ಯೋಗಿ ಸರ್ಕಾರವನ್ನು ಟೀಕಿಸಿದ ಐಪಿಎಸ್ ಅಧಿಕಾರಿ ವಜಾ

By Suvarna Web DeskFirst Published Mar 25, 2017, 12:00 PM IST
Highlights

ಯೋಗಿ ಆದಿತ್ಯನಾಥ್ ಅದಿಕಾರಕ್ಕೆ ಬಂದ ಬಳಿಕ ಹಿರಿಯ ಪೊಲೀಸ್ ಅಧಿಕಾರಿಗಳು ಯಾದವ್ ಹೆಸರಿರುವ ಕಿರಿಯ ಅಧಿಕಾರಿಗಳಿಗೆ ಕಿರುಕುಳ ನೀಡಲಾರಂಭಿಸಿದ್ದಾರೆ ಎಂದು  2010 ಬ್ಯಾಚಿನ ಐಪಿಎಸ್ ಅಧಿಕಾರಿಯಾಗಿರುವ ಹಿಮಾಂಶು ಕುಮಾರ್ ಟ್ವೀಟ್ ಮಾಡಿದ್ದರು. ಬಳಿಕ ಅವುಗಳನ್ನು ಅಳಿಸಿ ಹಾಕಿದ್ದರು.

ಲಕ್ನೋ (ಮಾ.25): ಉತ್ತರ ಪ್ರದೇಶದಲ್ಲಿ ಅಸ್ತಿತ್ವಕ್ಕೆ ಬಂದ ಯೋಗಿ ಆದಿತ್ಯನಾಥ್ ನೇತೃತ್ವದ ನೂತನ ಸರ್ಕಾರದ ವಿರುದ್ಧ ಟೀಕೆ ಮಾಡಿದ್ದ ಐಪಿಎಸ್ ಅಧಿಕಾರಿಯನ್ನು ಅಮಾನತುಗೊಳಿಸಲಾಗಿದೆ.

ಯೋಗಿ ಆದಿತ್ಯನಾಥ್ ಅದಿಕಾರಕ್ಕೆ ಬಂದ ಬಳಿಕ ಹಿರಿಯ ಪೊಲೀಸ್ ಅಧಿಕಾರಿಗಳು ಯಾದವ್ ಹೆಸರಿರುವ ಕಿರಿಯ ಅಧಿಕಾರಿಗಳಿಗೆ ಕಿರುಕುಳ ನೀಡಲಾರಂಭಿಸಿದ್ದಾರೆ ಎಂದು  2010 ಬ್ಯಾಚಿನ ಐಪಿಎಸ್ ಅಧಿಕಾರಿಯಾಗಿರುವ ಹಿಮಾಂಶು ಕುಮಾರ್ ಟ್ವೀಟ್ ಮಾಡಿದ್ದರು. ಬಳಿಕ ಅವುಗಳನ್ನು ಅಳಿಸಿ ಹಾಕಿದ್ದರು.

ಜತೆಗೆ, ಹಿಮಾಂಶು ಕುಮಾರ್ ಮಾಡಿರುವ ಆರೊಪಗಳನ್ನು ತನಿಖಿಸಲು ಹಿರಿಯ ಅಧಿಕಾರಿಗಳು ಸೂಚಿಸಿದ್ದಾರೆನ್ನಲಾಗಿದೆ.

ವಜಾಗೊಳಿಸಿರುವ ಕ್ರಮಕ್ಕೆ ಪ್ರತಿಕ್ರಿಯಿಸಿರುವ ಹಿಮಾಂಶು ಕುಮಾರ್, ಸತ್ಯಮೇವ ಜಯತೇ ಎಂದು ಟ್ವೀಟ್ ಮಾಡಿದ್ದಾರೆ.

click me!