ಯಡಿಯೂರಪ್ಪರಲ್ಲಿ ಹಿಂದೂ ಅಲ್ಲ, ಹಿಂದುತ್ವ ಭಾವನೆ ಇದೆ: ರಾಯರೆಡ್ಡಿ

Published : Jul 24, 2017, 04:37 PM ISTUpdated : Apr 11, 2018, 01:13 PM IST
ಯಡಿಯೂರಪ್ಪರಲ್ಲಿ ಹಿಂದೂ ಅಲ್ಲ, ಹಿಂದುತ್ವ ಭಾವನೆ ಇದೆ: ರಾಯರೆಡ್ಡಿ

ಸಾರಾಂಶ

ರತ್ಯೇಕ ಲಿಂಗಾಯತ ಧರ್ಮ ಮಾನ್ಯತೆಗೆ ಸಂಬಂಧಿಸಿ ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ಬಿಜೆಪಿ ರಾಜ್ಯಾಧ್ಯಕ್ಷ ಬಿ,ಎಸ್. ಯಡಿಯೂರಪಪ್ಪ ಮಾಡಿರುವ ಆರೋಪಗಳನ್ನು ಸಚಿವ ರಾಯರೆಡ್ಡಿ ಖಂಡಿಸಿದ್ದಾರೆ. ವಿಧಾನಸೌಧದಲ್ಲಿ ಮಾದ್ಯಮಗಳನ್ನುದ್ದೇಶಿಸಿ ಮಾತನಾಡಿದ  ಉನ್ನತ ಶಿಕ್ಷಣ ಸಚಿವ ಬಸವರಾಜ ರಾಯರೆಡ್ಡಿ, ಸಿಎಂ ಸಿದ್ದರಾಮಯ್ಯ ಲಿಂಗಾಯತ, ವೀರಶೈವ ಧರ್ಮವನ್ನು ಒಡೆಯಲು ಹೊರಟಿಲ್ಲ ಎಂದಿದ್ದಾರೆ

ಬೆಂಗಳೂರು: ಪ್ರತ್ಯೇಕ ಲಿಂಗಾಯತ ಧರ್ಮ ಮಾನ್ಯತೆಗೆ ಸಂಬಂಧಿಸಿ ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ಬಿಜೆಪಿ ರಾಜ್ಯಾಧ್ಯಕ್ಷ ಬಿ,ಎಸ್. ಯಡಿಯೂರಪಪ್ಪ ಮಾಡಿರುವ ಆರೋಪಗಳನ್ನು ಸಚಿವ ರಾಯರೆಡ್ಡಿ ಖಂಡಿಸಿದ್ದಾರೆ.

ವಿಧಾನಸೌಧದಲ್ಲಿ ಮಾದ್ಯಮಗಳನ್ನುದ್ದೇಶಿಸಿ ಮಾತನಾಡಿದ  ಉನ್ನತ ಶಿಕ್ಷಣ ಸಚಿವ ಬಸವರಾಜ ರಾಯರೆಡ್ಡಿ, ಸಿಎಂ ಸಿದ್ದರಾಮಯ್ಯ ಲಿಂಗಾಯತ, ವೀರಶೈವ ಧರ್ಮವನ್ನು ಒಡೆಯಲು ಹೊರಟಿಲ್ಲ. ಬದಲಾಗಿ ವೀರಶೈವ ಮಹಾಸಭಾದಿಂದ ಧರ್ಮವನ್ನಾಗಿ ಮಾಡಬೇಕೆಂದು ಮನವಿ ಮಾಡಿದ್ದಾರೆ, ಎಂದು ಹೇಳಿದ್ದಾರೆ.

ಸಿದ್ದರಾಮಯ್ಯ ಯಾವತ್ತೂ ಜಾತಿ ಒಡೆಯುವ, ಧರ್ಮದ ಬಗ್ಗೆ ಮಾತನಾಡಿಲ್ಲ. ಯಡಿಯೂರಪ್ಪ ವಿನಾಕಾರಣ ಆರೋಪ ಮಾಡುತ್ತಿರುವುದು ಸರಿಯಲ್ಲ, ಜಾತಿ, ಧರ್ಮ ಅನ್ನೋದು ಬಹಳ ಸೂಕ್ಷ್ಮ ವಿಚಾರ, ಜವಾಬ್ದಾರಿಯುತ ಸ್ಥಾನದಲ್ಲಿರೋರು ಇಂತಹ ಆರೋಪ ಮಾಡಬಾರದು ಎಂದು ರಾಯರೆಡ್ಡಿ ಹೇಳಿದ್ದಾರೆ.

ಲಿಂಗಾಯತ ಧರ್ಮಕ್ಕೆ ಪ್ರತ್ಯೇಕ ಮಾನ್ಯತೆ ವಿಷಯದಲ್ಲಿ, ಸಿದ್ದರಾಮಯ್ಯ ಜಾತಿ ವಿಷಬೀಜ ಬಿತ್ತುತ್ತಿದ್ದಾರೆ ಎಂದು ಮಾಜಿ ಸಿಎಂ ಯಡಿಯೂರಪ್ಪ ಆರೋಪಿಸಿದ್ದರು.

ಯಡಿಯೂರಪ್ಪ ಲಿಂಗಾಯತ ಮುಖಂಡ ಎಂದು ಹೇಳಿಕೊಳ್ಳುತ್ತಿದ್ದಾರೆ. ಆದರೆ ಅವರು ಲಿಂಗಾಯತ ಧರ್ಮಕ್ಕೆ ವಿರೋಧ ವ್ಯಕ್ತಪಡಿಸಬಾರದು. ಬಿಎಸ್ ವೈ ಪಕ್ಕಾ ಆರೆಸ್ಸೆಸ್’ ವಾದಿ. ಬಿಜೆಪಿ ಕಚೇರಿಯಲ್ಲಿ ಬಸವಣ್ಣನ  ಫೋಟೋ ಹಾಕಿದ್ದಾರೆಯೇ ? ಎಂದು ರಾಯರೆಡ್ಡಿ ಪ್ರಶ್ನಿಸಿದ್ದಾರೆ.

ಲಿಂಗಾಯತ ಮತ್ತು ವೀರಶೈವ ಧರ್ಮ ಹಿಂದುತ್ವದ ಒಂದು ಅಂಗ ಎಂದು ಯಡಿಯೂರಪ್ಪ ಹೇಳಿದ್ದಾರೆ. ಅವರಲ್ಲಿ ಹಿಂದೂ ಧರ್ಮ ಅನ್ನೋದಿಲ್ಲ. ಹಿಂದುತ್ವ ಅನ್ನೋ ಭಾವನೆ ಇದೆ, ಎಂದು ರಾಯರೆಡ್ಡಿ ಹೇಳಿದ್ದಾರೆ.

 

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

ಮಹಾರಾಷ್ಟ್ರದಲ್ಲಿ ಬಿಜೆಪಿ ಗೆದ್ದರೂ ಸೂರ್ಯವಂಶಿ ಕುಟುಂಬಕ್ಕೆ ಅಘಾತ, ಆರಕ್ಕೆ 6 ಸದಸ್ಯರಿಗೆ ಸೋಲು
ಬಿಡದಿ ಟೌನ್ ಶಿಪ್ ಜಿದ್ದಿನಿಂದ ಅನುಷ್ಠಾನ ಮಾಡುತ್ತಿಲ್ಲ: ಶಾಸಕ ಎಚ್.ಸಿ.ಬಾಲಕೃಷ್ಣ