ಜಮ್ಮು ಕಾಶ್ಮೀರ ವಿಂಗಡನೆ: ಕಾನೂನು, ಭದ್ರತೆ ಕೇಂದ್ರಕ್ಕೆ, ಭೂಮಿ ಸರ್ಕಾರದ ವ್ಯಾಪ್ತಿಗೆ

Published : Aug 12, 2019, 11:52 AM IST
ಜಮ್ಮು ಕಾಶ್ಮೀರ ವಿಂಗಡನೆ: ಕಾನೂನು, ಭದ್ರತೆ ಕೇಂದ್ರಕ್ಕೆ, ಭೂಮಿ ಸರ್ಕಾರದ ವ್ಯಾಪ್ತಿಗೆ

ಸಾರಾಂಶ

ಜಮ್ಮು- ಕಾಶ್ಮೀರ ವಿಂಗಡನೆ: ಕಾನೂನು, ಭದ್ರತೆ ಕೇಂದ್ರಕ್ಕೆ, ಭೂಮಿ ಸರ್ಕಾರದ ವ್ಯಾಪ್ತಿಗೆ| ಜಮ್ಮು ಕಾಶ್ಮೀರ ಕೇಂದ್ರಾಡಳಿತ ಪ್ರದೇಶ ಅ.31ರಿಂದ ಅಸ್ತಿತ್ವಕ್ಕೆ

ನವದೆಹಲಿ[ಆ.12]: ಜಮ್ಮು- ಕಾಶ್ಮೀರ ಜಮ್ಮು- ಕಾಶ್ಮೀರ ಕೇಂದ್ರಾಡಳಿತ ಪ್ರದೇಶ ವಿಂಗಡನೆ ಬಳಿಕ ಕಾನೂನು ಸುವ್ಯವಸ್ಥೆ ಹಾಗೂ ಪೊಲೀಸ್‌ ವ್ಯವಸ್ಥೆ ಉಪ ರಾಜ್ಯಪಾಲರ ಮೂಲಕ ಕೇಂದ್ರ ಸರ್ಕಾರದ ನೇರ ಹಿಡಿತಕ್ಕೆ ಒಳಪಡಲಿದೆ. ಭೂಮಿಯ ಮೇಲಿನ ಹಕ್ಕು, ಆಯ್ಕೆಯಾದ ರಾಜ್ಯ ಸರ್ಕಾರದ ಅಧೀನಕ್ಕೆ ಒಳಪಡಲಿದೆ.

ಜಮ್ಮು ಮತ್ತು ಕಾಶ್ಮೀರ ರಾಜ್ಯವನ್ನು ಜಮ್ಮು- ಕಾಶ್ಮೀರ ಮತ್ತು ಲಡಾಕ್‌ ಕೇಂದ್ರಾಡಳಿತ ಪ್ರದೇಶವನ್ನಾಗಿ ವಿಂಗಡಿಸುವ ವಿಧೇಯಕಕ್ಕೆ ರಾಷ್ಟ್ರಪತಿ ರಾಮನಾಥ್‌ ಕೋವಿಂದ್‌ ಅವರು ಶುಕ್ರವಾರ ಸಹಿ ಹಾಕಿದ್ದು, ಅ.31ರಿಂದ ಅಧಿಕೃತವಾಗಿ ಜಾರಿಗೆ ಬರಲಿದೆ.

ದೆಹಲಿ ಉಪರಾಜ್ಯಪಾಲರಂತೆ ಅಲ್ಲದೇ ಭೂಮಿಯ ಮಾರಾಟ, ವರ್ಗಾವಣೆ, ಕೃಷಿ ಭೂಮಿಯ ಪರಿವರ್ತನೆ, ಭೂ ಸುಧಾರಣೆ, ಕೃಷಿ ಸಾಲ, ಭೂ ಕಂದಾಯ ಸೇರಿದಂತೆ ಭೂಮಿಗೆ ಸಂಬಂಧಿಸಿದ ಎಲ್ಲಾ ಹಕ್ಕುಗಳು ನೂತನವಾಗಿ ಆಯ್ಕೆ ಆಗುವ ಜಮ್ಮು- ಕಾಶ್ಮೀರ ಕೇಂದ್ರಾಡಳಿತ ಪ್ರದೇಶದ ವ್ಯಾಪ್ತಿಗೆ ಒಳಪಡಲಿದೆ.

ಜಮ್ಮು- ಕಾಶ್ಮೀರ ಕೇಂದ್ರಾಡಳಿತ ಪ್ರದೇಶ ಉಪರಾಜ್ಯಪಾಲರೊಬ್ಬರನ್ನು ಹೊಂದಿರಲಿದ್ದು, ವಿಧಾನಸಭೆ ಗರಿಷ್ಠ 107 ಸದಸ್ಯರನ್ನು ಹೊಂದಿರಲಿದೆ. ಗಡಿ ನಿರ್ಧಾರದ ಬಳಿಕ ವಿಧಾನಸಭೆಯ ಬಲವನ್ನು 114ಕ್ಕೆ ಏರಿಸಲು ಅವಕಾಶವಿದೆ. ಪಾಕ್‌ ಆಕ್ರಮಿತ ಕಾಶ್ಮೀರದ ವ್ಯಾಪ್ತಿಯಲ್ಲಿ ಬರುವ 24 ವಿಧಾನಸಭಾ ಕ್ಷೇತ್ರಗಳು ಖಾಲಿ ಉಳಿಯಲಿವೆ.

ಅಖಿಲ ಭಾರತ ಸೇವೆಗಳಾದ ಐಎಎಸ್‌, ಐಪಿಎಸ್‌, ಭ್ರಷ್ಟಾಚಾರ ನಿಗ್ರಹ ದಳ (ಎಸಿಬಿ) ಉಪ ರಾಜ್ಯಪಾಲರ ವ್ಯಾಪ್ತಿಗೆ ಒಳಪಡಲಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

ದಯಮಾಡಿ ಅರ್ಥ ಮಾಡಿಕೊಳ್ಳಿ ತಪ್ಪು ತಿಳಿಯಬೇಡಿ: ಸೋದರನ ಪೋಸ್ಟ್‌ಗೆ ಹೆಬ್ಬಾಳ್ಕರ್ ಪ್ರತಿಕ್ರಿಯೆ
25 ಜನರ ಬಲಿ ಪಡೆದ ಗೋವಾ ಕ್ಲಬ್ ಬೆಂಕಿ ದುರಂತ ಸಂಭವಿಸಿದ ಕೆಲ ಗಂಟೆಗಳಲ್ಲೇ ಥೈಲ್ಯಾಂಡ್‌ಗೆ ಹಾರಿದ ಕ್ಲಬ್ ಮಾಲೀಕ