
ಚಿತ್ರದುರ್ಗ : ರಾಜ್ಯದಲ್ಲಿ ಅಬ್ಬರದಿಂದ ಚುನಾವಣೆ ನಡೆಯುತ್ತಿರುವ ಈ ಸಂದರ್ಭದಲ್ಲಿ ಸುಳ್ಳು ಸುದ್ದಿಯೊಂದು ಹರಡಿದೆ. ಚಿತ್ರದುರ್ಗದ ಮಾಜಿ ಸಚಿವ ತಿಪ್ಪೇಸ್ವಾಮಿ ಮೃತಪಟ್ಟಿದ್ದಾರೆ ಎಂದು ಸುಳ್ಳು ಸುದ್ದಿಯನ್ನು ಹಬ್ಬಿಸಲಾಗಿದೆ. ಈ ಬಗ್ಗೆ ಸಾಮಾಜಿಕ ಜಾಲತಾಣಗಳೆಲ್ಲಾ ಸುದ್ದಿ ಹರಿದಾಡುತ್ತಿದೆ.
ತಿಪ್ಪೇಸ್ವಾಮಿ ಅವರು ಚಿತ್ರದುರ್ಗ ಜಿಲ್ಲೆ ಚಳ್ಳಕೆರೆ ಕ್ಷೇತ್ರದ ಮಾಜಿ ಶಾಸಕರಾಗಿದ್ದು, ಈ ಸುದ್ದಿ ತಿಳಿಯುತ್ತಿದ್ದಂತೆ ಅತ್ಯಧಿಕ ಸಂಖ್ಯೆಯಲ್ಲಿ ಅಭಿಮಾನಿಗಳು ಅವರ ನಿವಾಸಕ್ಕೆ ಆಗಮಿಸಿದ್ದಾರೆ.
ತಿಪ್ಪೇಸ್ವಾಮಿ ಅವರ ಕಾಟಪ್ಪನಹಟ್ಟಿ ನಿವಾಸಕ್ಕೆ ಅಭಿಮಾನಿಗಳು, ಹಾಗೂ ಬೆಂಬಲಿಗರು ಬಂದು ಅವರ ಆರೋಗ್ಯವನ್ನು ವಿಚಾರಿಸಿದ್ದಾರೆ. ಅವರು ಆರೊಗ್ಯವಾಗಿರುವುದನ್ನು ಖಚಿತಪಡಿಸಿಕೊಂಡು ತೆರಳಿದ್ದಾರೆ.
ತಿಪ್ಪೇ ಸ್ವಾಮಿ ಅವರು ತಮ್ಮ ಮಗ ಕೆ.ಟಿ. ಕುಮಾರಸ್ವಾಮಿ ಪರ ಮತ ಯಾಚಿಸಲು ತೆರಳಿದ್ದರು. ಅವರ ಆರೋಗ್ಯ ಉತ್ತಮವಾಗಿದ್ದು, ಇದೊಂದು ಸುಳ್ಳು ಸುದ್ದಿ ಎಂದು ತಿಳಿದು ಬಂದಿದೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.