INX ಪ್ರಕರಣ: ಮಾಜಿ ಕೇಂದ್ರ ಸಚಿವ ಚಿದಂಬರಂ ಅರೆಸ್ಟ್

By Web Desk  |  First Published Aug 21, 2019, 9:53 PM IST

ಐಎನ್‌ಎಕ್ಸ್ ಮೀಡಿಯಾ ಭ್ರಷ್ಟಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾಜಿ ಕೇಂದ್ರ ಸಚಿವ ಪಿ.ಚಿದಂಬರಂ ಅರೆಸ್ಟ್| ಪಿ.ಚಿದಂಬರಂ ಅವರನ್ನು ಬಂಧಿಸಿದ ಸಿಬಿಐ ಅಧಿಕಾರಿಗಳು.


ನವದೆಹಲಿ(ಆ.21): ಐಎನ್‌ಎಕ್ಸ್ ಮೀಡಿಯಾ ಭ್ರಷ್ಟಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾಜಿ ಕೇಂದ್ರ ಸಚಿವ ಪಿ.ಚಿದಂಬರಂ ಅವರನ್ನು ಸಿಬಿಐ ಅಧಿಕಾರಿಗಳು ಬಂಧಿಸಿದ್ದಾರೆ.

ಐಎನ್​ಎಕ್ಸ್​ ಮೀಡಿಯಾ ಗ್ರೂಪ್​ ಹಗರಣದ ಆರೋಪ ಹೊತ್ತಿರುವ ಮಾಜಿ ವಿತ್ತ ಸಚಿವ ಪಿ.ಚಿದಂಬರಂ ಅವರನ್ನು ಸಿಬಿಐ ಅಧಿಕಾರಿಗಳು ಅವರ ನಿವಾಸದಲ್ಲಿ  ಇಂದು ರೆಸ್ಟ್ ಮಾಡಿದ್ದು, ಸಿಬಿಐ ಕಚೇರಿಗೆ ಕರೆದುಕೊಂಡು ಹೋಗಿದ್ದಾರೆ.

Latest Videos

undefined

ಕೈ ಕಚೇರಿ ಮುಂದೆ ಹೈಡ್ರಾಮಾ: ಚಿದು ಮನೆ ಗೇಟ್ ಜಿಗಿದ ಅಧಿಕಾರಿಗಳು!

Congress leader P Chidambaram is being taken to the CBI headquarters in Delhi. https://t.co/dDqPiYmWWZ

— ANI (@ANI)

ನಿನ್ನೆ ದೆಹಲಿ ಹೈಕೋರ್ಟ್ ಅರ್ಜಿ ವಜಾ ಮಾಡುತ್ತಲೇ ಕಣ್ಮರೆಯಾಗಿದ್ದ ಚಿದಂಬರಂ ಬಂಧನದಿಂದ ರಕ್ಷಣೆ ನೀಡುವಂತೆ ಸುಪ್ರೀಂಕೋರ್ಟ್​ಗೆ ಅರ್ಜಿ ಸಲ್ಲಿಸಿದ್ದರು. ಆದರೆ ನಿರೀಕ್ಷಣಾ ಜಾಮೀನು ಅರ್ಜಿಯನ್ನು ತಕ್ಷಣವೇ ವಿಚಾರಣೆ ಮಾಡಲು ಸಾಧ್ಯವಿಲ್ಲ ಎಂದಿದ್ದ ಸುಪ್ರೀಂಕೋರ್ಟ್​ ಶುಕ್ರವಾರ ವಿಚಾರಣೆ ಮಾಡುವುದಾಗಿ ಹೇಳಿತ್ತು.

ಕಳೆದ 24 ಗಂಟೆಯಿಂದ ಕಣ್ಮರೆಯಾಗಿದ್ದ ಚಿದಂಬರಂ ಇಂದು ಸಂಜೆ ಎಐಸಿಸಿ ಪ್ರಧಾನ ಕಚೇರಿಗೆ ಆಗಮಿಸಿ ಸುದ್ದಿಗೋಷ್ಠಿ ನಡೆಸಿ ಮನೆಗೆ ತೆರಳಿದ್ದರು. ಅವರನ್ನು ಬಂಧಿಸಲೆಂದು ಇ.ಡಿ. ಹಾಗೂ ಸಿಬಿಐ ಅಧಿಕಾರಿಗಳು ಅಲ್ಲಿಗೆ ತೆರಳಿದ್ದರು. ಅಲ್ಲದೆ ದೆಹಲಿ ಪೊಲೀಸರೂ ಕೂಡ ಸ್ಥಳಕ್ಕೆ ಆಗಮಿಸಿದ್ದರು. ಚಿದಂಬರಂ ನಿವಾಸದ ಎದುರು ಕೂಡ ಒಂದು ಗಂಟೆಗಳ ಕಾಲ ಹೈಡ್ರಾಮಾ ನಡೆದಿತ್ತು.

P Chidambaram taken away in a car by CBI officials. pic.twitter.com/nhE9WiY86C

— ANI (@ANI)
click me!