
ಬೆಂಗಳೂರು (ಸೆ. 21): ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆಯಲ್ಲಿ ಬಲಪಂಥೀಯರನ್ನೇ ಟಾರ್ಗೆಟ್ ಮಾಡಲಾಗುತ್ತಿದೆ. ದಾಬೋಲ್ಕರ್, ಪನ್ಸಾರೆ, ಎಂ.ಎಂ.ಕಲ್ಬುರ್ಗಿ ಮತ್ತು ಗೌರಿ ಲಂಕೇಶ್ ಹತ್ಯೆಯನ್ನು ಬಲಪಂಥೀಯರೇ ನಡೆಸಿದ್ದಾರೆ ಎಂದು ಕೆಲವರು ಬಿಂಬಿಸುತ್ತಿರುವುದು ಖಂಡನೀಯ ಎಂದು ಸನಾತನ ಸಂಸ್ಥೆಯ ಕಾರ್ಯಕರ್ತರು ಸುದ್ದಿಗೋಷ್ಠಿ ಹೇಳಿದ್ದಾರೆ.
ಗೌರಿ ಲಂಕೇಶ್ ಹತ್ಯೆ ಪ್ರಕರಣದ ತನಿಖೆ ನಡೆಸುತ್ತಿರುವ ಎಸ್ಐಟಿ ತಂಡ, ಸನಾತನ ಸಂಸ್ಥೆ ಆಯೋಜಿಸಿದ್ದ ಸುದ್ದಿಗೋಷ್ಠಿ ಮೇಲೂ ಕಣ್ಣಿಟ್ಟಿತ್ತು. 8 ಜನರ ಎಸ್ಐಟಿ ತಂಡ ಮಾಹಿತಿಗಾಗಿ ಸುದ್ದಿಗೋಷ್ಠಿ ರೆಕಾರ್ಡ್ ಮಾಡಿತು. ಸನಾತನ ಸಂಸ್ಥೆಯ ವಕ್ತಾರ ಚೇತನ ರಾಜಹಂಸ, ಹಿಂದೂ ಜನಜಾಗೃತಿ ಸಮಿತಿ ರಾಷ್ಟ್ರೀಯ ವಕ್ತಾರ ರಮೇಶ್ ಶಿಂಧೆ, ಹಿಂದೂ ವಿಧಿಜಷ ಪರಿಷತ್ ರಾಷ್ಟ್ರೀಯ ಅಧ್ಯಕ್ಷ ವೀರೇಂದ್ರ ಇಚಲಕರಂಜಿಕರ, ನ್ಯಾಯವಾದಿ ಸಂಜೀವ್ ಪುನಾಲ್ಕರ್, ವಕೀಲ ಅಮೃತೇಶ್ ಸುದ್ದಿಗೋಷ್ಟಿಯಲ್ಲಿ ಭಾಗವಹಿಸಿದ್ದರು. ಸಂಜೀವ್ ಪುನಲೇಕರ್ ಮಾತನಾಡಿ, ಗೌರಿ ಹತ್ಯೆಯಲ್ಲಿ ರಾಜಕೀಯ ಒತ್ತಡದ ತನಿಖೆ ನಡೆಯುತ್ತಿದೆ. ಮಾಲೇಗಾಂವ್ ಸ್ಫೋಟ ಪ್ರಕರಣದಲ್ಲಿ ಹಿಂದೂ ಕಾರ್ಯಕರ್ತರೆ ಮಾಡಿದ್ದಾರೆ ಎಂದು ಸುದ್ದಿ ಎಬ್ಬಿಸಲಾಗಿತ್ತು. ಅಂತಿಮ ತೀರ್ಪಿನಲ್ಲಿ ಹಿಂದೂಪರ ಕಾರ್ಯಕರ್ತರು ಭಾಗವಹಿಸಿಲ್ಲ ಗೊತ್ತಾಗಿದೆ. ಅದೇ ರೀತಿ ದಾಬೊಲ್ಕರ್, ಪನ್ಸಾರೆ, ಎಂ.ಎಂ. ಕಲ್ಬುರ್ಗಿ, ಗೌರಿ ಲಂಕೇಶ್ ಹತ್ಯೆಯಲ್ಲಿಯೂ ಬಲ ಬಂಥೀಯರೇ ಮಾಡಿದ್ದಾರೆ ಎಂದು ಗಾಳಿ ಸುದ್ದಿ ಹರಡಿಸುತ್ತಿದ್ದಾರೆ. ಇದು ಖಂಡನೀಯ. ಆರೋಪಗಳಿಗೆ ಯಾವುದೇ ಸಾಕ್ಷಿಗಳಿದ್ದರೆ ಅದನ್ನು ತನಿಖಾಧಿಕಾರಿಗಳಿಗೆ ಸಲ್ಲಿಸಲಿ. ಅದನ್ನು ಬಿಟ್ಟು ಸುಳ್ಳು ಸುದ್ದಿ ಹರಡಿಸುವ ಮೂಲಕ ಸನಾತನ ಧರ್ಮಕ್ಕೆ ಕೆಟ್ಟ ಹೆಸರು ತರುವ ಪ್ರಯತ್ನ ನಡೆಯುತ್ತಿದೆ ಎಂದು ಆರೋಪಿಸಿದರು. ಸನಾತನ ಸಂಸ್ಥೆಯ ವಕ್ತಾರ ಚೇತನ ರಾಜಹಂಸ ಮತನಾಡಿ, ಗೌರಿ ಹತ್ಯೆ ಕೇಸಲ್ಲಿ ಬಲಪಂಥಿಯರನ್ನು ಟಾರ್ಗೆಟ್ ಮಾಡಲಾಗುತ್ತಿದೆ. ಎಸ್ಐಟಿ ಅಧಿಕಾರಿ ತನಿಖೆಯನ್ನು ನಾವು ಪ್ರಶ್ನೆ ಮಾಡುತ್ತಿಲ್ಲ. ಆದರೆ ಅನಾವಶ್ಯಕವಾಗಿ ಹಿಂದೂಪರ ಕಾರ್ಯಕರ್ತರ ಮೇಲೆ ಕಣ್ಣಿಟ್ಟಿರುವುದು ಏಕೆ ಎಂದು ಪ್ರಶ್ನಿಸಿದರು. ಗೌರಿ ತನಿಖೆಯಂತೆ ದಾಬೋಲ್ಕರ್ , ಪನ್ಸಾರೆ ಹತ್ಯೆ ನ್ಯಾಯಯುತವಾಗಿ ನಡೆಯುತ್ತಿಲ್ಲ. ತನಿಖಾಧಿಕಾರಿಗಳು ಪಾರದರ್ಶಕವಾಗಿ ತನಿಖೆ ನಡೆಸಿದರೆ ಸಂಪೂರ್ಣ ಸಹಕಾರ ನೀಡುತ್ತೇವೆ ಆದರೆ ಸಾಕ್ಷಾಧಾರಗಳಿಲ್ಲದೆ ಆರೋಪ ಮಾಡುವುದನ್ನು ಖಂಡಿಸುತ್ತೇವೆ ಎಂದರು.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.