ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ ಎಸ್ ಪಿ

Published : Sep 05, 2018, 02:54 PM ISTUpdated : Sep 09, 2018, 09:14 PM IST
ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ ಎಸ್ ಪಿ

ಸಾರಾಂಶ

ಯುವ ಪೊಲೀಸ್ ಅಧಿಕಾರಿಯೋರ್ವರು ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ್ದು ಸ್ಥಿತಿ ತೀವ್ರ ಚಿಂತಾಜನಕವಾಗಿದೆ. ಸದ್ಯ ಅವರಿಗೆ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. 

ಕಾನ್ಪುರ :  ಪೊಲೀಸ್ ಅಧಿಕಾರಿಯೋರ್ವರು ವಿಷ ಸೇವಿಸಿ ಆತ್ಮಹತ್ಯೆಗೆ ಘಟನೆ ಉತ್ತರ ಪ್ರದೇಶದಲ್ಲಿ ನಡೆದಿದೆ. ಸುರೇಂದ್ರ ಕುಮಾರ್ ದಾಸ್ ಎನ್ನುವ ಈ ಯುವ ಅಧಿಕಾರಿ ಪ್ರಜ್ಞಾಹೀನರಾಗಿದ್ದು ಈ ವೇಳೆ ಅವರನ್ನು ಆಸ್ಪತ್ರೆಗೆ ದಾಖಲು ಮಾಡಲಾಗಿದೆ. 

ಅವರ ಸ್ಥಿತಿ ಅತ್ಯಂತ ಗಂಭೀರವಾಗಿದ್ದು ಚಿಕಿತ್ಸೆ ಮುಂದುವರಿಸಲಾಗಿದೆ ಎಂದು ವೈದ್ಯರಾದ ಡಾ. ಅಗರ್ವಾಲ್ ಹೇಳಿದ್ದಾರೆ. 30 ವರ್ಷದ ಐಪಿಎಸ್ ಅಧಿಕಾರಿಯನ್ನ ಮುಂಜಾನೆ 6 ಗಂಟೆಗೆ ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ತಕ್ಷಣವೇ ಚಿಕಿತ್ಸೆ ಆರಂಭಿಸಲಾಗಿತ್ತು ಎಂದು ತಿಳಿಸಿದ್ದಾರೆ.

ಈಸ್ಟ್ ಕಾನ್ಪುರ ಜಿಲ್ಲೆಯಲ್ಲಿ ಎಸ್ ಪಿಯಾಗಿ ಸುರೇಂದ್ರ ಕುಮಾರ್ ಕಾರ್ಯ ನಿರ್ವಹಿಸುತ್ತಿದ್ದರು. ಮೆಕಾನಿಕಲ್ ಎಂಜಿನಿಯರ್ ಪದವೀಧರರಾದ ಸುರೇಂದ್ರ ಕುಮಾರ್ 2014ರಲ್ಲಿ ಐಪಿಎಸ್ ಅಧಿಕಾರಿಯಾಗಿ ಸೇವೆಗೆ ಸೇರಿದ್ದರು. 

(ಫೊಟೊ ಕೃಪೆ ಹಿಂದೂಸ್ಥಾನ್ ಟೈಮ್ಸ್)

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

India News Live: IPL 2026 - ಪಂಜಾಬ್ ಕಿಂಗ್ಸ್ ಗೆಲ್ಲುತ್ತಿದ್ದಂತೆಯೇ ಪ್ಲೇ-ಆಫ್‌ ರೇಸ್‌ನಿಂದ ಹೊರಬಿದ್ದ ಮತ್ತೊಂದು ತಂಡ!
Karnataka News Live: ಮುಳ್ಳಯ್ಯನಗಿರಿಯಲ್ಲಿ ಸೃಷ್ಟಿಯಾಯ್ತು ‘ಮಿನಿ ಹಿಮಾಲಯ’ - ಮುಂಗಾರಿಗೂ ಮುನ್ನವೇ ಮಂಜಿನ ನಗರಿಯಾದ ಕಾಫಿನಾಡು!