
ಗುಜರಾತ್ (ಡಿ.06): ಗುಜರಾತ್ ವಿಧಾನಸಭಾ ಚುನಾವಣೆ ಭಾರೀ ಕುತೂಹಲ ಮೂಡಿಸಿದೆ. ಕಾಂಗ್ರೆಸ್ ಹಾಗೂ ಬಿಜೆಪಿಗೆ ಪ್ರತಿಷ್ಠೆಯ ಕಣವಾಗಿದೆ.
ಚುನಾವಣೆಗೆ ಇನ್ನು ಮೂರು ದಿನಗಳು ಮಾತ್ರ ಬಾಕಿ ಉಳಿದಿದ್ದು ಯಾರು ಅಧಿಕಾರಕ್ಕೆ ಬರಬಹುದು ಎಂದು ಸುವರ್ಣ ನ್ಯೂಸ್ ಸಹೋದರ ಸಂಸ್ಥೆಯಾದ ರಿಬಬ್ಲಿಕ್ ಟಿವಿ ನಡೆಸಿದ ಜನ್ ಕಿ ಬಾತ್ ಚುನಾವಣಾ ಪೂರ್ವ ಸಮೀಕ್ಷೆಯಲ್ಲಿ ಬಿಜೆಪಿ ಮತ್ತೊಮ್ಮೆ ಅಧಿಕಾರಕ್ಕೆ ಬರುವುದು ಖಚಿತವಾಗಿದೆ. ಒಟ್ಟು 182 ವಿಧಾನಸಭಾ ಕ್ಷೇತ್ರದಲ್ಲಿ 110-125 ಸ್ಥಾನಗಳನ್ನು ಬಿಜೆಪಿ ಗೆಲ್ಲುವ ನಿರೀಕ್ಷೆಯಿದೆ. ಕಾಂಗ್ರೆಸ್ 53-68 ಸ್ಥಾನಗಳನ್ನು ಗೆಲ್ಲಬಹುದು ಎಂದು ಅಂದಾಜಿಸಲಾಗಿದೆ. ಸೌರಾಷ್ಟ್ರ ಹಾಗೂ ಕಚ್ ಭಾಗದಲ್ಲಿ ಒಟ್ಟು 54 ಸ್ಥಾನಗಳಲ್ಲಿ 37 ಸ್ಥಾನಗಳನ್ನು ಬಿಜೆಪಿ ಗೆಲ್ಲುವ ಸಾಧ್ಯತೆಯಿದೆ. ಮಧ್ಯ ಗುಜರಾತ್'ನಲ್ಲೂ ಕೂಡಾ ಬಿಜೆಪಿ ಮುಂಚೂಣಿ ಸಾಧಿಸಿದೆ. 23 ಸ್ಥಾನಗಳಲ್ಲಿ 16 ಸ್ಥಾನಗಳಲ್ಲಿ ಜಯಭೇರಿ ಬಾರಿಸುವ ನಿರೀಕ್ಷೆಯಿದೆ.
ಉತ್ತರ ಗುಜರಾತ್ ಭಾಗದಲ್ಲಿ ಕಾಂಗ್ರೆಸ್-ಬಿಜೆಪಿ ನಡುವೆ ಫೈಟ್ ಇದ್ದು 53 ಸ್ಥಾನಗಳಲ್ಲಿ 28 ಸ್ಥಾನಗಳನ್ನು ಗೆಲ್ಲಬಹುದು ಎಂದು ಸಮೀಕ್ಷೆ ಹೇಳುತ್ತದೆ.
ಗುಜರಾತ್ ವಿಧಾನಸಭಾ ಚುನಾವಣೆ ಡಿ. 09 ಹಾಗೂ ಡಿ. 14 ರಂದು ಎರಡು ಹಂತಗಳಲ್ಲಿ ನಡೆಯಲಿದ್ದು, ಡಿ. 18 ರಂದು ಅಂತಿಮ ಫಲಿತಾಂಶ ಹೊರ ಬೀಳಲಿದೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.