
ನವದೆಹಲಿ[ಜು.12]: ನವದೆಹ; ಕಳೆದ 18 ವರ್ಷಗಳಲ್ಲಿ ಇದೇ ಮೊದಲ ಬಾರಿ ಲೋಕಸಭೆಯಲ್ಲಿ ಮಧ್ಯರಾತ್ರಿವರೆಗೆ ಚರ್ಚೆ ನಡೆದಿದೆ. ರೈಲ್ವೇ ಅನುದಾನಕ್ಕೆ ಸಂಬಂಧಿಸಿದಂತೆ ತಡರಾತ್ರಿ ಸುಮಾರು 12 ಗಂಟೆಯವರೆಗೆ ಮುಂದುವರೆದ ಈ ಕಲಾಪದಲ್ಲಿ ವಿಪಕ್ಷ ನಾಯಕರೂ ಹಾಜರಿದ್ದರು ಎಂಬುವುದು ಉಲ್ಲೇಖನೀಯ.
ಲೋಕಸಭೆಯಲ್ಲಿ ಗುರುವಾರದಂದು 2019-20ನೇ ವರ್ಷದ ರೈಲ್ವೇ ಇಲಾಖೆಯ ನಿಯಂತ್ರಣದಲ್ಲಿರುವ ಅನುದಾನಗಳಿಗೆ ಸಂಬಂಧಿಸಿದಂತೆ ಸಂಸದರು ತಡ ರಾತ್ರಿಯವರೆಗೆ ಚರ್ಚೆ ನಡೆಸಿದರು. ಸಂಸತ್ತಿನ ಕೆಳಮನೆ[ಲೋಕಸಭೆ]ಯಲ್ಲಿ ಚರ್ಚೆ ನಡೆದಿದ್ದು, ಸುಮಾರು 100 ಸದಸ್ಯರು ಇದರಲ್ಲಿ ಪಾಲ್ಗೊಂಡು, ತಮ್ಮ ಕ್ಷೇತ್ರಕ್ಕೆ ಸಂಬಂಧಿಸಿದ ವಿಚಾರಗಳನ್ನು ಪ್ರಸ್ತಾಪಿಸಿದರು.
ಮಧ್ಯರಾತ್ರಿವರೆಗೆ ನಡೆದ ಲೋಕಸಭಾ ಕಲಾಪದ ಬಳಿಕ ಮಾಧ್ಯಮಗಳಿಗೆ ಪ್ರತಿಕ್ರಿಯಿಸಿದ ರೈಲ್ವೇ ರಾಜ್ಯ ಸಚಿವ ಸುರೇಶ್ ಅಂಗಡಿ 'ರೈಲ್ವೇ ಒಂದು ಕುಟುಂಬದಂತೆ. ಇದು ಎಲ್ಲರನ್ನೂ ಒಗ್ಗೂಡಿಸುತ್ತದೆ ಹಾಗೂ ಎಲ್ಲರಿಗೂ ಖುಷಿ ಕೊಡುತ್ತದೆ. ಎಲ್ಲಾ ಸದಸ್ಯರು ಉತ್ತಮ ಸಲಹೆಗಳನ್ನು ನೀಡುತ್ತಾರೆ. ಮೋದಿ ಪ್ರಧಾನಿಯಾದ ಬಳಿಕ ಈ ಇಲಾಖೆಯಲ್ಲಿ ಮಹತ್ವದ ಬದಲಾವಣೆಗಳಾಗಿವೆ. ವಾಜಪೇಯಿ ಪ್ರಧಾನಿಯಾಗಿದ್ದಾಗ ಹೆದ್ದಾರಿಗಳನ್ನು ಅಭಿವೃದ್ಧಿಪಡಿಸಿದರು. ಮೋದಿ ರೈಲ್ವೇ ಅಭಿವೃದ್ಧಿಪಡಿಸುತ್ತಿದ್ದಾರೆ' ಎಂದಿದ್ದಾರೆ.
ಸಂದೀಯ ವ್ಯವಹಾರಗಳ ಸಚಿವ ಪ್ರಹ್ಲಾದ್ ಜೋಷಿ ತಡ ರಾತ್ರಿಯವರೆಗೆ ಸದನ ಕಲಾಪಕ್ಕೆ ಅವಕಾಶ ಮಾಡಿಕೊಟ್ಟ ಲೋಕಸಭಾ ಸ್ಪೀಕರ್ ಓಂ ಬಿರ್ಲಾರಿಗೆ ಧನ್ಯವಾದ ತಿಳಿಸಿದ್ದಾರೆ. 'ಸುಮಾರು 18 ವರ್ಷಗಳ ಬಳಿಕ ಇದೇ ಮೊದಲ ಬಾರಿ ಸದನದಲ್ಲಿ ತಡ ರಾತ್ರಿವರೆಗೆ ಕಲಾಪ ಮುಂದುವರೆದಿದೆ' ಎಂದಿದ್ದಾರೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.