
ಬೆಂಗಳೂರು(ಆ.02): ರಾಜ್ಯದ ಪ್ರಭಾವಿ ಸಚಿವ ಡಿ ಕೆ ಶಿವಕುಮಾರ್ ಮೇಲೆ ಐಟಿ ಕಣ್ಣು ಬಿದ್ದಿದೆ. MLC ಎಲ್. ರವಿ, ಡಿ ಕೆ ಶಿವಕುಮಾರ್ ಹಾಗೂ ಡಿ. ಕೆ ಸುರೇಶ್ ಕುಮಾರ್ ನಿವಾಸದ ಮೇಲೆ ಐಟಿ ದಾಳಿ ನಡೆದಿದೆ. ಅಲ್ಲದೇ ಈಗಲ್'ಟನ್ ರೆಸಾರ್ಟ್'ನಲ್ಲೂ ಡಿ. ಕೆ ಸುರೇಶ್ ಮತ್ತು ಡಿ. ಕೆ ಶಿವಕುಮಾರ್ ಉಳಿದುಕೊಂಡಿದ್ದ ಕೊಠಡಿಗೂ ಐಟಿ ಅಧಿಕಾರಿಗಳು ದಾಳಿ ನಡೆಸಿದ್ದಾರೆ.
ಡಿ. ಕೆ ಶಿವಕುಮಾರ್ ಗುಜರಾತ್ ಕಾಂಗ್ರೆಸ್ ಶಾಸಕರ ವಾಸ್ತವ್ಯದ ಹೊಣೆ ಹೊತ್ತಿದ್ದರು. ಈ ಹಿನ್ನೆಲೆಯಲ್ಲಿ ಅಪಾರ ಪ್ರಮಾಣದ ಹಣ ಸಂಗ್ರಹದ ಶಂಕೆಯ ಮೇಲೆ ಐಟಿ ಅಧಿಕಾರಿಗಳು ಇಬ್ಬರೂ ಸಹೋದರರಿಗೆ ಮೊಬೈಲ್ ಕೂಡಾ ನೀಡದೆ ವಿಚಾರಣೆ ನಡೆಸುತ್ತಿದ್ದಾರೆ ಎಂಬ ವಿಚಾರ ತಿಳಿದು ಬಂದಿದೆ. 20ಕ್ಕೂ ಹೆಚ್ಚು ಐಟಿ ಅಧಿಕಾರಿಗಳು ದಾಳಿ ನಡೆಸಿದ್ದಾರೆ.
ಈ ಐಟಿ ದಾಳಿ ಕಾಂಗ್ರೆಸ್ ವಲಯಕ್ಕೆ ಒಂದು ಬಿಗ್ ಶಾಕ್ ಎನ್ನಬಹುದು. ಕಳೆದ ಕೆಲವು ದಿನಗಳಿಂದ ಗುಜರಾತ್'ನ ಕಾಂಗ್ರೆಸ್ ಶಾಸಕರು ಬೆಂಗಳೂರಿನ ಈಗಲ್ ಟನ್ ರೆಸಾರ್ಟ್'ನಲ್ಲಿ ವಾಸ್ತವ್ಯ ಹೂಡಿದ್ದರು. ಇನ್ನು ಈ ದಾಳಿಯ ಸಂದರ್ಭದಲ್ಲಿ ಆ ರೆಸಾರ್ಟ್'ನಲ್ಲಿ ಡಿಕೆ ಶಿವಕುಮಾರ್ ಹಾಗೂ ಡಿ. ಕೆ ಸುರೇಶ್ ಕುಮಾರ್ ತಂಗಿದ್ದ ಕೊಠಡಿಗಳ ಮೇಲೆ ದಾಳಿ ನಡೆದಿರುವುದು ತೀವ್ರ ಕುತೂಹಲ ಮೂಡಿಸಿದೆ.
ಇನ್ನು ಗುಜರಾತ್'ನ ಕಾಂಗ್ರೆಸ್ ಶಾಸಕರಿಗೆ ಆಶ್ರಯ ನೀಡಿದ್ದಾರೆ ಎಂಬ ಕಾರಣದಿಂದಲೇ ಡಿ. ಕೆ ಶಿವಕುಮಾರ್ ನಿವಾಸದ ಮೇಲೆ ದಾಳಿ ನಡೆಸಲಾಗಿದೆ ಎಂಬ ಮಾತುಗಳು ಕೇಳಿ ಬರುತ್ತಿವೆ. ಈ ಮೂಲಕ ಬಿಜೆಪಿ ರಾಷ್ಟ್ರಾಧ್ಯಕ್ಷ ಅಮಿತ್ ಶಾ ಮತ್ತು ಪ್ರಧಾನಿ ನರೇಂದ್ರ ಮೋದಿ ಡಿಕೆಶಿಯವರನ್ನು ಟಾರ್ಗೆಟ್ ಮಾಡಿದ್ದಾರೆ ಎನ್ನಲಾಗುತ್ತಿದೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.