ಜೈಪುರಕ್ಕೆ ಯುನೆಸ್ಕೋ ವಿಶ್ವ ಪಾರಂಪರಿಕ ತಾಣದ ಮಾನ್ಯತೆ| ಸಾಂಪ್ರದಾಯಿಕ ವಾಸ್ತುಶಿಲ್ಪಕ್ಕೆ ಹೆಸರಾದ ರಾಜಸ್ಥಾನ ರಾಜಧಾನಿ ಜೈಪುರ| ಯುನೆಸ್ಕೋ ವಿಶ್ವ ಪಾರಂಪರಿಕ ಸಮಿತಿಯ 43ನೇ ಅಧಿವೇಶನ| ಯುನೆಸ್ಕೋ ನಿರ್ಧಾರಕ್ಕೆ ಸಂತಸ ವ್ಯಕ್ತಪಿಸಿದ ಪ್ರಧಾನಿ ಮೋದಿ|
ಜೈಪುರ್(ಜು.06): ರಾಜಸ್ಥಾನ ರಾಜಧಾನಿ ಜೈಪುರಕ್ಕೆ ಯುನೆಸ್ಕೋ ವಿಶ್ವ ಪಾರಂಪರಿಕ ತಾಣದ ಮಾನ್ಯತೆ ದೊರಕಿದೆ.
🔴 BREAKING
Just inscribed as Site: Jaipur City in Rajasthan, 🇮🇳. Bravo 👏
ℹ️ https://t.co/thV0mwrj0X pic.twitter.com/NU4W32dy3x
ಈ ಕುರಿತು ಟ್ವೀಟ್ ಮಾಡಿರುವ ಯುನೆಸ್ಕೋ, ಸಾಂಪ್ರದಾಯಿಕ ವಾಸ್ತುಶಿಲ್ಪಕ್ಕೆ ಹೆಸರಾದ ಜೈಪುರವನ್ನು ಸೇರಿಸಲಾಗಿದೆ ಎಂದು ಸ್ಪಷ್ಟಪಡಿಸಿದೆ.
ಬಾಕುವಿನಲ್ಲಿ ನಡೆಯುತ್ತಿರುವ ಯುನೆಸ್ಕೋ ವಿಶ್ವ ಪಾರಂಪರಿಕ ಸಮಿತಿಯ 43ನೇ ಅಧಿವೇಶನದಲ್ಲಿ, ಜೈಪುರಕ್ಕೆ ವಿಶ್ವ ಪಾರಂಪರಿಕ ಸ್ಥಾನ ನೀಡುವ ನಿರ್ಣಯ ಕೈಗೊಳ್ಳಲಾಗಿದೆ.
Jaipur is a city associated with culture and valour. Elegant and energetic, Jaipur’s hospitality draws people from all over.
Glad that this city has been inscribed as a World Heritage Site by . https://t.co/1PIX4YjAC4
ಜೈಪುರ ನಗರ ವಿಶ್ವ ಪಾರಂಪರಿಕಾ ಪಟ್ಟಿಗೆ ಸೇರ್ಪಡೆಯಾಗಿರುವುದಕ್ಕೆ ಪ್ರಧಾನಿ ನರೇಂದ್ರ ಮೋದಿ ಸಂತಸ ವ್ಯಕ್ತಪಡಿಸಿದ್ದು, ಜೈಪುರ ಸಂಸ್ಕೃತಿ ಮತ್ತು ಶೌರ್ಯಕ್ಕೆ ಸಂಬಂಧಿಸಿದ ನಗರವಾಗಿದೆ. ಈ ನಗರವನ್ನು ಯುನೆಸ್ಕೋ ವಿಶ್ವ ಪರಂಪರೆಯ ತಾಣ ಪಟ್ಟಿಗೆ ಸೇರಿಸಿರುವುದರಿಂದ ಸಂತೋಷವಾಗಿದೆ..ಎಂದು ಟ್ವೀಟ್ ಮಾಡಿದ್ದಾರೆ.