
ಬೆಂಗಳೂರು (ನ.06): ಸತತ 7ನೇ ಬಾರಿ ಐಟಿ ವಿಚಾರಣೆಗೆ ಸಚಿವ ಡಿಕೆಶಿ ಮತ್ತು ಕುಟುಂಬ ವರ್ಗದವರು ಹಾಜರಾಗಿದ್ದರು. ಪತ್ನಿ ಉಷಾ, ತಾಯಿ ಗೌರಮ್ಮ, ಹಾಗೂ ಮಗಳು ಐಶ್ವರ್ಯ ಜೊತೆ ಕ್ವೀನ್ಸ್ ರಸ್ತೆಯಲ್ಲಿ ಐಟಿ ಕಚೇರಿಯಲ್ಲಿ ವಿಚಾರಣೆಗೆ ಹಾಜರಾಗಿದ್ದಾರೆ. ಎಲ್ಲರನ್ನು ಪ್ರತ್ಯೇಕವಾಗಿ ಅಧಿಕಾರಿಗಳು ವಿಚಾರಣೆ ನಡೆಸಿದ್ದಾರೆ.
ಡಿಕೆಶಿ ಮನೆ ಮೇಲೆ ಐಟಿ ದಾಳಿ ನಡೆದಾಗ ಸುಮಾರು 300 ಕೋಟಿ ರೂ ಗಳಷ್ಟು ಕುಟುಂಬಸ್ಥರ ಹೆಸರಿನಲ್ಲಿ ಆಸ್ತಿ ಪಾಸ್ತಿ ದೊರೆತಿರುವ ಹಿನ್ನಲೆಯಲ್ಲಿ ಡಿಕೆಶಿ ಕುಟುಂಬಸ್ಥರಿಗೂ ಐಟಿ ಅಧಿಕಾರಿಗಳು ಪ್ರತ್ಯೇಕ ನೋಟಿಸ್ ನೀಡಿದ್ದರು. ಆದರೆ ಈ ಬಾರಿ ಲೆಕ್ಕ ಪರಿಶೋಧಕರನ್ನು ಜತೆಯಲ್ಲಿ ಕರೆ ತರುವುದಕ್ಕೆ ಐಟಿ ಇಲಾಖೆ ನಿರಾಕರಿಸಿದೆ. ಅದರಂತೆ ಡಿಕೆಶಿ ಕುಟುಂಬ ಸಮೇತ ವಿಚಾರಣೆಗೆ ಹಾಜರಾದರು.
ವಿಚಾರಣೆ ಮುಗಿಸಿ ಬಂದ ನಂತರ ಮಾಧ್ಯಮದವರೊಂದಿಗೆ ಮಾತನಾಡುತ್ತಾ, ಈಗಾಗಲೇ ವಿಚಾರಣೆಗೆ ಹಾಜರಾಗಿದ್ದೇನೆ. ಈ ಹಿಂದೆ ನೀಡಿದ್ದ ತೆರಿಗೆ ಮಾಹಿತಿಗಳು ಸಾಕಾಗಲ್ಲ. ಕುಟುಂಬ ಸಮೇತ ವಿಚಾರಣೆಗೆ ಹಾಜರಾಗಿ ಎಂದು ಐಟಿ ಅಧಿಕಾರಿಗಳು ನೋಟಿಸ್ ನೀಡಿದ್ದರು. ಹೀಗಾಗಿ ಕುಟುಂಬ ಸಮೇತ ವಿಚಾರಣೆಗೆ ಹಾಜರಾಗಿದ್ದೆವು. ಇಂದು ಐಟಿ ಅಧಿಕಾರಿಗಳಿಗೆ ಮತ್ತಷ್ಟು ಮಾಹಿತಿಗಳನ್ನು ನೀಡಿದ್ದೇನೆ. ನಾನೊಬ್ಬ ಸಾಮಾನ್ಯ ನಾಗರಿಕನಾಗಿ ಎಲ್ಲದಕ್ಕೂ ಉತ್ತರ ಕೊಟ್ಟಿದ್ದೇನೆ. ನಾನು ನ್ಯಾಯಬದ್ಧವಾಗಿದ್ದೇನೆ. ನ್ಯಾಯಬದ್ಧವಾಗಿಯೇ ಎಲ್ಲಾ ವ್ಯವಹಾರಗಳನ್ನು ಮಾಡಿದ್ದೇನೆ. ಸಿಬಿಐ ಸೇರಿದಂತೆ ಯಾವುದೇ ತನಿಖೆ ನಡೆಸಲಿ ಉತ್ತರಿಸುತ್ತೇನೆ. ಎಲ್ಲದಕ್ಕೂ ನಾನು ಮುಕ್ತವಾಗಿ ಉತ್ತರ ಕೊಡುತ್ತೇನೆ. ನನ್ನಿಂದ ತಪ್ಪಾಗಿದ್ದರೆ ಯಾವುದೇ ಶಿಕ್ಷೆಗೂ ಸಿದ್ಧನಿದ್ದೇನೆ. ನಾನು ತೆರೆದ ಪುಸ್ತಕ; ಯಾವುದಕ್ಕೂ ಹೆದರುವುದಿಲ್ಲ ಎಂದು ಡಿಕೆಶಿ ಹೇಳಿದ್ದಾರೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.