ಮಂಡ್ಯ ಜನರ ಮೇಲೆ ಸೇಡು ತೀರಿಸಿಕೊಳ್ಳುತ್ತಿದ್ದಾರಾ ಸಚಿವ ತಮ್ಮಣ್ಣ?

Published : Jun 08, 2019, 11:54 AM IST
ಮಂಡ್ಯ ಜನರ ಮೇಲೆ ಸೇಡು ತೀರಿಸಿಕೊಳ್ಳುತ್ತಿದ್ದಾರಾ ಸಚಿವ ತಮ್ಮಣ್ಣ?

ಸಾರಾಂಶ

ಸಚಿವ ಡಿಸಿ ತಮ್ಮಣ್ಣ ಮಂಡ್ಯದ ಜನರ ವಿರುದ್ಧ ಆಕ್ರೋಶ ಹೊರಹಾಕುತ್ತಿದ್ದಾರೆ. ಮಂಡ್ಯದಲ್ಲಿ ಲೋಕಸಭಾ ಚುನಾವಣೆಯಲ್ಲಿ ಜೆಡಿಎಸ್ ಸೋಲುಂಡಿದ್ದಕ್ಕೆ ಸೇಡು ತೀರಿಸಿಕೊಳ್ಳುತ್ತಿದ್ದಾರಾ ಎನ್ನುವ ಪ್ರಶ್ನೆ ಮೂಡಿದೆ.

ಮಂಡ್ಯ : ಲೋಕಸಭಾ ಚುನಾವಣೆಯಲ್ಲಿ ಮಂಡ್ಯ ಕ್ಷೇತ್ರದಲ್ಲಿ ಜೆಡಿಎಸ್ ಅಭ್ಯರ್ಥಿ ಪರಾಭವಗೊಂಡಿದ್ದು, ಈ ಘಟನೆಯ ಬಳಿಕ ಮಂಡ್ಯ ಮತದಾರರ ವಿರುದ್ಧ ಸಚಿವ ಡಿ.ಸಿ ತಮ್ಮಣ್ಣ ನಿರಂತರವಾಗಿ ತಮ್ಮ ಆಕ್ರೋಶ ಹೊರಹಾಕುತ್ತಿದ್ದಾರೆ. 
ಶುಕ್ರವಾರ ಮದ್ದೂರು ಕ್ಷೇತ್ರದ ವಿವಿಧ ಅಭಿವೃದ್ಧಿ ಕಾಮಗಾರಿ ಶಂಕುಸ್ಥಾಪನೆ ವೇಳೆ ಸಮಸ್ಯೆ ಹೇಳಿಕೊಳ್ಳಲು ಬಂದ ಜನರ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ. 

ಜೋಡೆತ್ತುಗಳು ಇಲ್ಲಿಗೆ ಬರುತ್ತವೆ ಅವರ ಬಳಿ ಹೇಳಿಕೊಳ್ಳಿ ಎಂದು ಪರೋಕ್ಷವಾಗಿ ದರ್ಶನ್ ಹಾಗೂ ಯಶ್ ಬಗ್ಗೆ ಹೇಳಿದ್ದಾರೆ. ಅಲ್ಲದೇ ಚುನಾವಣೆ ಸಂದರ್ಭದಲ್ಲಿ ಮತ ನೀಡದೇ ಈಗ ತಮ್ಮ ಬಳಿ ಬಂದು ಸಮಸ್ಯೆ ಹೇಳಿಕೊಳ್ಳುವುದೇಕೆ ಎನ್ನುವ ಅರ್ಥದಲ್ಲಿ ಮಾತನಾಡಿದ್ದಾರೆ. 

ನಾನು ಅಭಿವೃದ್ಧಿ ಪರವಾಗಿ ಕೆಲಸ ಮಾಡಿದ್ದೇನೆ. ನೀವು ಅದನ್ನು ನೆನೆಸಿಕೊಳ್ಳಲಿಲ್ಲ. ಈಗ ಬಂದು ಮಾತನಾಡುತ್ತೀರಾ ಎಂದು ಮತದಾರರ ವಿರುದ್ಧ ಸೇಡು ತೀರಿಸಿಕೊಳ್ಳುವಂತೆ ಮಾತನಾಡಿದ್ದಾರೆ.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

ಇಂಟರ್ನೆಟ್ ಇಲ್ಲದೆಯೂ UPI ಪಾವತಿ ಮಾಡಬಹುದು, *99# ಮೂಲಕ ಹಣ ಕಳುಹಿಸುವುದು ಹೇಗೆ?
ಸಿಎಂ, ಡಿಸಿಎಂ ನಡುವೆ ಬೂದಿ ಮುಚ್ಚಿದ ಕೆಂಡದ ಪರಿಸ್ಥಿತಿ: ಸಂಸದ ಜಗದೀಶ್ ಶೆಟ್ಟರ್