
ಬಿಕಾನೇರ್ , ರಾಜಸ್ತಾನ (ಅ.05): ಕೆಲ ದಿನಗಳ ಹಿಂದೆ ದೆಹಲಿ ಉಪ-ಮುಖ್ಯಮಂತ್ರಿ ಮನೀಶ್ ಸಿಸೋಡಿಯಾ ಮೇಲೆ ಮಸಿ ಎಸೆದಿರುವ ಘಟನೆಯ ಬೆನ್ನಲ್ಲೇ, ಮುಖ್ಯಮಂತ್ರಿ ಅರವಿಂದ ಕೇಜ್ರಿವಾಲ್ ಮೇಲೆ ಕೆಲವರು ಮಸಿ ಎಸೆದಿರುವ ಘಟನೆ ರಾಜಸ್ತಾನದ ಬಿಕಾನೇರ್’ನಲ್ಲಿ ನಡೆದಿದೆ.
ಭಾರತೀಯ ಸೇನೆ ಪಾಕಿಸ್ತಾನದ ಸೇನಾ ನೆಲೆಗಳ ಮೇಲೆ ಸರ್ಜಿಕಲ್ ದಾಳಿ ನಡೆಸಿದ್ದಕ್ಕೆ ಪುರಾವೆ ಒದಗಿಸಬೇಕೆಂದು ಪ್ರಧಾನಿ ಅವರನ್ನು ಕೇಜ್ರಿವಾಲ್ ಒತ್ತಾಯಿಸಿದ್ದರು. ಈಗ ಕೇಜ್ರಿವಾಲ್ ಮೇಲೆ ಕೆಲವರು ನಿನ್ನೆ ರಾತ್ರಿ ಮಸಿ ಎರಚಿದ್ದಾರೆ.
ಅರವಿಂದ್ ಕೇಜ್ರಿವಾಲ್ ರಾಜಸ್ತಾನದ ಬಿಕಾನೇರ್‌ಗೆ ಭೇಟಿ ನೀಡಿದ ಸಂದರ್ಭದಲ್ಲಿ ಘಟನೆ ನಡೆದಿದೆ.
ಈ ಸಂಬಂಧ ಪೊಲೀಸರು ಇಬ್ಬರನ್ನು ವಶಕ್ಕೆ ಪಡೆದಿದ್ದಾರೆ ಎನ್ನಲಾಗಿದೆ.
ಇದಕ್ಕೆ ಟ್ವೀಟ್ ಮಾಡಿರುವ ದೆಹಲಿ ಸಿಎಂ, ನನ್ನ ಮೇಲೆ ಮಸಿ ಎರಚಿದ್ದವರನ್ನು ಆ ದೇವರು ಚೆನ್ನಾಗಿಟ್ಟಿರಲಿ. ಅವರಿಗೆ ಒಳ್ಳೆದಾಗಲಿ ಎಂದು ಹೇಳಿದ್ದಾರೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.