ಹಿಮಾಚಲ ಪ್ರದೇಶ ಸಿಎಂ ಆಗಿ ಜೈರಾಂ ಠಾಕೂರ್ ನಾಳೆ ಪ್ರಮಾಣ ವಚನ

Published : Dec 26, 2017, 04:49 PM ISTUpdated : Apr 11, 2018, 01:10 PM IST
ಹಿಮಾಚಲ ಪ್ರದೇಶ ಸಿಎಂ ಆಗಿ ಜೈರಾಂ ಠಾಕೂರ್ ನಾಳೆ ಪ್ರಮಾಣ ವಚನ

ಸಾರಾಂಶ

ಹಿಮಾಚಲ ಪ್ರದೇಶದ ನೂತನ ಮುಖ್ಯಮಂತ್ರಿಯಾಗಿ ಬಿಜೆಪಿಯ ಜೈರಾಂ ಠಾಕೂರ್ ನಾಳೆ ಪ್ರಮಾಣವಚನ ಸ್ವೀಕರಿಸಲಿದ್ದಾರೆ.

ಶಿಮ್ಲಾ (ಡಿ.26): ಹಿಮಾಚಲ ಪ್ರದೇಶದ  ನೂತನ ಮುಖ್ಯಮಂತ್ರಿಯಾಗಿ ಬಿಜೆಪಿಯ ಜೈರಾಂ ಠಾಕೂರ್ ನಾಳೆ ಪ್ರಮಾಣವಚನ ಸ್ವೀಕರಿಸಲಿದ್ದಾರೆ.

ಹಿಮಾಚಲ ಪ್ರದೇಶದ 6 ನೇ ಮುಖ್ಯಮಂತ್ರಿಯಾಗಿ 52 ವರ್ಷದ ಜೈರಾಂ ಠಾಕೂರ್ ಅಧಿಕಾರದ ಚುಕ್ಕಾಣಿ ಹಿಡಿಯಲಿದ್ದಾರೆ. ಶಿಮ್ಲಾದ ಐತಿಹಾಸಿಕ ರಿಡ್ಜ್ ಗ್ರೌಂಡ್​​ನಲ್ಲಿ ಪದಗ್ರಹಣ ಸಮಾರಂಭ ನಡೆಯಲಿದ್ದು, ಈ ಪ್ರಮಾಣವಚನ ಕಾರ್ಯಕ್ರಮಕ್ಕೆ ಪ್ರಧಾನಿ ನರೇಂದ್ರ ಮೋದಿ ಸೇರಿದಂತೆ ಅನೇಕ ಬಿಜೆಪಿ ನಾಯಕರು ಭಾಗವಹಿಸಲಿದ್ದಾರೆ. ಮಂಡಿಯ ಸೆರಾಜ್​​​'ನಿಂದ ಐದು ಬಾರಿ ಬಿಜೆಪಿ ಎಂಎಲ್ಎಯಾಗಿ ಆಯ್ಕೆಯಾಗಿರೋ ಠಾಕೂರ್  ಹಿಮಾಚಲ ಪ್ರದೇಶ ಆಡಳಿತ ಚುಕ್ಕಾಣಿ ಹಿಡಿಯಲಿದ್ದಾರೆ. ಈ ಹಿಂದೆ 2007 ರಲ್ಲಿ ಪ್ರೇಮ್ ಕುಮಾರ್ ದೋಮಲ್ ಕ್ಯಾಬಿನೆಟ್​'ನಲ್ಲಿ ಪಂಚಾಯತ್ ರಾಜ್ ಮತ್ತು ಗ್ರಾಮೀಣ ಅಭಿವೃದ್ಧಿ ಖಾತೆ ಮಂತ್ರಿಯಾಗಿ ಕಾರ್ಯ ನಿರ್ವಹಿಸಿದ್ದರು.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

ರಾಜಕೀಯ ಸೇಡಿಗಾಗಿ ದ್ವೇಷ ಭಾಷಣ ಕಾಯ್ದೆ ಜಾರಿ: ಮಾಜಿ ಐಪಿಎಸ್‌ ಅಧಿಕಾರಿ ಭಾಸ್ಕರ್‌ ರಾವ್‌ ಲೇಖನ
ವಾಕ್‌ ಸ್ವಾತಂತ್ರ್ಯಕ್ಕೆ ದ್ವೇಷ ಭಾಷಣ ವಿಧೇಯಕ ವಿರುದ್ಧವಾಗಿಲ್ಲ: ವಿ.ಗೋಪಾಲ ಗೌಡ ಲೇಖನ