
ಬೆಂಗಳೂರು (ನ.29): ಇಂದು ಬೆಳ್ಳಂಬೆಳಿಗ್ಗೆ ಐಟಿ ಅಧಿಕಾರಿಗಳು ಶಾಕ್ ನೀಡಿದ್ದಾರೆ. ಪ್ರಸೂತಿ ತಜ್ಞೆ ಕಾಮಿನಿರಾವ್ ಮನೆ ಹಾಗೂ ಆಸ್ಪತ್ರೆಗಳ ಮೇಲೆ ಐಟಿ ದಾಳಿ ಅಧಿಕಾರಿಗಳು ದಾಳಿ ನಡೆಸಿದ್ದಾರೆ.
ಶಿವಾನಂದ ಸರ್ಕಲ್ನಲ್ಲಿರುವ ಕಾಮಿನಿರಾವ್ ಅವರ ಮಿಲನ್ ಆಸ್ಪತ್ರೆ, ಐವಿಎಫ್ ಡಯಾಗ್ನಿಸ್ಟಿಕ್ಸ್ , ಮೆಡಿಕಲ್ ಗೂಡ್ಸ್ ಡಿಸ್ಟ್ರೂಬ್ಯೂಷನ್ ಸೇರಿದಂತೆ ವಿವಿಧೆಡೆ ಐಟಿ ದಾಳಿ ನಡೆದಿದೆ. ಕಾಮಿನಿರಾವ್ ಮಗ ಹಾಗೂ ಸೊಸೆಯನ್ನು ಐಟಿ ಅಧಿಕಾರಿಗಳು ವಿಚಾರಣೆಗೆ ಕರೆದೊಯ್ದಿದ್ದಾರೆ. ಈ ಬಗ್ಗೆ ಸುವರ್ಣನ್ಯೂಸ್'ಗೆ ಐಟಿ ಉನ್ನತ ಮೂಲಗಳಿಂದ ಮಾಹಿತಿ ಲಭ್ಯವಾಗಿದೆ.
ಕರ್ನಾಟಕದಲ್ಲಿ 29 ಕಡೆ, ಚೆನ್ನೈನಲ್ಲಿರುವ 7 ಐವಿಎಫ್ ಡಯೋಗ್ನಾಸ್ಟಿಕ್ ಸೆಂಟರ್'ಗಳ ಮೇಲೆ ಐಟಿ ದಾಳಿ ನಡೆದಿದೆ. ಒಟ್ಟು 800 ಕೋಟಿ ರೂ ತೆರಿಗೆ ವಂಚನೆ ಆರೋಪ ಕೇಳಿ ಬಂದಿದೆ. ಈ ಹಿನ್ನಲೆಯಲ್ಲಿ ದಾಳಿ ನಡೆಸಿದ ಐಟಿ ಅಧಿಕಾರಿಗಳು ದಾಖಲೆಗಳ ಪರಿಶೀಲನೆ ನಡೆಸುತ್ತಿದ್ದಾರೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.