
ಬೆಳಗಾವಿ (ಮಾ.04): ಗೋಕಾಕ್ ಸಾಹುಕಾರರಂದೇ ಪ್ರಖ್ಯಾತಿ ಪಡೆದಿರುವ ಸತೀಶ್ ಜಾರಕಿಹೊಳಿ ಮತ್ತು ರಮೇಶ್ ಜಾರಕಿಹೊಳಿ ನಡುವಿನ ಮುಸುಕಿನ ಗುದ್ದಾಟ ಸದ್ಯಕ್ಕೆ ನಿಲ್ಲುವ ಲಕ್ಷಣ ಕಾಣುತ್ತಿಲ್ಲ. ಒಬ್ಬರ ವಿರುದ್ಧ ಒಬ್ಬರು ಕತ್ತಿ ಮಸೆಯುತ್ತಲೇ ಇದ್ದಾರೆ.
ಇತ್ತೀಚಿಗೆ ಇವರಿಬ್ಬರ ಪ್ರತಿಷ್ಠೆಯಿಂದ ಬೆಳಗಾವಿ ಮಹಾನಗರ ಪಾಲಿಕೆಯ ಅಧಿಕಾರ ಕನ್ನಡಿಗರ ಕೈತಪ್ಪಿತ್ತು. ಇದೀಗ ರಮೇಶ್ ಜಾರಕಿಹೊಳಿ, ಸತೀಶ್ ಜಾರಕಿಹೊಳಿಯನ್ನು ಕ್ಷೇತ್ರದಿಂದಲೇ ಎತ್ತಂಗಡಿ ಮಾಡಲು ಮಾಸ್ಟರ್ ಪ್ಲಾನ್ ಮಾಡಿದ್ದಾರೆ. ಹೌದು. ಸತೀಶ್ ಜಾರಕಿಹೊಳಿ ಸ್ಪರ್ಧಿಸುತ್ತಿದ್ದ ಯಮಕರನಮರಡಿ ಕ್ಷೇತ್ರದಿಂದ ಮತ್ತೊಬ್ಬ ಸಹೋದರನನ್ನು ಕಣಕ್ಕಿಳಿಸಲು ಸಚಿವ ರಮೇಶ್ ಜಾರಕಿಹೊಳಿ ಸಿದ್ಧತೆ ನಡೆಸಿದ್ದಾರೆ. ಸಂಪುಟದಿಂದ ಕೈ ಬಿಟ್ಟ ನಂತ ಸತೀಶ್ ಜಾರಕಿಹೊಳಿ ಕಾಂಗ್ರೆಸ್ ತೊರೆಯುತ್ತಾರೆಂಬ ಸುದ್ದಿ ಹರಡಿತ್ತು. ಇಷ್ಟೇ ಅಲ್ಲದೆ ಇತ್ತೀಚಿಗೆ ಸಚಿವ ರಮೇಶ್ ಜಾರಕಿಹೊಳಿ ಮನೆ ಮೇಲೆ ನಡೆದ ಐಟಿ ದಾಳಿಯ ಹಿಂದೆ ಸತೀಶ್ ಜಾರಕಿಹೊಳಿ ಕೈವಾಡವಿದೆ ಎಂಬ ಮಾತು ಕೂಡ ಕೇಳಿಬಂದಿತ್ತು. ಇದರಿಂದ ಒಳಗೊಳಗೆ ಕೈಕೈ ಇಸುಕಿಕೊಳ್ಳುತ್ತಿದ್ದ ರಮೇಶ್ ಜಾರಕಿಹೊಳಿ ಸರಿಯಾದ ಪೆಟ್ಟು ನೀಡಲು ಮುಂದಾಗಿದ್ದಾರೆ. ರಮೇಶ್ ಜಾರಕಿಹೊಳಿ ತಮ್ಮ ಮತ್ತೊಬ್ಬ ಸಹೋದರನಾದ ಲಖನ್ ಜಾರಕಿಹೊಳಿಗೆ ಯಮಕನಮರಡಿ ಕ್ಷೇತ್ರದಿಂದ ಕಾಂಗ್ರೆಸ್ ಟಿಕೆಟ್ ಕೊಡಿಸಲು ಪ್ಲಾನ್ ಮಾಡಿದ್ದಾರೆ. ಆದ್ರೆ ಆ ಕ್ಷೇತ್ರದಲ್ಲಿ ಸ್ಪರ್ಧಿಸುತ್ತಿದ್ದ ಸತೀಶ್ ಜಾರಕಿಹೊಳಿ ರಾಯಚೂರು ಗ್ರಾಮಾಂತರ ಕ್ಷೇತ್ರದಲ್ಲಿ ನಿಲ್ಲುತ್ತಾರೆ ಎಂದು ರಮೇಶ್ ಜಾರಕಿಹೊಳಿ ಹೇಳಿಕೆ ನೀಡಿದ್ದಾರೆ. ಅಲ್ಲದೇ ಸತೀಶ್ ಜಾರಕಿಹೊಳಿ ರಾಯಚೂರಲ್ಲಿ ಮನೆಯನ್ನೂ ಕಟ್ಟಿಸುತ್ತಿದ್ದಾರೆ ಅಂತಲೂ ಹೇಳಲಾಗುತ್ತಿದೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.