
ಬೆಂಗಳೂರು [ಆ.27]: ಬಹು ಅಂಗಾಂಗ ವೈಫಲ್ಯದಿಂದ ಬಳಲುತ್ತಿದ್ದ ಐಪಿಎಸ್ ಅಧಿಕಾರಿ ಆರ್.ರಮೇಶ್ (54) ಅವರು ಸೋಮವಾರ ಕೆಂಗೇರಿಯ ಬಿಜಿಎಸ್ ಆಸ್ಪತ್ರೆಯಲ್ಲಿ ನಿಧನರಾಗಿದ್ದಾರೆ. ಪ್ರಸ್ತುತ ರಮೇಶ್ ಅವರು ಯೋಜನೆ ಮತ್ತು ಆಧುನೀಕರಣ ವಿಭಾಗದ ಡಿಐಜಿ ಆಗಿದ್ದರು. ಅವರಿಗೆ ಪತ್ನಿ, ಪುತ್ರ ಹಾಗೂ ಪುತ್ರಿ ಇದ್ದಾರೆ.
2000ರಲ್ಲಿ ಕರ್ನಾಟಕ ಪೊಲೀಸ್ ಸೇವೆಗೆ ಸೇರಿದ್ದ ರಮೇಶ್ ಅವರು ಕಾರ್ಕಳ, ಸಾಗರ, ಚಿಂತಾಮಣಿ ಹಾಗೂ ಹೊಳೆನರಸೀಪುರ ಉಪ ವಿಭಾಗಗಳಲ್ಲಿ ಡಿವೈಎಸ್ಪಿ ಆಗಿ ನಂತರದಲ್ಲಿ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಹೆಚ್ಚುವರಿ ಎಸ್ಪಿ ಆಗಿ ಕಾರ್ಯನಿರ್ವಹಿಸಿದ್ದರು.
ಭಾರತೀಯ ಪೊಲೀಸ್ ಸೇವೆಗೆ (ಐಪಿಎಸ್) ಬಡ್ತಿ ಹೊಂದಿ ಉತ್ತರ ಕನ್ನಡ ಜಿಲ್ಲೆ, ಬೆಂಗಳೂರು ಗುಪ್ತದಳ ಹಾಗೂ ಇತರ ವಿಭಾಗಗಳಲ್ಲಿ ಎಸ್ಪಿಯಾಗಿ ಕೆಲಸ ಮಾಡಿದ್ದರು. ಬೆಂಗಳೂರು ಅಪರಾಧ ವಿಭಾಗದ ಡಿಸಿಪಿ ಹಾಗೂ ಅಗ್ನಿಶಾಮಕ ಮತ್ತು ತುರ್ತು ಸೇವೆಗಳ ಇಲಾಖೆಯ ಡಿಐಜಿ ಆಗಿಯೂ ಕೆಲಸ ಮಾಡಿದ್ದರು. ದಾಬಸ್‌ಪೇಟೆ ಸಮೀಪದ ಮೈಲನಹಳ್ಳಿಯಲ್ಲಿ ಅಂತ್ಯಕ್ರಿಯೆ ನೆರವೇರಿಸಲಾಯಿತು ಎಂದು ಕುಟುಂಬದವರು ತಿಳಿಸಿದ್ದಾರೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.