ಲೋಕಸಭಾ ಚುನಾವಣೆ ಇನ್ನೇನು ಸಮೀಪಿಸುತ್ತಿದ್ದು ಇದೇ ವೇಳೆ ಕಮಲ ಅರಳಿರುವುದು ಬಿಜೆಪಿ ಪಾಳಯದಲ್ಲಿ ಹರ್ಷವನ್ನುಂಟು ಮಾಡಿದೆ.
ಶ್ರೀನಗರ : ಜಮ್ಮು ಕಾಶ್ಮೀರದಲ್ಲಿ ಇತ್ತೀಚೆಗೆ ನಡೆದ ಸ್ಥಳೀಯ ಸಂಸ್ಥೆ ಚುನಾವಣೆಯಲ್ಲಿ ಬಿಜೆಪಿ ಭರ್ಜರಿ ಗೆಲುವು ದಾಖಲಿಸಿದೆ. ಇನ್ನೇನು ಲೋಕಸಭಾ ಚುನಾವಣೆ ಸಮೀಪಿಸುತ್ತಿದ್ದು ಇದೇ ಹೊಸ್ತಿಲಲ್ಲಿ ಬಿಜೆಪಿಗೆ ಇದೊಂದು ಸಿಹಿ ಸುದ್ದಿಯೆ ಆಗಿದೆ.
ಇದೇ ತಿಂಗಳಲ್ಲಿ ನಡೆದ ಚುನಾವಣೆಯ ಫಲಿತಾಂಶ ಇಂದು ಪ್ರಕಟವಾಗಿದ್ದು ನಾಲ್ಕು ಜಿಲ್ಲೆಗಳ 132 ಸ್ಥಾನಗಳಲ್ಲಿ 53 ಸ್ಥಾನಗಳಲ್ಲಿ ಗೆಲುವು ಸಾಧಿಸಿದೆ.
ಅನಂತ್ ನಾಗ್, ಕುಲ್ಗಾಮ್, ಶೋಪಿಯಾನ್, ಪುಲ್ವಾಮದಲ್ಲಿ ಬಿಜೆಪಿ ಜಯವನ್ನು ತನ್ನದಾಗಿಸಿಕೊಂಡಿದೆ.
ದಕ್ಷಿಣ ಕಾಶ್ಮೀರದ 94 ವಾರ್ಡ್ ಗಳ ಫಲಿತಾಂಶ ಪ್ರಕಟವಾಗಿದ್ದು 28 ಸ್ಥಾನಗಳಲ್ಲಿ ಕಾಂಗ್ರೆಸ್ ಗೆದ್ದಿದೆ. ಇನ್ನು ಶೋಪಿಯಾನ್ ಜಿಲ್ಲೆಯ 12 ವಾರ್ಡ್ ಗಳಲ್ಲಿ ಬಿಜೆಪಿ ಅಭ್ಯರ್ಥಿ ಅವಿರೋಧವಾಗಿ ಆಯ್ಕೆಯಾಗಿದ್ದಾರೆ.