ನೆರೆ ಸಮೀಕ್ಷೆಗಾಗಿ ಇಂದು ಕರ್ನಾಟಕಕ್ಕೆ ಕೇಂದ್ರ ತಂಡ

Published : Aug 25, 2019, 08:48 AM IST
ನೆರೆ ಸಮೀಕ್ಷೆಗಾಗಿ ಇಂದು  ಕರ್ನಾಟಕಕ್ಕೆ ಕೇಂದ್ರ ತಂಡ

ಸಾರಾಂಶ

ನೆರೆ ಸಮೀಕ್ಷೆಗಾಗಿ ಇಂದು ಕರ್ನಾಟಕಕ್ಕೆ ಕೇಂದ್ರ ತಂಡ |  ಇಂದಿನಿಂದ 4 ದಿನ ಪ್ರವಾಹ ಪೀಡಿತ ಪ್ರದೇಶಗಳಲ್ಲಿ ಅಧ್ಯಯನ | ಮಹಾರಾಷ್ಟ್ರ, ಕೇರಳ ಸೇರಿ ಇತರ ರಾಜ್ಯಗಳಿಗೂ ತಂಡ ರವಾನೆ

ನವದೆಹಲಿ  (ಆ. 25): ಇತ್ತೀಚೆಗಷ್ಟೇ ಭಾರೀ ಮಳೆ ಹಾಗೂ ಪ್ರವಾಹದಿಂದ ಉಂಟಾದ ಹಾನಿ ಕುರಿತಾದ ಸಮೀಕ್ಷೆಗಾಗಿ ಕೇಂದ್ರದ ಅಧ್ಯಯನ ತಂಡ ಶನಿವಾರ ಕರ್ನಾಟಕಕ್ಕೆ ಆಗಮಿಸಲಿದೆ. ಕೇಂದ್ರದ ಅಂತರ್‌ ಸಚಿವಾಲಯದ ಈ ತಂಡ(ಐಎಂಸಿಟಿ)ಗಳಲ್ಲಿ ಹಣಕಾಸು, ರಸ್ತೆ ಸಾರಿಗೆ, ಗ್ರಾಮೀಣಾಭಿವೃದ್ಧಿ ಹಾಗೂ ಜಲಶಕ್ತಿ ಇಲಾಖೆಯ ಅಧಿಕಾರಿಗಳು ಸಹ ಇದ್ದು, ಆ.24ರಿಂದ 27ರವರೆಗೆ ನಾಲ್ಕು ದಿನಗಳ ಕಾಲ ರಾಜ್ಯದಲ್ಲಿ ನೆರೆ ಹಾನಿಯಿಂದ ತತ್ತರಿಸಿದ ಹಲವು ಪ್ರದೇಶಗಳಿಗೆ ಭೇಟಿ ನೀಡಲಿದ್ದಾರೆ.

ಬಳಿಕ ಪ್ರವಾಹ ಹಾನಿ ಹಾಗೂ ರಕ್ಷಣಾ ಕಾರ್ಯಾಚರಣೆಗಳ ಕುರಿತು ಕೇಂದ್ರ ಸರ್ಕಾರಕ್ಕೆ ವರದಿ ನೀಡಲಿದೆ ಎಂದು ಕೇಂದ್ರ ಗೃಹ ಸಚಿವಾಲಯ ತಿಳಿಸಿದೆ. ಅಲ್ಲದೆ, ಮಳೆ ಪ್ರವಾಹದಿಂದ ನಲುಗಿದ ಇತರ ರಾಜ್ಯಗಳಿಗೂ ಕೇಂದ್ರದ ಅಧ್ಯಯನ ತಂಡಗಳನ್ನು ರವಾನಿಸಲಾಗಿದೆ.

ದೇಶಾದ್ಯಂತ ಭಾರೀ ಮಳೆಯಿಂದ ಉಂಟಾದ ನೆರೆ ಪರಿಸ್ಥಿತಿಯಿಂದ ತತ್ತರಿಸಿದ ರಾಜ್ಯಗಳಿಗೆ ಪರಿಹಾರ ಸಾಮಗ್ರಿ ಹಾಗೂ ಹಣಕಾಸು ನೆರವು ನೀಡುವ ನಿಟ್ಟಿನಲ್ಲಿ ಇತ್ತೀಚೆಗಷ್ಟೇ ಆ.19ರಂದು ಗೃಹ ಸಚಿವ ಅಮಿತ್‌ ಶಾ ನೇತೃತ್ವದಲ್ಲಿ ಉನ್ನತ ಮಟ್ಟದ ಸಭೆ ನಡೆದಿತ್ತು.

ಈ ಸಭೆಯಲ್ಲಿ 11 ರಾಜ್ಯಗಳ ನೆರೆ ಹಾನಿ ಅವಲೋಕನಕ್ಕಾಗಿ ಶೀಘ್ರವೇ ತಂಡಗಳನ್ನು ನಿರ್ಧಾರ ಕೈಗೊಳ್ಳಲಾಗಿತ್ತು. ಈ ಪ್ರಕಾರ ಪ್ರವಾಹದ ಸಂಕಷ್ಟಕ್ಕೆ ಸಿಲುಕಿರುವ ಕರ್ನಾಟಕ, ಕೇರಳ, ಗುಜರಾತ್‌, ರಾಜಸ್ಥಾನ, ಬಿಹಾರ, ಮಹಾರಾಷ್ಟ್ರ, ತ್ರಿಪುರ, ಮೇಘಾಲಯ, ಅಸ್ಸಾಂ, ಹಿಮಾಚಲ ಪ್ರದೇಶ ಸೇರಿದಂತೆ ಇನ್ನಿತರ ರಾಜ್ಯಗಳಿಗೆ ಕೇಂದ್ರದ ತಂಡಗಳನ್ನು ರವಾನಿಸಲಾಗಿದೆ.

 

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

ಮದುವೆ ಮಾತುಕತೆಗೆಂದು ಕರೆಸಿ ಎಂಜಿನಿಯರಿಂಗ್ ವಿದ್ಯಾರ್ಥಿಯ ಮಸಣಕ್ಕೆ ಅಟ್ಟಿದ ಗರ್ಲ್‌ಫ್ರೆಂಡ್ ಮನೆಯವರು
ಕೆನಡಾದ ಮಹಿಳಾ ವೈದ್ಯರಿಗೆ ತೋರಿಸಬಾರದನ್ನು ತೋರಿಸಿದ ಭಾರತೀಯ ಯುವಕನ ಬಂಧನ