
ಯಮಕನಮರಡಿ ಎಸ್‌ಟಿ ಮೀಸಲು ಕ್ಷೇತ್ರ. ಪ್ರಭಾವಿ ರಾಜಕೀಯ ಮುಖಂಡ, ಎಐಸಿಸಿ ಕಾರ್ಯದರ್ಶಿ ಸತೀಶ ಜಾರಕಿಹೊಳಿ ಈ ಕ್ಷೇತ್ರ ಪ್ರತಿನಿಧಿಸುತ್ತಿದ್ದಾರೆ. ಪಕ್ಷ ತೊರೆಯುವುದಿಲ್ಲ ಎಂದು ಸತೀಶ್ ಜಾರಕಿಹೊಳಿ ಅವರು ಪದೇಪದೇ ಹೇಳಿದರೂ ಪಕ್ಷ ತೊರೆವ ವದಂತಿಗಳು ಮಾತ್ರ ಇನ್ನೂ ನಿಂತಿಲ್ಲ.
ಈ ನಡುವೆ, ಅವರ ವಿರುದ್ಧ ಸಹೋದರ, ಉದ್ಯಮಿ ಲಖನ್ ಜಾರಕಿಹೊಳಿ ಅವರು ಕಾಂಗ್ರೆಸ್ಸಿನಿಂದ ಕಣಕ್ಕಿಳಿಯುವ ಇಂಗಿತ ವ್ಯಕ್ತಪಡಿಸಿದ್ದಾರೆ. ಈ ವಿಚಾರವಾಗಿ ಜಾರಕಿಹೊಳಿ ಸಹೋದರರ ನಡುವೆ ವಾಕ್ಸಮರವೂ ನಡೆದಿದೆ. ಕಳೆದ ಬಾರಿಯ ಚುನಾವಣೆಯಲ್ಲಿ ಪರಾಭವಗೊಂಡಿದ್ದ ಮಾರುತಿ ಅಷ್ಟಗಿ ಅವರೇ ಬಿಜೆಪಿಯಿಂದ ಅಭ್ಯರ್ಥಿಯಾಗಿ ಈ ಬಾರಿ ಕಣಕ್ಕಿಳಿಯುವ ಸಾಧ್ಯತೆ ಇದೆ. ಒಂದು ವೇಳೆ ಸತೀಶ್ ಜಾರಕಿಹೊಳಿ ಕಾಂಗ್ರೆಸ್ಸಿಂದ ಕಣಕ್ಕಿಳಿದಲ್ಲಿ ಅವರ ವಿರುದ್ಧ ಲಖನ್ ಜಾರಕಿಹೊಳಿ ಅವರು ಜೆಡಿಎಸ್ ಅಥವಾ ಬಿಜೆಪಿಯತ್ತ ಮುಖ ಮಾಡುವ ಸಾಧ್ಯತೆಯನ್ನು ತಳ್ಳಿಹಾಕುವಂತಿಲ್ಲ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.