ಜೈನ ಮುನಿ ತರುಣ ಸಾಗರ್ ವಿಧಿವಶ

Published : Sep 01, 2018, 08:22 AM ISTUpdated : Sep 09, 2018, 09:57 PM IST
ಜೈನ ಮುನಿ ತರುಣ ಸಾಗರ್ ವಿಧಿವಶ

ಸಾರಾಂಶ

ನಿರಂತರ ಆರೋಗ್ಯ ಸಮಸ್ಯೆಯಿಂದ ಬಳಲುತ್ತಿದ್ದ ಜೈನ ಮುನಿ ತರುಣ ಸಾಗರ್ ನಿಧನರಾಗಿದ್ದಾರೆ. 51 ವರ್ಷದ ತರುಣ ಸಾಗರ್ ಶನಿವಾರ ಬೆಳಗಿನ ಜಾವ 3 ಗಂಟೆ ಸುಮಾರಿಗೆ ಕೊನೆ ಉಸಿರೆಳೆದರು.

ನವದೆಹಲಿ[ಸೆ.01] ನವದೆಹಲಿಯ ಕೃಷ್ಣ ನಗರದ ರಾಧಾಪುರಿ ಜೈನ ಆಶ್ರಮದಲ್ಲಿ ಜೈನ ಮುನಿ ತರುಣ ಸಾಗರ್ ಕೊನೆ ಉಸಿರೆಳೆದರು. ಮುನಿಯ ಅಂತಿಮ ವಿಧಿ ವಿಧಾನಗಳು ಉತ್ತರ ಪ್ರದೇಶದ ತರುಣಸಾಗರಂ ನಲ್ಲಿ ನಡೆಯಲಿದೆ.

ಜೈನ ಸಮುದಾಯದಲ್ಲಿ ಅಪಾರ ಅನುಯಾಯಿಗಳನ್ನು ಹೊಂದಿರುವ ಮುನಿ ತರುಣ ಸಾಗರ್ ಜಾಂಡೀಸ್ ನಿಂದ ಬಳಲುತ್ತಿದ್ದರು. ಅನಾರೋಗ್ಯದ ಕಾರಣದಿಂದ ಖಾಸಗಿ ಆಸ್ಪತ್ರೆಯಲ್ಲಿ 20 ದಿನದಿಂದ ಚಿಕಿತ್ಸೆ ಪಡೆಯುತ್ತಿದ್ದರು.

1967 ರ ಜೂನ್ 26ರಂದು ಮಧ್ಯ ಪ್ರದೇಶದ ದಾಹೋಹ್ ಜಿಲ್ಲೆಯಲ್ಲಿ ಜನಿಸಿದ ಪವನ್ ಕುಮಾರ್ ಜೈನ್ 1981 ರಲ್ಲಿ ಸನ್ಯಾಸತ್ವ ಸ್ವೀಕರಿಸಿದ್ದರು. ತಮ್ಮ ಭಾಷಣಗಳ ಮೂಲಕವೇ ಅಪಾರ ಅಭಿಮಾನಿಗಳನ್ನು ಸಾಗರ್ ಗಳಿಸಿದ್ದರು.

PREV
click me!

Recommended Stories

ಥೈಲ್ಯಾಂಡ್‌ನಿಂದ ಚೀಲದಲ್ಲಿ 48 ವಿಷಕಾರಿ ಹಾವನ್ನು ತಂದ ಪ್ರಯಾಣಿಕ; ಇಲ್ಲಿವೆ ಫೋಟೋಗಳು
Bride Calls Off Wedding: ಮದುವೆ ಮಂಟಪದಲ್ಲೇ ವರನ ಅಸಲಿಯತ್ತು ಕಂಡುಹಿಡಿದ ವಧು! ಮದುವೆ ನಿಂತೋಯ್ತು!