
ಬೆಂಗಳೂರು (ಆ. 21): ಕೊಡಗು ಹಾಗೂ ಕೇರಳ ನೆರೆ ಪ್ರವಾಹಕ್ಕೆ ಇಡೀ ದೇಶವೇ ಮರುಗಿದೆ. ಎಲ್ಲರೂ ತಮ್ಮ ಕೈಲಾದಷ್ಟು ಸಹಾಯ ಮಾಡಿ, ಹೃದಯ ವೈಶಾಲ್ಯತೆ ಮೆರೆದಿದ್ದಾರೆ. ಇನ್ಫೋಸಿಸ್ ಫೌಂಡೇಷನ್ ಮೂಲಕ ಸದಾ ಸಮಾಜ ಮುಖಿ ಕಾರ್ಯಗಳಲ್ಲಿ ತೊಡಗಿರುವ ಸುಧಾ ಮೂರ್ತಿ ಅವರೂ ಎಂದಿನಂತೆ ಈಗಲೂ ಸಂತ್ರಸ್ತರಿಗೆ ಸಹಕರಿಸಿದ್ದಾರೆ.
ಅಷ್ಟೇ ಅಲ್ಲ ಖುದ್ದು ಅವರೇ ನಿಂತು, ಅಗತ್ಯ ವಸ್ತುಗಳ ಪ್ಯಾಕಿಂಗ್ ಕಾರ್ಯದಲ್ಲಿ ತೊಡಗಿದ್ದು, ಈ ವೀಡಿಯೋ ಸಾಮಾಜಿಕ ಜಾಲಾತಾಣದಲ್ಲಿ ವೈರಲ್ ಆಗುತ್ತಿದೆ.
ಇನ್ಫೋಸಿಸ್ ಫೌಂಡೇಷನ್ ಮೂಲಕ ಕಳುಹಿಸಬೇಕಾದ ಅಗತ್ಯ ವಸ್ತುಗಳನ್ನು ಸಿದ್ಧಪಡಿಸುತ್ತಿರುವ ಉದ್ಯೋಗಿಗಳೊಂದಿಗೆ ಸುಧಾ ಮೂರ್ತಿ ಅವರೂ ಮೇಲುಸ್ತುವಾರಿ ನೋಡಿಕೊಳ್ಳುವುದಲ್ಲದೇ, ತಾವೇ ಬಾಕ್ಸ್, ಬ್ಯಾಗ್‌ಗಳನ್ನು ಜೋಡಿಸುತ್ತಿದ್ದಾರೆ. ಸದಾ ಸರಳ, ಸಜ್ಜನಿಕೆಗೆ ಹೆಸರಾದ ಸುಧಾ ಮೂರ್ತಿ ಅವರ ಈ ಕಾರ್ಯವನ್ನು ಜನರು ತುಂಬು ಮನಸ್ಸಿನಿಂದ ಶ್ಲಾಘಿಸಿದ್ದಾರೆ.
ಸುವರ್ಣ ನ್ಯೂಸ್ ಹಾಗೂ ಸುವರ್ಣ ನ್ಯೂಸ್.ಕಾಮ್ ಸಹ ಕೊಡಗು ಸಂತ್ರಸ್ತರಿಗೆ ಅಗತ್ಯ ವಸ್ತುಗಳನ್ನು ಪೂರೈಸಿದ್ದು, ಮಾಧ್ಯಮದ ಕರೆಗೆ ಕನ್ನಡಿಗರು ಉದಾರವಾಗಿ ದೇಣಿಗೆ ನೀಡಿ, ಸಹಕರಿಸಿದ್ದನ್ನು ಇಲ್ಲಿ ಸ್ಮರಿಸಬಹುದು.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.