
ಹೈದರಾಬಾದ್ (ನ.27): ಐಸಿಸ್ ಸಂಘಟನೆಯು ಭಾರತಕ್ಕೆ ಸವಾಲಾಗಿಲ್ಲವೆಂದು ಕೇಂದ್ರ ಗೃಹ ಮಂತ್ರಿ ರಾಜನಾಥ್ ಸಿಂಗ್ ಹೇಳಿದ್ದಾರೆ.
ಭಾರತೀಯ ಮುಸ್ಲಿಮರು ದೇಶವನ್ನು ಪ್ರೀತಿಸುತ್ತಾರೆ, ಆದುದರಿಂದ ಐಸಿಸ್’ಗಳಂಥ ಸಂಘಟನೆಗಳು ದೇಶಕ್ಕೆ ಸವಾಲಾಗುವ ಸಾಧ್ಯತೆಗಳಿಲ್ಲ ಎಂದು ಅವರು ಹೇಳಿದ್ದಾರೆ.
ಹೈದರಾಬಾದ್’ನಲ್ಲಿ ನಡೆದ ಪೊಲೀಸ್ ಮಹಾನಿರ್ದೇಶಕರ ವಾರ್ಷಿಕ ಸಮ್ಮೇಳನದಲ್ಲಿ ಭಾಗವಹಿಸಿ ಮಾತನಾಡಿದ ರಾಜನಾಥ್ ಸಿಂಗ್, ಭದ್ರತೆ, ಭಯೋತ್ಪಾದನೆ, ತೀವ್ರವಾದ, ಸೈಬರ್-ಅಪರಾಧ ಹಾಗೂ ರಸ್ತೆ ಸುರಕ್ಷತೆ ವಿಚಾರದಲ್ಲಿ ಪೊಲೀಸ್ ಅಧಿಕಾರಿಗಳೊಂದಿಗೆ ಚರ್ಚಿಸಿದರು.
ಈ ವಿಚಾರದಲ್ಲಿ ಅಮಾಯಕರಿಗೆ ಯಾವುದೇ ರೀತಿಯ ತೊಂದರೆಯಾಗಕೂಡದು, ಹಾಗೂ ತಪ್ಪಿತಸ್ಥರು ಪಾರಾಗಬಾರದು ಎಂದು ಹೇಳಿದ್ದಾರೆ.
ರಾಷ್ಟ್ರೀಯ ತನಿಖಾ ದಳ (ಎನ್’ಐಏ)ಯು ಈವರೆಗೆ ದೇಶದ ವಿವಿಧ ಕಡೆಗಳಿಂದ ಐಸಿಸ್ ಜತೆ ಸಂಬಂಧವಿರುವ ಆರೋಪದಲ್ಲಿ 68 ಮಂದಿಯನ್ನು ಬಂಧಿಸಿದೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.