ಅಕ್ರಮ ಆಸ್ತಿ ಪ್ರಕರಣ: ಜಯಲಲಿತಾರನ್ನು ದೋಷಿಯೆಂದು ಘೋಷಿಸಲು ಸಾಧ್ಯವಿಲ್ಲ

Published : Apr 05, 2017, 06:00 AM ISTUpdated : Apr 11, 2018, 12:56 PM IST
ಅಕ್ರಮ ಆಸ್ತಿ ಪ್ರಕರಣ: ಜಯಲಲಿತಾರನ್ನು ದೋಷಿಯೆಂದು ಘೋಷಿಸಲು ಸಾಧ್ಯವಿಲ್ಲ

ಸಾರಾಂಶ

ಕರ್ನಾಟಕದ ಮನವಿಯನ್ನು ತಿರಸ್ಕರಿಸುತ್ತಾ, ಅಕ್ರಮ ಆಸ್ತಿ ಗಳಿಕೆ ಪ್ರಕರಣದಲ್ಲಿ ತಮಿಳುನಾಡು ಮುಖ್ಯಮಂತ್ರಿ ದಿ. ಜಯಲಲಿತಾರವರನ್ನು ದೋಷಿ ಎಂದು ಘೋಷಿಸಲು ಸಾಧ್ಯವಿಲ್ಲ ಎಂದು ಸುಪ್ರೀಂಕೋರ್ಟ್ ಹೇಳಿದೆ.

ನವದೆಹಲಿ (ಏ.05): ಕರ್ನಾಟಕದ ಮನವಿಯನ್ನು ತಿರಸ್ಕರಿಸುತ್ತಾ, ಅಕ್ರಮ ಆಸ್ತಿ ಗಳಿಕೆ ಪ್ರಕರಣದಲ್ಲಿ ತಮಿಳುನಾಡು ಮುಖ್ಯಮಂತ್ರಿ ದಿ. ಜಯಲಲಿತಾರವರನ್ನು ದೋಷಿ ಎಂದು ಘೋಷಿಸಲು ಸಾಧ್ಯವಿಲ್ಲ ಎಂದು ಸುಪ್ರೀಂಕೋರ್ಟ್ ಹೇಳಿದೆ.

ಅಕ್ರಮ ಆಸ್ತಿ ಪ್ರಕರಣದಲ್ಲಿ ಎಐಡಿಎಂಕೆ ಮುಖ್ಯಸ್ಥೆಯಾಗಿದ್ದ ಜಯಲಲಿತಾರನ್ನು ಕೈಬಿಟ್ಟಿರುವುದನ್ನು ಪ್ರಶ್ನಿಸಿ, ಈಗಾಗಲೇ ನೀಡಿರುವ ಪ್ರಕರಣದ ತೀರ್ಪನ್ನು ಮರುಪರಿಶೀಲಿಸಬೇಕೆಂದು ಕಳೆದ ತಿಂಗಳು ಕರ್ನಾಟಕ ಸುಪ್ರೀಂಕೋರ್ಟ್ ಮೊರೆ ಹೋಗಿತ್ತು.

ವಿಚಾರಣಾ ಪ್ರಕ್ರಿಯೆಗಳು ಕಡಿಮೆಯಾದರೆ 100 ಕೋಟಿ ರೂಗಳನ್ನು ವಸೂಲು ಮಾಡುವುದು ಕಷ್ಟಸಾಧ್ಯವಾಗುತ್ತದೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಜಯಲಲಿತಾರನ್ನು  ಪರಪ್ಪನ ಅಗ್ರಹಾರದಲ್ಲಿ ಇಟ್ಟಿದ್ದಾಗ ಕರ್ನಾಟಕ ಸರ್ಕಾರ 100 ಕೋಟಿ ರೂ. ಖರ್ಚು ಮಾಡಿತ್ತು.

ಶಶಿಕಲಾ ಸೇರಿದಂತೆ ಇಬ್ಬರನ್ನು ದೋಷಿ ಎಂದು ನ್ಯಾಯಾಲಯ ತೀರ್ಪು ನೀಡಿದೆ. ಜಯಲಲಿತಾ ನಿಧನದ ಹಿನ್ನೆಲೆಯಲ್ಲಿ ಅವರ ಹೆಸರನ್ನು ಕೈಬಿಡಲಾಗಿದೆ.  ಅವರಿಗಾಗಿ ಖರ್ಚು ಮಾಡಿರುವ ಹಣವನ್ನು ವಾಪಸ್ ಪಡೆಯಬಹುದು ಎಂದು ಕೋರ್ಟ್ ಸ್ಪಷ್ಟಪಡಿಸಿದೆ.  

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

ನನ್ನನ್ನು ಯಾರೂ ಅಲುಗಾಡಿಸಲು ಆಗೋದಿಲ್ಲ : ಸಿಎಂ ಖಡಕ್‌ ನುಡಿ
ಮೋದಿ ಜತೆ ಪ್ರಿಯಾಂಕಾ ಗಾಂಧಿ ಆತ್ಮೀಯ ಮಾತು!