ಶೆಟ್ಟರ್‌ ಫೋನ್‌ ಮಾಡಿ ಆಮಿಷ ಒಡ್ಡಿದರು : JDS ಶಾಸಕ

Published : Jul 22, 2019, 09:14 AM IST
ಶೆಟ್ಟರ್‌ ಫೋನ್‌ ಮಾಡಿ ಆಮಿಷ ಒಡ್ಡಿದರು : JDS ಶಾಸಕ

ಸಾರಾಂಶ

ಬಿಜೆಪಿಗೆ ಬರುವಂತೆ ನನಗೆ ಶೆಟ್ಟರ್ ಫೋನ್ ಮಾಡಿ ಆಮಿಷ ಒಡ್ಡಿದ್ದರು ಎಂದು ಜೆಡಿಎಸ್ ಶಾಸಕರೋರ್ವರು ಹೇಳಿದ್ದಾರೆ. 

ಶಿರಾ [ಜು.22]: ಬಿಜೆಪಿ ನನ್ನನ್ನೂ ಖರೀದಿ ಮಾಡಲು ಯೋಜನೆ ಹಾಕಿಕೊಂಡಿತ್ತು ಎಂದು ಆರೋಪಿಸಿರುವ ರಾಜ್ಯ ರಸ್ತೆ ಸಾರಿಗೆ ನಿಗಮದ ಅಧ್ಯಕ್ಷ ಹಾಗೂ ಜೆಡಿಎಸ್‌ ಶಾಸಕ ಬಿ.ಸತ್ಯನಾರಾಯಣ ಮಾಜಿ ಮುಖ್ಯಮಂತ್ರಿ ಜಗದೀಶ್‌ ಶೆಟ್ಟರ್‌ ಕಡೆಗೆ ಬೊಟ್ಟು ಮಾಡಿದ್ದಾರೆ.

ಶನಿವಾರ ಪಟ್ಟಣದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಎರಡು ದಿನಗಳ ಹಿಂದೆ ಕರೆ ಮಾಡಿದ್ದ ಜಗದೀಶ್‌ ಶೆಟ್ಟರ್‌, ಜೆಡಿಎಸ್‌ ಪಕ್ಷದಲ್ಲಿ ಹಿರಿಯರಾಗಿರುವ ನಿಮ್ಮನ್ನು ಪಕ್ಷ ಕಡೆಗಣಿಸಿದೆ. ಪಕ್ಷ ಬಿಟ್ಟು ಬನ್ನಿ ನಿಮಗೆ ಮಂತ್ರಿ ಸ್ಥಾನ ನೀಡಿ ಪಕ್ಷದಲ್ಲಿ ಗೌರವಯುತವಾಗಿ ನಡೆಸಿಕೊಳ್ಳುತ್ತೇವೆ.

ಚುನಾವಣೆಗೆ ನಿಮಗೆ ಇಲ್ಲ ನಿಮ್ಮ ಮಗನಿಗೆ ಪಕ್ಷದಿಂದ ಟಿಕೆಟ್‌ ನೀಡಿ ಚುನಾವಣೆ ಖರ್ಚುಗಳನ್ನು ಭರಿಸುತ್ತೇವೆ ಎಂದು ಆಮಿಷ ಒಡ್ಡಿದ್ದಾರೆ. ಆದರೆ ನಾನು ಯಾವುದೇ ಕಾರಣಕ್ಕೂ ಜೆಡಿಎಸ್‌ ಪಕ್ಷ ತೊರೆಯುವ ಪ್ರಶ್ನೆಯೇ ಇಲ್ಲ ಎಂದು ತಿಳಿಸಿರುವುದಾಗಿ ಹೇಳಿದ್ದಾರೆ.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

ಒಂದೇ ಒಂದು ಪದದಿಂದ ಜನರ ಮನಸ್ಸನ್ನು ಬದಲಿಸಿದ Thalapathy Vijay; ಆಡಳಿತದಲ್ಲಿದ್ದ ಪಕ್ಷಕ್ಕೆ ಪೆಟ್ಟು ಕೊಟ್ಟ ನಟ
ತಮಿಳುನಾಡು ರಾಜಕೀಯದಲ್ಲಿ ಐತಿಹಾಸಿಕ ಬದಲಾವಣೆ, ಸನ್ ಟಿವಿ ಷೇರುಗಳು ದಿಢೀರ್ ಕುಸಿತ, ಕಾರಣವಾಗಿದ್ದು ಈ ಪಕ್ಷ!