
ನವದೆಹಲಿ[ಆ.22]: ಮರು ಬಳಕೆ ಮಾಡಲಾಗದ ನೀರಿನ ಬಾಟಲಿಗಳು, ಕೈ ಚೀಲಗಳು ಮತ್ತಿತರ ಪ್ಲಾಸ್ಟಿಕ್ ವಸ್ತುಗಳನ್ನು ಸಂಸತ್ತಿನ ಆವರಣದಲ್ಲಿ ಬಳಸದಂತೆ ಲೋಕಸಭೆ ಆದೇಶಿಸಿದ ಬೆನ್ನಲ್ಲೇ, ಅಕ್ಟೋಬರ್ 2ರಿಂದ ಮರುಬಳಕೆಯಾಗದ ಯಾವುದೇ ರೀತಿಯ ಪ್ಲಾಸ್ಟಿಕ್ ವಸ್ತುಗಳನ್ನು ಬಳಕೆ ಮಾಡದಿರುವ ನಿರ್ಧಾರವನ್ನು ರೈಲ್ವೆ ಇಲಾಖೆ ಕೈಗೊಂಡಿದೆ.
ಈ ಬಗ್ಗೆ ಬುಧವಾರ ಹೇಳಿಕೆ ಬಿಡುಗಡೆ ಮಾಡಿರುವ ರೈಲ್ವೆ ಇಲಾಖೆ, ‘ಪ್ರಧಾನಿ ನರೇಂದ್ರ ಮೋದಿ ಅವರ ಒತ್ತಾಸೆಯಂತೆ ಪ್ಲಾಸ್ಟಿಕ್ ಬಳಕೆ ಕಡಿಮೆ ಮಾಡುವ ಸಲುವಾಗಿ ಮರು ಬಳಕೆ ಮಾಡಬಹುದಾದ ಚೀಲಗಳನ್ನು ಬಳಸಲು ಭಾರತೀಯ ರೈಲ್ವೆಯ ಸಿಬ್ಬಂದಿ ಹಾಗೂ ವರ್ತಕರು ಸಹಕಾರ ನೀಡಬೇಕು.
ಪಾಕ್‌ಗೆ ಸಂಚರಿಸುವ ಸಂಜೋತಾ ಎಕ್ಸ್‌ಪ್ರೆಸ್ ರೈಲು ಸೇವೆ ರದ್ದು ಮಾಡಿದ ಭಾರತ!
ಅಲ್ಲದೆ, ಅ.2ರ ಒಳಗಾಗಿ ಒಂದೇ ಬಾರಿ ಬಳಕೆ ಮಾಡಬಹುದಾದ ಹಾಗೂ 50 ಮೈಕ್ರಾನ್‌ಗಿಂತ ಕಡಿಮೆ ಗಾತ್ರದ ಪ್ಲಾಸ್ಟಿಕ್ ಬಳಕೆಯನ್ನು ನಿಷೇಧಿಸಬೇಕು ಎಂದು ಎಲ್ಲ ರೈಲ್ವೆ ಘಟಕಗಳಿಗೆ ಸೂಚಿಸಲಾಗಿದೆ’ ಎಂದು ಹೇಳಿದೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.