ಆದಾಯ ತೆರಿಗೆ ಕಾಯಿದೆ ತಿದ್ದುಪಡಿ ಮಸೂದೆಗೆ ಲೋಕಸಭೆ ಅಂಗೀಕಾರ

By Suvarna Web DeskFirst Published Nov 29, 2016, 12:19 PM IST
Highlights

ಪ್ರತಿಪಕ್ಷಗಳ ತೀವ್ರ ಗದ್ದಲದ ನಡುವೆಯೂ ಯಾವುದೇ ಚರ್ಚೆ ಇಲ್ಲದೆ ಆದಾಯ ತೆರಿಗೆ ಕಾಯಿದೆ ತಿದ್ದುಪಡಿ ಮಸೂದೆಯನ್ನು ಅಂಗೀಕರಿಸಲಾಗಿದೆ.  ಇದು ಹಣಕಾಸು ಮಸೂದೆಯಾಗಿರುವುದರಿಂದ ರಾಜ್ಯಸಭೆಯಲ್ಲಿ ಮಂಡಿಸಿ ಅನುಮೋದನೆ ಪಡೆಯುವ ಅಗತ್ಯ ಇಲ್ಲ.

ನವದೆಹಲಿ (ನ.29): ಕಪ್ಪು ಕುಳಗಳಿಗೆ ಮತ್ತೊಂದು ಅವಕಾಶ ನೀಡುವುದಕ್ಕಾಗಿ ಕೇಂದ್ರ ಸರ್ಕಾರ ಮಂಡಿಸಿದ್ದ ನೂತನ ಆದಾಯ ತೆರಿಗೆ ಕಾಯಿದೆ ತಿದ್ದುಪಡಿ ಮಸೂದೆಯನ್ನು  ಇಂದು ಲೋಕಸಭೆಯಲ್ಲಿ ಅಂಗೀಕರಿಸಲಾಗಿದೆ.

ಕಪ್ಪು ಹಣದ ಮೇಲೆ ತೆರಿಗೆ ಹಾಗೂ ದಂಡ ವಿಧಿಸಲು ಅವಕಾಶ ನೀಡುವುದಕ್ಕಾಗಿ ಕೇಂದ್ರ ಸರ್ಕಾರ ಆದಾಯ ತೆರಿಗೆ ಕಾಯಿದೆಗೆ ತಿದ್ದುಪಡಿ ತಂದಿದ್ದು, ಕಪ್ಪು ಹಣದ ಮೇಲೆ ಶೇ.30ರಿಂದ ಶೇ.80ರಷ್ಟು ತೆರಿಗೆ ಹಾಗೂ ದಂಡ ವಿಧಿಸಲು ಅವಕಾಶ ಕಲ್ಪಿಸಲಾಗಿದೆ.

ಪ್ರತಿಪಕ್ಷಗಳ ತೀವ್ರ ಗದ್ದಲದ ನಡುವೆಯೂ ಯಾವುದೇ ಚರ್ಚೆ ಇಲ್ಲದೆ ಆದಾಯ ತೆರಿಗೆ ಕಾಯಿದೆ ತಿದ್ದುಪಡಿ ಮಸೂದೆಯನ್ನು ಅಂಗೀಕರಿಸಲಾಗಿದೆ.  ಇದು ಹಣಕಾಸು ಮಸೂದೆಯಾಗಿರುವುದರಿಂದ ರಾಜ್ಯಸಭೆಯಲ್ಲಿ ಮಂಡಿಸಿ ಅನುಮೋದನೆ ಪಡೆಯುವ ಅಗತ್ಯ ಇಲ್ಲ.

ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು 500 ಹಾಗೂ 1000 ರೂಪಾಯಿ ನೋಟುಗಳನ್ನು ನಿಷೇಧಿಸಿ ಮೂರು ವಾರಗಳ ನಂತರ, ನಿನ್ನೆ ವಿತ್ತ ಸಚಿವ ಅರುಣ್‌ ಜೇಟ್ಲಿ ಯವರು ಆದಾಯ ತೆರಿಗೆ ತಿದ್ದುಪಡಿ ಮಸೂದೆಯನ್ನು ಸಂಸತ್ತಿನಲ್ಲಿ  ಮಂಡಿಸಿದ್ದರು.

click me!