
ಬೆಂಗಳೂರು(ಫೆ.11): ಹೊಸಕೋಟೆ ಕಾಂಗ್ರೆಸ್ ಶಾಸಕ ಎಂಟಿಬಿ ನಾಗರಾಜ್ ಅವರ ಮನೆ ಮೇಲೆ ಆದಾಯ ತೆರಿಗೆ ಅಧಿಕಾರಿಗಳು ದಾಳಿ ನಡೆಸಿದ್ದು, 1.10 ಕೋಟಿ ನಗದು, 10 ಕೆಜಿ ಚಿನ್ನ, 560 ಎಕರೆ ಭೂ ದಾಖಲೆಯ ಪತ್ರಗಳು ಸೇರಿದಂತೆ 120 ಕೋಟಿಗೂ ಹೆಚ್ಚು ಅಕ್ರಮ ಆಸ್ತಿಯನ್ನು ಪತ್ತೆ ಹಚ್ಚಿದ್ದಾರೆ. ಮನೆ, ವಾಣಿಜ್ಯ ಕಟ್ಟಡಗಳು ಸೇರಿದಂತೆ 3500 ಆಸ್ತಿ ಪಾಸ್ತಿ ಪತ್ತೆ ಹಚ್ಚಿದ್ದಾರೆ. ಅಲ್ಲದೆ ಶಾಸಕರು ಅಕ್ರಮ ಆಸ್ತಿಗಳಿಗೆ ಹಲವು ವರ್ಷಗಳಿಂದ ಆದಾಯ ತೆರಿಗೆಯನ್ನು ಪಾವತಿಸಿಲ್ಲ. ರಿಯಲ್ ಎಸ್ಟೇಟ್ ವ್ಯವಹಾರದಲ್ಲಿ 75 ಕೋಟಿ ರೂ. ಹಣ ಸ್ವಿಕರಿಸದ್ದು, ಇದಕ್ಕೆ ಲೆಕ್ಕ ತೋರಿಸದೆ ವಂಚಿಸಿದ್ದಾರೆ ಎನ್ನಲಾಗಿದೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.