
ಲಂಡನ್ (ಜೂ. 01): ದೇಶದಲ್ಲಿ ಗುಣಮಟ್ಟದ ಶಿಕ್ಷಣಕ್ಕೆ ಕರ್ನಾಟಕವೇ ಅತ್ಯುತ್ತಮ ತಾಣ ಎಂಬುದು ಮತ್ತೊಮ್ಮೆ ಸಾಬೀತಾಗಿದೆ.
ಟೈಮ್ಸ್ ಹೈಯರ್ ಎಜುಕೇಷನ್ ಬಿಡುಗಡೆ ಮಾಡಿರುವ ವಿಶ್ವದ 100 ಅತ್ಯುತ್ತಮ ವಿಶ್ವವಿದ್ಯಾಲಯಗಳ ಪಟ್ಟಿಯಲ್ಲಿ ಬೆಂಗಳೂರಿನ ಭಾರತೀಯ ವಿಜ್ಞಾನ ಸಂಸ್ಥೆ (ಐಐಎಸ್‌ಸಿ) ಸ್ಥಾನ ಪಡೆದಿದೆ.
‘ಟೈಮ್ಸ್ ಉನ್ನತ ಶಿಕ್ಷಣ ವಿಶ್ವ ಖ್ಯಾತಿ ರಾರಯಂಕಿಂಗ್ 2018’ರಲ್ಲಿ ಬೆಂಗಳೂರಿನ ಐಐಎಸ್‌ಸಿ 91-100ರ ಪಟ್ಟಿಯಲ್ಲಿ ಸ್ಥಾನ ಪಡೆದಿದೆ. ಈ ವಾರ್ಷಿಕ ಪಟ್ಟಿಯಲ್ಲಿ ಅಮೆರಿಕನ್ ಯೂನಿವರ್ಸಿಟಿ ಹಾರ್ವರ್ಡ್ ಮೊದಲನೇ ಸ್ಥಾನ ಪಡೆದಿದ್ದು, ಮೆಸಾಚುಸೆಟ್ಸ್ ಇನ್ಸ್‌ಟಿಟ್ಯೂಟ್ ಆಫ್ ಟೆಕ್ನಾಲಜಿ, ಸ್ಟಾನ್‌ಫೋರ್ಡ್, ಕೇಂಬ್ರಿಜ್ ಮತ್ತು ಆಕ್ಸ್‌ಫರ್ಡ್ ವಿಶ್ವವಿದ್ಯಾಲಯಗಳು ಟಾಪ್ 5ರೊಳಗಿನ ಸ್ಥಾನಗಳಲ್ಲಿವೆ. 2011ರ ಬಳಿಕ ಭಾರತದ ಶಿಕ್ಷಣ ಸಂಸ್ಥೆಯೊಂದು ಇದೇ ಮೊದಲ ಬಾರಿ ಪಟ್ಟಿಯಲ್ಲಿ ಸ್ಥಾನ ಪಡೆದಿದೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.