ಜನವರಿಯಿಂದ ಎಲ್ಲಾ ಜಿಲ್ಲೆ – ತಾಲೂಕುಗಳಲ್ಲಿ ಇಂದಿರಾ ಕ್ಯಾಂಟೀನ್

Published : Dec 17, 2017, 12:44 PM ISTUpdated : Apr 11, 2018, 12:38 PM IST
ಜನವರಿಯಿಂದ ಎಲ್ಲಾ ಜಿಲ್ಲೆ – ತಾಲೂಕುಗಳಲ್ಲಿ ಇಂದಿರಾ ಕ್ಯಾಂಟೀನ್

ಸಾರಾಂಶ

ರಾಜ್ಯದ ಎಲ್ಲ ಜಿಲ್ಲೆ ಮತ್ತು ತಾಲೂಕು ಕೇಂದ್ರಗಳಲ್ಲಿ ಜನವರಿ 1ರಿಂದ `ಇಂದಿರಾ ಕ್ಯಾಂಟೀನ್' ಪ್ರಾರಂಭಗೊಳ್ಳಲಿದ್ದು,  ರಾಜ್ಯದ ಎಲ್ಲ ಪ್ರದೇಶಗಳಲ್ಲೂ ಬಡವರು, ಶ್ರಮಿಕರು ಕೇವಲ 5 ರು.ಗೆ ತಿಂಡಿ ಹಾಗೂ 10 ರು.ಗೆ ಭೋಜನ ಸವಿಯಬಹುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.

ಸೇಡಂ(ಡಿ.17): ರಾಜ್ಯದ ಎಲ್ಲ ಜಿಲ್ಲೆ ಮತ್ತು ತಾಲೂಕು ಕೇಂದ್ರಗಳಲ್ಲಿ ಜನವರಿ 1ರಿಂದ `ಇಂದಿರಾ ಕ್ಯಾಂಟೀನ್' ಪ್ರಾರಂಭಗೊಳ್ಳಲಿದ್ದು,  ರಾಜ್ಯದ ಎಲ್ಲ ಪ್ರದೇಶಗಳಲ್ಲೂ ಬಡವರು, ಶ್ರಮಿಕರು ಕೇವಲ 5 ರು.ಗೆ ತಿಂಡಿ ಹಾಗೂ 10 ರು.ಗೆ ಭೋಜನ ಸವಿಯಬಹುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.

ಕಲಬುರಗಿ ಜಿಲ್ಲೆ ಸೇಡಂ ತಾಲೂಕಿನಲ್ಲಿ ಸುವರ್ಣ ಕರ್ನಾಟಕ ಭವನ ಹಾಗೂ ಸರ್ಕಾರಿ ಆಸ್ಪತ್ರೆಗಳಿಗೆ ಶಂಕುಸ್ಥಾಪನೆ ಮಾಡಿದ ಸಿಎಂ ಸಿದ್ದರಾಮಯ್ಯ, ಸರ್ಕಾರದ ಯೋಜನೆಗಳು ಚುನಾವಣೆಗಾಗಿ ಅಲ್ಲ. ನಮ್ಮ ಸರ್ಕಾರದ ಪ್ರಾರಂಭವಾದ ದಿನದಿಂದಲೂ ಇಲ್ಲಿಯವರೆಗೆ ಅಭಿವೃದ್ಧಿ ಕಾರ್ಯಕ್ರಮಗಳನ್ನು ಸತತವಾಗಿ ನಡೆಸುತ್ತಾ ಬಂದಿದೆ ಎಂದು ಅವರು ಹೇಳಿದರು.

ನಾನು 2013ರ ಮೇ 13ರಂದು ಪ್ರಮಾಣ ವಚನ ಸ್ವೀಕರಿಸಿದ ಅರ್ಧ ಗಂಟೆಯಲ್ಲಿ ಅನ್ನಭಾಗ್ಯ, ಕ್ಷೀರಭಾಗ್ಯ ಒಳಗೊಂಡು ಆರು ಕಾರ್ಯಕ್ರಮಗಳಿಗೆ ಚಾಲನೆ ನೀಡಿದೆ. ಇಲ್ಲಿಯವರೆಗೂ ನಾವು ನುಡಿದಂತೆ ನಡೆದಿದ್ದೇವೆ ಎಂದರು.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

4 ಲಕ್ಷ ಬೆಲೆ ಬಾಳುವ ಸೆ*ಕ್ಸ್​ ಡಾಲ್ಸ್​ ಮಾರಾಟ: ಕರ್ನಾಟಕ ನಂ.1: ಅಂಥದ್ದೇನಿದೆ? ಮಾಲೀಕರೇ ಹೇಳಿದ್ದಾರೆ ನೋಡಿ!
ಸಿಎಂ ಗದ್ದುಗೆಗಾಗಿ ಡಿಕೆಶಿ ರಹಸ್ಯ ಪೂಜೆ, ಆಂದ್ಲೆ ಜಗದೀಶ್ವರಿ ಸನ್ನಿಧಿಯಲ್ಲಿ 'ಹಿಂಗಾರ ಪ್ರಸಾದ'ಕ್ಕೆ ಮೊರೆ! ಗೋಕರ್ಣ ಆತ್ಮಲಿಂಗಕ್ಕೆ ಪಂಚಾಮೃತ ಅಭಿಷೇಕ