
ಬೆಳಗಾವಿ(ಅ.12): ಕನ್ನಡ ರಾಜ್ಯೋತ್ಸವ ಹೊಸ್ತಿಲಲ್ಲಿ ಇರುವಾಗಲೇ ರಾಜ್ಯ ಸರ್ಕಾರ ನಾಡದ್ರೋಹಿಗಳಿಗೆ ಮಣೆ ಹಾಕುತ್ತಿದೆಯಾ ಎಂಬ ಅನುಮಾನ ಎದುರಾಗಿದೆ. ಕರ್ನಾಟಕ ಸರ್ಕಾರದ ಶವಯಾತ್ರೆ ಮಾಡುವುದಾಗಿ ಉದ್ಧಟತನ ಪ್ರದರ್ಶಿಸಿದ್ದ ಬೆಳಗಾವಿ ದಕ್ಷಿಣ ಮತ ಕ್ಷೇತ್ರದ ಎಂಇಎಸ್ ಶಾಸಕ ಸಂಭಾಜಿ ಪಾಟೀಲ್ ಅವರಿಗೆ 10 ಕೋಟಿ ರೂಪಾಯಿಯನ್ನು ಮುಖ್ಯಮಂತ್ರಿಯಿಂದ ಅನುದಾನ ನೀಡಲಾಗಿದೆ ಎಂಬ ಆರೋಪ ಕೇಳಿಬಂದಿದೆ.
ಸಿಎಂ ಸಿದ್ದರಾಮಯ್ಯ ಇತ್ತೀಚಿಗಷ್ಟೇ ಬೆಳಗಾವಿ ಜಿಲ್ಲೆಗೆ 15 ಕೋಟಿ ರೂ. ಅನುದಾನ ನೀಡಿದ್ದು, ಇದರಲ್ಲಿ ಸರ್ಕಾರದ ಮುಖ್ಯ ಸಚೇತಕ ಅಶೋಕ ಪಟ್ಟಣ ಮತಕ್ಷೇತ್ರಕ್ಕೆ 5 ಕೋಟಿ, ಎಂಇಎಸ್ ಶಾಸಕ ಸಂಭಾಜಿ ಪಾಟೀಲ ಕ್ಷೇತ್ರಕ್ಕೆ 10 ಕೋಟಿ ರೂ. ನೀಡಿದ್ದಾರೆ ಎನ್ನುವುದು ಹಲವು ಅನುಮಾನಗಳಿಗೆ ಎಡೆ ಮಾಡಿಕೊಟ್ಟಿದೆ. ಚುನಾವಣೆಗೆ ಆರು ತಿಂಗಳಿರಬೇಕಾದರೆ 10 ಕೋಟಿ ರೂ. ಅನುದಾನ ನೀಡಿರುವುದು ರಾಜಕೀಯ ಗಿಮಿಕ್ ಎಂದು ಬಿಜೆಪಿ ಮಾಜಿ ಶಾಸಕ ಅಭಯ ಪಾಟೀಲ್ ಟೀಕಿಸಿದ್ದಾರೆ.
ಈಗಾಗಲೇ ಶಾಸಕ ಸಂಭಾಜಿ ಪಾಟೀಲ ಕಳೆದ ಲೋಕಸಭೆ ಚುನಾವಣೆಯಲ್ಲಿ ಪರೋಕ್ಷವಾಗಿ ಕಾಂಗ್ರೆಸ್ ಅಭ್ಯರ್ಥಿಯನ್ನು ಬೆಂಬಲಿಸಿದ್ದರು. ಮುಂಬರುವ 2018ರ ಚುನಾವಣೆಯಲ್ಲಿ ಸಂಭಾಜಿ ಪಾಟೀಲ್ ಅವರನ್ನು ಕಾಂಗ್ರೆಸ್ ಪಕ್ಷಕ್ಕೆ ಸೆಳೆಯುವ ಪ್ರಯತ್ನ ಪಕ್ಷದಿಂದ ನಡೆಯುತ್ತಿದೆಯೇ ಎಂಬ ಚರ್ಚೆ ರಾಜಕೀಯ ವಲಯದಲ್ಲಿ ಕೇಳಿ ಬರುತ್ತಿದೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.