
ವೆಲ್ಲಿಂಗ್ಟನ್(ಜೂ.21): ನ್ಯೂಜಿಲ್ಯಾಂಡ್ ಪ್ರಧಾನಿ ಜಸಿಂದಾ ಅರ್ಡೆರ್ನ್ ಹೆಣ್ಣು ಮಗುವಿಗೆ ಜನ್ಮ ನೀಡಿದ್ದು, ಅಧಿಕಾರದಲ್ಲಿರುವಾಗಲೇ ಮಗುವಿಗೆ ಜನ್ಮ ನೀಡಿದ ವಿಶ್ವದ ಎರಡನೇ ಪ್ರಧಾನಿಯಾಗಿದ್ದಾರೆ. ತಮ್ಮ ಮಗು ಹಾಗೂ ಪತ್ನಿಯೊಂದಿಗಿರುವ ಫೋಟೋವನ್ನು ಸಾಮಾಜಿಕ ಜಾಲತಾಣದಲ್ಲಿ ಅಪ್ಲೋಡ್ ಮಾಡಿದ್ದಾರೆ.
37ರ ಹರೆಯದ ಜಸಿಂದಾ ನ್ಯೂಜಿಲೆಂಡ್ ನ ಅತೀ ಕಿರಿಯ ಪ್ರಧಾನಿಯಾಗಿದ್ದು, ಕಳೆದ ವರ್ಷ ನಡೆದ ಚುನಾವಣೆಯಲ್ಲಿ ಮೈತ್ರಿ ಸರ್ಕಾರದ ಪ್ರಧಾನಿಯಾಗಿ ಆಯ್ಕೆಯಾಗಿದ್ದರು. ಈಗ ತಮ್ಮ ಮೊದಲ ಮಗುವಿಗೆ ಜನ್ಮ ನೀಡುವ ಮೂಲಕ ಅಧಿಕಾರವಧಿಯಲ್ಲಿ ತಾಯಿಯಾದ ನ್ಯೂಜಿಲ್ಯಾಂಡ್ ನ ಮೊದಲ ಪ್ರಧಾನಿ ಎಂಬ ಹೆಗ್ಗಳಿಕೆಗೆ ಪಾತ್ರರಾಗಿದ್ದಾರೆ.
ಪ್ರಸ್ತುತ ಜಸಿಂದಾ ಅರ್ಡೆರ್ನ್ ಆರು ವಾರಗಳ ಹೆರಿಗೆ ರಜೆಯಲ್ಲಿದ್ದು, ಇವರ ಕೆಲಸವನ್ನು ಉಪ ಪ್ರಧಾನಿ ವಿನ್ಸ್ಟನ್ ಪೀಠರ್ ನಿರ್ವಹಿಸುತ್ತಿದ್ದಾರೆ. ನ್ಯೂಜಿಲ್ಯಾಂಡ್‌ನ ಅತೀ ದೊಡ್ಡ ಸರ್ಕಾರಿ ಆಸ್ಪತ್ರೆ ಅಕ್ಲಂಡ್ ನಲ್ಲಿ ಹೆರಿಗೆಯಾಗಿದ್ದು, ಪತಿ ಟಿ.ವಿ ನಿರೂಪಕ ಕ್ಲಾರ್ಕ್ ಗೇಪೋರ್ಡ್ ಈ ಸಂದರ್ಭದಲ್ಲಿ ಅವರ ಜತೆಗಿದ್ದರು. ಈ ಹಿಂದೆ ಪಾಕ್ ಪ್ರಧಾನಿಯಾಗಿದ್ದ ಬೆನಜೀರ್ ಭುಟ್ಟೋ 1990ರಲ್ಲಿ ತಮ್ಮ ಅಧಿಕಾವಧಿಯಲ್ಲಿ ತಾಯಿಯಾಗಿದ್ದರು.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.