ಮತದಾರರ ಪಟ್ಟಿಯಲ್ಲಿ ನಿಮ್ಮ ಹೆಸರಿಲ್ವಾ? ಈಗ ಸೇರಿಸಿ

By Web DeskFirst Published Oct 11, 2018, 1:38 PM IST
Highlights

ಮತದಾರರ ಪಟ್ಟಿಯಲ್ಲಿ ನಿಮ್ಮ ಹೆಸರಿಲ್ವಾ?  ಈಗ ಸೇರಿಸಿ. 

ಬೆಂಗಳೂರು, ಅ.11: ಮತದಾರರ ಪಟ್ಟಿಯಲ್ಲಿ ಹೆಸರು ಸೇರಿಸಲು. ಹೆಸರು ತಿದ್ದುಪಡಿ ಮಾಡಲು ರಾಜ್ಯ ಚುನಾವಣೆ ಆಯೋಗ ಕಾಲಾವಕಾಶ ನೀಡಿದೆ.

ಬುಧವಾರ ಪತ್ರಿಕಾಗೋಷ್ಠಿ ಉದ್ದೇಶಿಸಿ ಮಾತನಾಡಿದ  ರಾಜ್ಯದ ಮುಖ್ಯ ಚುನಾವಣಾಧಿಕಾರಿ ಸಂಜೀವ್ ಕುಮಾರ್ ಅವರು,  ಮುಂಬರುವ ಸಾರ್ವತ್ರಿಕ ಲೋಕಸಭಾ ಚುನಾವಣೆಗೆ ಮತದಾರರ ಪಟ್ಟಿ ಪರಿಷ್ಕರಣೆಯ ಕಾರ್ಯ ನಡೆಯುತ್ತಿದೆ.  

2019ರ ಜನವರಿ 3ರವರೆಗೆ ಮತದಾರರ ಪಟ್ಟಿಗೆ ಹೆಸರು ಸೇರಿಸುವ ಅವಕಾಶ ನೀಡಲಾಗಿದೆ. ಈಗಿರುವ ಮತದಾರರ ಪಟ್ಟಿಯಲ್ಲಿನ ಹೆಸರು ತಿದ್ದುಪಡಿಗೆ ಅಕ್ಟೋಬರ್ 10ರಿಂದ ನವೆಂಬರ್ 10ರವರೆಗೆ ಅರ್ಜಿ ಸಲ್ಲಿಸಬಹುದು. ಇನ್ನು  ಯಾವುದೇ ಆಕ್ಷೇಪಣೆಗಳಿದ್ದಲ್ಲಿ ನ.20ರೊಳಗೆ ಸಲ್ಲಿಸಬೇಕು. ಎಂದು ತಿಳಿಸಿದ್ದಾರೆ.

 2019ರ ಜ.3ರವರೆಗೆ ಮತದಾರರ ಪಟ್ಟಿಗೆ ಹೆಸರು ಸೇರಿಸುವ ಕೆಲಸ ಮಾಡಲಾಗುತ್ತದೆ. ಜ.4ಕ್ಕೆ ಅಂತಿಮ ಮತದಾರರ ಪಟ್ಟಿಪ್ರಕಟಿಸಲು ನಿರ್ಧರಿಸಲಾಗಿದೆ ಎಂದರು.

ಮತದಾರರ ಪಟ್ಟಿಪರಿಷ್ಕರಣೆ ನಡೆಸಿದ ಸಂದರ್ಭದಲ್ಲಿ ನಕಲಿ, ಮರಣ ಹೊಂದಿದ, ವಿಳಾಸ ಬದಲಿಸಿರುವುದು ಸೇರಿದಂತೆ ಇತರೆ ಕಾರಣಗಳಿಂದಾಗಿ 3,50,479 ಮತದಾರರನ್ನು ಪಟ್ಟಿಯನ್ನು ಕೈಬಿಡಲಾಗಿದೆ. ಹೀಗಾಗಿ 5.03 ಕೋಟಿ ಮತದಾರರು ಕರಡು ಪಟ್ಟಿಯಲ್ಲಿದ್ದಾರೆ ಎಂದು ಹೇಳಿದರು.
 

click me!