
ಲಂಡನ್[ಆ.04]: ಭಾರತೀಯ ಮೂಲದ ವೈದ್ಯೆ ಭಾಷಾ ಮುಖರ್ಜಿ ಮಿಸ್ ಇಂಗ್ಲೆಂಡ್ ಕಿರೀಟಕ್ಕೆ ಭಾಜನರಾಗಿದ್ದಾರೆ. 23 ವರ್ಷದ ಮುಖರ್ಜಿ 12 ಮಂದಿ ಸ್ಪರ್ಧಿಗಳನ್ನು ಮಣಿಸಿ ಪ್ರಶಸ್ತಿ ಮುಡಿಗೇರಿಸಿಕೊಂಡಿದ್ದಾರೆ.
ನಾಟಿಂಗ್ಹ್ಯಾಮ್ ವಿಶ್ವವಿದ್ಯಾನಿಲಯದಿಂದ ವೈದ್ಯಕೀಯ ವಿಜ್ಞಾನ ಹಾಗೂ ಔಷಧಿ ಮತ್ತು ಶಸ್ತ್ರಚಿಕಿತ್ಸೆ ವಿಷಯದಲ್ಲಿ ಪದವಿ ಪಡೆದಿರುವ ಭಾಷಾ, ಐದು ಭಾಷೆಗಳಲ್ಲಿ ಪ್ರಾವೀಣ್ಯತೆ ಹೊಂದಿದ್ದಾರೆ.
ಸ್ಪರ್ಧೆಯಲ್ಲಿ ವಿಜೇತರಾದ ಬಳಿಕ ಮಾತನಾಡಿದ ಅವರು, ನಾನು ಮಾಧ್ಯಮಿಕ ಶಾಲೆಯಲ್ಲಿರುವಾಗಲೇ ಮಾಡೆಲಿಂಗ್ ಆಯ್ಕೆ ಮಾಡಿಕೊಂಡೆ. ನನ್ನ ವಿದ್ಯಾಭ್ಯಾಸದೊಂದಿಗೆ ಮಾಡೆಲಿಂಗ್ ಅನ್ನು ಸಮತೋಲನಗೊಳಿಸಬಹುದು ಎಂದು ತಿಳಿದ ಬಳಿಕ ನಾನು ವೃತ್ತಿಯಲ್ಲಿ ಮುಂದಡಿ ಇಟ್ಟೆ. ಸ್ಪರ್ಧೆಯಲ್ಲಿ ಗೆದ್ದ ಬಳಿಕ ಗಾಳಿಯಲ್ಲಿ ತೇಲಿದಂತೆ ನಡೆದುಕೊಳ್ಳುತ್ತೇವೆ ಎಂದು ಕೆಲವರು ಭಾವಿಸಬಹುದು, ಆದರೆ ನಾವು ಅನಿವಾರ್ಯ ಸಂದರ್ಭಗಳಲ್ಲಿ ಬೇಕಾದವರಿಗೆ ಬೆಂಬಲವಾಗಿ ನಿಲ್ಲುತ್ತೇವೆ ಎಂದು ಹೇಳಿದ್ದಾರೆ. ಮಿಸ್ ಇಂಗ್ಲೆಂಡ್ ಪ್ರಶಸ್ತಿ ಗೆದ್ದಿರುವುದರಿಂದ ಮಿಸ್ ವರ್ಲ್ಡ್ ಸ್ಪರ್ಧೆಗೆ ನೇರವಾಗಿ ಆಯ್ಕೆಯಾಗಲಿದ್ದಾರೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.