
ಬೆಂಗಳೂರು : ಇಸ್ಕಾನ್ ಪೂಜಾರಿ ಸಂಜಯ್ ಸತೀಶ್ನನ್ನು ಕೈ ಕಾಲು ಕಟ್ಟಿಹಾಕಿ ಚಾಕುವಿನಿಂದ ಇರಿದು ಕೊಲೆ ಮಾಡಿರುವ ಘಟನೆ ಕೆ.ಆರ್ ಪುರಂನ ಬೆತ್ತಲ್ ನಗರದಲ್ಲಿ ನಡೆದಿದೆ.
ಇಸ್ಕಾನ್ ದೇವಾಲಯದಲ್ಲಿ ಅರ್ಚಕರಾಗಿದ್ದ ಸಂಜಯ್ ಸತೀಶ್ ಬೆತ್ತಲ್ ನಗರದ ಅಪಾರ್ಟ್ಮೆಂಟ್ನಲ್ಲಿ ವಾಸವಾಗಿದ್ದರು. 15 ದಿನಗಳಿಗೊಮ್ಮೆ ಅಪಾರ್ಟ್ಮೆಂಟ್ಗೆ ಬಂದು ಒಂದೆರಡು ದಿನ ಉಳಿಯುತ್ತಿದ್ದ ಸಂಜಯ್ ಕಳೆದ ಬುಧವಾರದಂದು ಇಸ್ಕಾನ್ನಲ್ಲಿ ಪೂಜೆ ಮುಗಿಸಿಕೊಂಡು ಅಪಾರ್ಟ್ಮೆಂಟ್ಗೆ ಬಂದಿದ್ದಾರೆ.
ಈ ವೇಳೆಯಲ್ಲಿ ಅಪಾರ್ಟ್ಮೆಂಟ್ಗೆ ಬಂದಿರೋ ಕೆಲವು ದುಷ್ಕರ್ಮಿಗಳು ಆತನ ಕೈ ಕಾಲು ಕಟ್ಟಿ ಕೊಲೆ ಮಾಡಿದ್ದಾರೆ. ಆದರೆ ಕೊಲೆಯಾಗಿ ಒಂದು ವಾರ ಆದ್ರೂ ಅಕ್ಕಪಕ್ಕದ ಮನೆಯವರಿಗೆ ಈ ವಿಷ್ಯ ಗೊತ್ತಿರಲಿಲ್ಲ. ಕಳೆದ ರಾತ್ರಿ ಸಂಜಯ್ ಫ್ಲಾಟ್ನಿಂದ ದುರ್ವಾಸನೆ ಬರುತ್ತಿದ್ದ ಹಿನ್ನಲೆ ಅಕ್ಕಪಕ್ಕದ ಮನೆಯವರು ಕೆ.ಆರ್ ಪುರಂ ಪೊಲೀಸರಿಗೆ ಮಾಹಿತಿ ಕೊಟ್ಟಿದ್ದಾರೆ.
ಕೂಡಲೇ ಸ್ಥಳಕ್ಕೆ ಬಂದ ಪೊಲೀಸರು ಬೆರಳಚ್ಚು ತಜ್ಞರನ್ನು ಕರೆಹಿಸಿ ಪರಿಶೀಲನೆ ನಡೆಸಿದ್ದು ತನಿಖೆಯನ್ನು ಕೈಗೊಂಡಿದ್ದಾರೆ. ಆದರೆ ಅಕ್ಕಪಕ್ಕದವರು ಸಂಜಯ್ ಸತೀಶ್ ಸುಮಾರು ವರ್ಷಗಳಿಂದ ಒಬ್ಬರೇ ಫ್ಲಾಟ್ನಲ್ಲಿ ವಾಸವಾಗಿದ್ದು ಅವರ ಹಿನ್ನಲೆ ಗೊತ್ತಿಲ್ಲ ಅಂದಿದ್ದಾರೆ. ಸದ್ಯ ಮೃತದೇಹವನ್ನು ಮರಣೋತ್ತರ ಪರೀಕ್ಷೆಗೆ ಬೋರಿಂಗ್ ಆಸ್ಪತ್ರೆಗೆ ಕಳುಹಿಸಿದ್ದು ಪೊಲೀಸರು ತನಿಖೆಯನ್ನು ಮುಂದುವರೆಸಿದ್ದಾರೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.