ಉಗ್ರ ಸಂಘಟನೆ ಸೇರಿದ ಐಪಿಎಸ್ ಅಧಿಕಾರಿ ಸಹೋದರ?

First Published Jun 3, 2018, 4:57 PM IST
Highlights

ಜಮ್ಮು ಮತ್ತು ಕಾಶ್ಮೀರದ ಐಪಿಎಸ್ ಅಧಿಕಾರಿಯೋರ್ವರ ಸಹೋದರ ಭಯೋತ್ಪಾದಕ ಸಂಘಟನೆ ಸೇರಿರುವ ಶಂಕೆ ವ್ಯಕ್ತವಾಗಿದೆ. ಶಮ್ಸ್ ಉಲ್ ಹಕ್ ಮೆಂಗ್ನೂ ಎಂಬ ಯುವಕನೇ ಉಗ್ರ ಸಂಘಟನೆ ಸೇರಿರುವ ಶಂಕೆ ವ್ಯಕ್ತವಾಗಿದೆ.

ಶ್ರೀನಗರ(ಜೂ.3): ಜಮ್ಮು ಮತ್ತು ಕಾಶ್ಮೀರದ ಐಪಿಎಸ್ ಅಧಿಕಾರಿಯೋರ್ವರ ಸಹೋದರ ಭಯೋತ್ಪಾದಕ ಸಂಘಟನೆ ಸೇರಿರುವ ಶಂಕೆ ವ್ಯಕ್ತವಾಗಿದೆ. ಶಮ್ಸ್ ಉಲ್ ಹಕ್ ಮೆಂಗ್ನೂ ಎಂಬ ಯುವಕನೇ ಉಗ್ರ ಸಂಘಟನೆ ಸೇರಿರುವ ಶಂಕೆ ವ್ಯಕ್ತವಾಗಿದೆ.

ಈತನ ಸಹೋದರ ಐಪಿಎಸ್ ಅಧಿಕಾರಿಯಾಗಿದ್ದು, ಬೇರೊಂದು ರಾಜ್ಯದಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದಾರೆ. ಶಮ್ಸ್ ಕಳೆದ ಮೇ 26ರಿಂದ ನಾಪತ್ತೆಯಾಗಿದ್ದು, ಈ ಕುರಿತು ಪೋಷಕರು ಪೊಲೀಸರ ಬಳಿ ದೂರು ನೀಡಿದ್ದಾರೆ. ಶಮ್ಸ್ ಉಗ್ರ ಸಂಘಟನೆ ಸೇರಿರುವ ಸಾಧ್ಯತೆ ಹೆಚ್ಚಿದೆ ಎಂದು ಪೊಲೀಸರು ಶಂಕೆ ವ್ಯಕ್ತಪಡಿಸಿದ್ದಾರೆ. 

ಶಮ್ಸ್‌ನನ್ನು ಸುರಕ್ಷಿತವಾಗಿ ಮರಳಿ ಕರೆತರುವ ಪ್ರಯತ್ನ ಮುಂದುವರೆಸಿರುವುದಾಗಿ ಹೇಳಿರುವ ಪೊಲೀಸರು, ಆತ ಉಗ್ರ ಸಂಘಟನೆಗಳ ಸಂಪರ್ಕಕ್ಕೆ ಹೇಗೆ ಬಂದ ಎಂಬುದರ ಕುರಿತು ತನಿಖೆ ನಡೆಸುತ್ತಿರುವುದಾಗಿ ತಿಳಿಸಿದ್ದಾರೆ.    

click me!