ಸ್ಯಾಂಡಲ್‌ವುಡ್‌ಗೆ ಬಿಗ್ ಶಾಕ್ : ಶಿವಣ್ಣ, ಕಿಚ್ಚ, ಯಶ್ ಮನೆಗೂ ಐಟಿ ದಾಳಿ

Published : Jan 03, 2019, 11:05 AM ISTUpdated : Jan 03, 2019, 11:18 AM IST
ಸ್ಯಾಂಡಲ್‌ವುಡ್‌ಗೆ ಬಿಗ್ ಶಾಕ್ : ಶಿವಣ್ಣ, ಕಿಚ್ಚ, ಯಶ್  ಮನೆಗೂ ಐಟಿ ದಾಳಿ

ಸಾರಾಂಶ

ಸ್ಯಾಂಡಲ್ ವುಡ್ ಗೆ ಬೆಳ್ಳಂಬೆಳಗ್ಗೆ ಐಟಿ ಅಧಿಕಾರಿಗಳು ಶಾಕ್ ನೀಡಿದ್ದಾರೆ. ಗುರುವಾರ ಒಟ್ಟು 60 ಕಡೆ ದಾಳಿ ಮಾಡಿದ ಅಧಿಕಾರಿಗಳು ಶಿವರಾಜ್ ಕುಮಾರ್, ಯಶ್ ಹಾಗೂ ಸುದೀಪ್ ಮನೆ ಮೇಲೂ ದಾಳಿ ಮಾಡಿದ್ದಾರೆ. 

ಬೆಂಗಳೂರು (ಜ.03): ಸ್ಯಾಂಡಲ್ವುಡ್ ನಟ, ನಿರ್ದೇಶಕ ಹಾಗೂ ನಿರ್ಮಾಪಕರಿಗೆ ಇಂದು ಬೆಳ್ಳಂಬೆಳಿಗ್ಗೆ ಶಾಕ್ ಕೊಟ್ಟಿದ್ದಾರೆ ಐಟಿ ಅಧಿಕಾರಿಗಳು.

ಒಟ್ಟು 60 ಕಡೆ ದಾಳಿಯಾಗಿದ್ದು ಇದೀಗ ಸುದೀಪ್ ಹಾಗೂ ಯಶ್  ಹಾಗೂ ಶಿವರಾಜ್ ಕುಮಾರ್ ಗೂ ಕೂಡ ಐಟಿ ಅಧಿಕಾರಿಗಳು ಶಾಕ್ ನೀಡಿದ್ದಾರೆ. 

ನಟ ಪುನೀತ್ ರಾಜ್ ಕುಮಾರ್, ಶಿವರಾಜ್ ಕುಮಾರ್,  ನಿರ್ಮಾಪಕ ರಾಕ್ ಲೈನ್ ವೆಂಕಟೇಶ್, ಕೆಜಿಎಫ್ ನಿರ್ಮಾಪಕ ವಿಜಯ್ ಕಿರಗಂದೂರು ಹಾಗೂ ವಿಲನ್ ಚಿತ್ರದ ನಿರ್ಮಾಪಕ ಸಿ.ಆರ್.ಮನೋಹರ್,  ನಿವಾಸದ ಮೇಲೆ ಆದಾಯ ತೆರಿಗೆ ಅಧಿಕಾರಿಗಳು ಏಕಕಾಲದಲ್ಲಿ ದಾಳಿ ನಡೆಸಿದ್ದಾರೆ. 

ಸ್ಯಾಂಡಲ್‌ವುಡ್‌ಗೆ ಬಿಗ್ ಶಾಕ್ ! ಸ್ಟಾರ್ ನಟ, ನಿರ್ಮಾಪಕರ ಮನೆ ಮೇಲೆ ಐಟಿ ದಾಳಿ

ಸದಾಶಿವನಗರದ ಪುನೀತ್ ರಾಜ್ ಕುಮಾರ್ ನಿವಾಸ, ನಾಗವಾರದಲ್ಲಿರುವ ಶಿವರಾಜ್ ಕುಮಾರ್ ನಿವಾಸ,  ಮಹಾಲಕ್ಷ್ಮಿ ಲೇಔಟ್‌ನ ನಾಗಪುರದ ರಾಕ್ ಲೈನ್ ವೆಂಕಟೇಶ್ ನಿವಾಸ, ನಾಗರಬಾವಿಯ ವಿಜಯ್ ಕಿರಗಂದೂರು ನಿವಾಸ ಹಾಗೂ ಎಚ್ಎಸ್ಆರ್ ಲೇಔಟ್ ನಲ್ಲಿರುವ ಮನೋಹರ್ ನಿವಾಸದ ಮೇಲೆ ದಾಳಿ ನಡೆದಿದೆ.  ಸಂಬಂಧಪಟ್ಟ ದಾಖಲೆಗಳನ್ನು ಪರಿಶೀಲನೆ ನಡೆಸಿದ್ದಾರೆ. 

ಯಶ್ ಅಭಿನಯದ ಕೆಜಿಎಫ್ ಚಿತ್ರ ಸದ್ಯ ಸದ್ದು ಮಾಡಿತ್ತಿದೆ. ಇತ್ತ ನಟ ಸುದೀಪ್ ವಿಲನ್ ಚಿತ್ರ ಕೆಲ ದಿನಗಳ ಹಿಂದಷ್ಟೇ ಸುದ್ದಿ ಮಾಡಿತ್ತು. ಬೆಳ್ಳಂಬೆಳಗ್ಗೆ 7 ಗಂಟೆಯಿಂದಲೇ ಐಟಿ ಅಧಿಕಾರಿಗಳ ತಂಡ ದಾಳಿ ನಡೆಸಿದೆ. 

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

ಪಶ್ಚಿಮ ಬಂಗಾಳದಲ್ಲಿ ಬಾಬ್ರಿ ಮಸೀದಿಗೆ ಅಡಿಗಲ್ಲು ಹಾಕಿದ ಟಿಎಂಸಿ ಶಾಸಕ
'ಅಫಿಡವಿಟ್‌ನಲ್ಲಿ ಡಿಕ್ಲೇರ್ ಮಾಡಿದ್ದರೂ ಟೀಕೆ 'ಚಿಲ್ಲರ್ ಕೆಲಸ': ಸಿಎಂ ಡಿಸಿಎಂ ದುಬಾರಿ ವಾಚ್ ಬಗ್ಗೆ ಬಿಜೆಪಿ ಹೇಳಿಕೆಗೆ ಕಾಶೆಪ್ಪನವರು ಕಿಡಿ