋದಿ ಪಾಕಿಸ್ತಾನಕ್ಕೆ ಭೇಟಿ ನೀಡಲಿದ್ದಾರೆ ಎಂದು ಪಾಕಿಸ್ತಾನದಲ್ಲಿನ ಭಾರತೀಯ ಹೈಕಮಿಷನರ್ ಹೇಳಿದ್ದಾರೆ.
ಪ್ರಧಾನಿ ನರೇಂದ್ರ ಮೋದಿ ಪಾಕಿಸ್ತಾನಕ್ಕೆ ಭೇಟಿ ನೀಡುವುದನ್ನು ಎದುರುನೋಡುತ್ತಿದ್ದಾರೆ ಭಾರತೀಯ ರಾಯಭಾರಿ ಗೌತಮ್ ಬಾಂಬಾವಲೆ ಎಂದು ಹೇಳಿದ್ದಾರೆ. ಗೌತಮ್ ಬಾಂಬಾವಲೆ ಹೇಳಿಕೆ ಬೆನ್ನಲ್ಲೇ ವಿಕಾಸ್ ಸ್ವರೂಪ್ ಪ್ರಧಾನಿ ಮೋದಿ ಅವರ ಪಾಕಿಸ್ತಾನ ಭೇಟಿ ಬಗ್ಗೆ ಇನ್ನೂ ಯಾವ ನಿರ್ಧಾರವನ್ನೂ ಕೈಗೊಂಡಿಲ್ಲ ಎಂದು ಹೇಳಿದ್ದಾರೆ.
ಪಾಕಿಸ್ತಾನ- ಭಾರತದ ದ್ವಿಪಕ್ಷೀಯ ಸಂಬಂಧ ಹದಗೆಡುತ್ತಿದೆ. ಈ ಹಿನ್ನೆಲೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ಪಾಕಿಸ್ತಾನದಲ್ಲಿ ನಡೆಯಲಿರುವ ಸಾರ್ಕ್ ಸಮ್ಮೇಳನಕ್ಕೆ ಗೈರು ಹಾಜರಾಗಲಿದ್ದಾರೆ ಎಂದು ಹೇಳಲಾಗಿತ್ತು.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.